Namma Metro: ಮಾಗಡಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಬೆಂಗಳೂರು, ಜೂನ್. 11: ಸೋಮವಾರ ರಾತ್ರಿ ನೈರುತ್ಯ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಯುವಕನ ತಲೆಗೆ ಗಾಯವಾಗಿದ್ದು, ಘಟನೆಯಿಂದಾಗಿ ನೇರಳೆ ಮಾರ್ಗದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು.
ನೇರಳ ಮಾರ್ಗದ ಮಾಗಡಿ ರಸ್ತೆಯ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರಾತ್ರಿ 8.56ಕ್ಕೆ ಈ ಘಟನೆ ನಡೆದಿದೆ. ವ್ಯಕ್ತಿಯನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಹೇಳಿಕೆಯಲ್ಲಿ ತಿಳಿಸಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸಾಗರ್ ಎಂದು ಗುರುತಿಸಲಾಗಿದ್ದು, 30ರ ವರ್ಷದ ಸಾಗರ್ ಬೆಂಗಳೂರು ಮೂಲದವನು. ಮೆಟ್ರೋ ನಿಲ್ದಾಣದಲ್ಲಿದ್ದ ಅವರು ಹಳಿಗಳ ಮಧ್ಯಕ್ಕೆ ಹಾರಿ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದಿದ್ದಾರೆ. "ಅವರಿಗೆ ಪ್ರಜ್ಞೆ ಇದ್ದು, ತಲೆಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ಸೇರಿಸುವುದು ನಮ್ಮ ಆದ್ಯತೆಯಾಗಿದೆ" ಎಂದು ಬಿಎಂಆರ್‌ಸಿಎಲ್‌ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿಎಲ್ ಯಶವಂತ ಚವಾಣ್ ಅವರು ಡೆಕ್ಕನ್ ಹೆರಾಲ್ಡ್‌ಗೆ ತಿಳಿಸಿದ್ದಾರೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸಾಗರ್
ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಸಾಗರ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಎಸ್ ಗಿರೀಶ್ ಹೇಳಿದ್ದಾರೆ. "ಅವರ ತಲೆಗೆ ಸಣ್ಣ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.
ಘಟನೆಯ ನಂತರ, ಬಿಎಂಆರ್‌ಸಿಎಲ್ ಆರು ಮೆಟ್ರೋ ನಿಲ್ದಾಣಗಳಾದ ಕೆಎಸ್‌ಆರ್ ಬೆಂಗಳೂರು, ಮಾಗಡಿ ರಸ್ತೆ, ಹೊಸಹಳ್ಳಿ, ವಿಜಯನಗರ, ಅತ್ತಿಗುಪ್ಪೆ ಮತ್ತು ದೀಪಾಂಜಲಿ ನಗರದಲ್ಲಿ 30 ನಿಮಿಷಗಳ ಕಾಲ ರೈಲು ಸೇವೆಯನ್ನು ಸ್ಥಗಿತಗೊಳಿಸಿತು.
ಘಟನೆ ನಡೆದ ಅವಧಿಯಲ್ಲಿ ರೈಲುಗಳು ಮೈಸೂರು ರಸ್ತೆ ಮತ್ತು ಚಲ್ಲಘಟ್ಟ, ಮತ್ತು ಮೆಜೆಸ್ಟಿಕ್ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ಮಾತ್ರ ಕಾರ್ಯನಿರ್ವಹಿಸಿದವು. ರಾತ್ರಿ 9:30 ರ ಹೊತ್ತಿಗೆ ಎಲ್ಲವು ಮುಗಿದು, ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲು ಸೇವೆಗಳನ್ನು ಮತ್ತೆ ಪ್ರಾರಂಭಿಸಲಾಯಿತು.
ನಮ್ಮ ಮೆಟ್ರೋದಲ್ಲಿ ಮೂರನೇ 'ಆತ್ಮಹತ್ಯೆ' ಘಟನೆ
ಈ ವರ್ಷ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ನಡೆದ ಮೂರನೇ ಆತ್ಮಹತ್ಯೆ ಅಥವಾ ಆತ್ಮಹತ್ಯೆ ಯತ್ನ ಇದಾಗಿದೆ. ಜನವರಿ 5 ರಂದು ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬಂದ ತಕ್ಷಣ ಕೇರಳದ 23 ವರ್ಷದ ಯುವಕನೊಬ್ಬ ಮೆಟ್ರೋ ಟ್ರ್ಯಾಕ್‌ಗೆ ಹಾರಿದ್ದ. ತಲೆಗೆ ಪೆಟ್ಟಾದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾರ್ಚ್ 21 ರಂದು, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (ಎನ್‌ಎಲ್‌ಎಸ್‌ಐಯು) 19 ವರ್ಷದ ವಿದ್ಯಾರ್ಥಿ ದೀಪಾಂಜಲಿ ನಗರ ನಿಲ್ದಾಣದಲ್ಲಿ ಹಳಿಗಳ ಮೇಲೆ ಹಾರಿ ಸಾವನ್ನಪ್ಪಿದ್ದಾರೆ.
ಈ ಘಟನೆಗಳು ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಪರದೆಯ ಬಾಗಿಲುಗಳು/ಗೇಟ್‌ಗಳನ್ನು (PSDS/PSGs) ಸ್ಥಾಪಿಸಲು ಪ್ರೇರೇಪಿಸಿವೆ. ಆದರೆ, ವೆಚ್ಚಗಳು ಹೆಚ್ಚಾಗುವುದು ಮತ್ತು ತಾಂತ್ರಿಕ ಸವಾಲುಗಳಿಂದಾಗಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಈ ಬೇಡಿಕೆಯನ್ನು ಗಮನಿಸುವ ಸಾಧ್ಯತೆಯಿಲ್ಲ.
PSDs/PSG ಗಳನ್ನು ರೈಲು ಚಲನೆಗಳೊಂದಿಗೆ ಸಿಂಕ್ರೊನೈಸ್ ಮಾಡಲಾಗಿದ್ದು, ಜನರು ಹಳಿಗಳ ಮೇಲೆ ಜಿಗಿಯುವುದನ್ನು ತಡೆಯುವಂತೆ ವಿನ್ಯಾಸಗೊಳಿಸಲಾಗಿದೆ. ಅಂಡರ್‌ಗ್ರೌಂಡ್ ನಿಲ್ದಾಣಗಳಲ್ಲಿ ಕಡಿಮೆ ಹವಾನಿಯಂತ್ರಣದ ಅಗತ್ಯತೆಗಳ ಕಾರಣದಿಂದಾಗಿ ಅವು ಶಕ್ತಿಯ ಉಳಿತಾಯಕ್ಕೂ ಕಾರಣವಾಗುತ್ತವೆ.
ದೆಹಲಿ, ಮುಂಬೈ ಮತ್ತು ಚೆನ್ನೈನಲ್ಲಿನ ಅನೇಕ ಮೆಟ್ರೋ ನಿಲ್ದಾಣಗಳು PSD/PSGಗಳನ್ನು ಹೊಂದಿವೆ. BMRCL ಪ್ರಕಾರ, ಅಸ್ತಿತ್ವದಲ್ಲಿರುವ ನಿಲ್ದಾಣಗಳಲ್ಲಿ PSDs/PSGಗಳನ್ನು ಸ್ಥಾಪಿಸಲು ವಿನ್ಯಾಸದ ಅಂಶಗಳನ್ನು ಮರು ಮೌಲ್ಯಮಾಪನ ಮಾಡುವುದು ಮತ್ತು ಮರುಹೊಂದಿಸುವ ಅಗತ್ಯವಿರುತ್ತದೆ. ಹೀಗಾಗಿ ನಿಲ್ದಾಣಗಳನ್ನು ಹಲವು ದಿನಗಳವರೆಗೆ ಸ್ಥಗಿತಗೊಳಿಸಬೇಕಾಗುತ್ತದೆ.
BMRCL ಮೆಜೆಸ್ಟಿಕ್ ಇಂಟರ್‌ಚೇಂಜ್ ಸ್ಟೇಷನ್‌ನಲ್ಲಿ ಒಂದು ಪ್ಲಾಟ್‌ಫಾರ್ಮ್‌ನಲ್ಲಿ ರೈಲಿಂಗ್‌ಗಳನ್ನು ಅಳವಡಿಸಿದ್ದು, ಜನದಟ್ಟಣೆಯಿಂದ ಅಪಘಾತಗಳು ಸಂಭವಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲಾಗಿದೆ. ಎಲ್ಲಾ ಜನನಿಬಿಡ ನಿಲ್ದಾಣಗಳಲ್ಲಿ ರೇಲಿಂಗ್‌ಗಳನ್ನು ಅಳವಡಿಸಲು ಯೋಜಿಸಲಾಗಿದೆ. PSDs/PSGಗಳನ್ನು ಪಿಂಕ್ ಲೈನ್‌ನಲ್ಲಿ 18 ನಿಲ್ದಾಣಗಳಲ್ಲಿ ಮತ್ತು ಬ್ಲೂ ಲೈನ್‌ನಲ್ಲಿ 31 ನಿಲ್ದಾಣಗಳಲ್ಲಿ (ಸಿಲ್ಕ್ ಬೋರ್ಡ್-ಕೆಆರ್ ಪುರ-ವಿಮಾನ ನಿಲ್ದಾಣ) ಸ್ಥಾಪಿಸಲಾಗುವುದು.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?











Click it and Unblock the Notifications