ಆರ್‌ಸಿಬಿ ಮ್ಯಾಚ್‌ನಲ್ಲಿ ಆರ್. ಆರ್. ನಗರ ಜಪ; ನಮನ ಸಲ್ಲಿಸಿದ ಕುಸುಮಾ!
ಬೆಂಗಳೂರು, ಏಪ್ರಿಲ್ 16; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ಇದರ ಜೊತೆಗೆ ಐಪಿಎಲ್ 2023ರ ಆವೃತ್ತಿಯ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುತ್ತಿದೆ. ರಾಜಕೀಯ ಮತ್ತು ಕ್ರಿಕೆಟ್ ಪ್ರೇಮಿಗಳು ಸದ್ಯ ಬ್ಯುಸಿಯಾಗಿದ್ದಾರೆ. ರಾಜ್ಯದಲ್ಲಿ ಮೇ 10ರಂದು ಮತದಾನ ನಡೆಯಲಿದೆ, ಚುನಾವಣಾ ಫಲಿತಾಂಶ ಮೇ 13ರಂದು ಪ್ರಕಟವಾಗಲಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ ಪಂದ್ಯಗಳಲ್ಲಿ ರಾಜಕೀಯ, ಕ್ರಿಕೆಟ್ ಎರಡರ ಕಲರವ ಕೇಳಿ ಬರುತ್ತಿದೆ. ಆರ್‌ಸಿಬಿ ಮತ್ತು ಕೋಲ್ಕತ್ತಾ ತಂಡಗಳ ನಡುವಿನ ಪಂದ್ಯದಲ್ಲಿ ಸ್ಟೇಡಿಯಂನಲ್ಲಿ ಜೆಡಿಎಸ್ ಬಾವುಟ ಕಾಣಿಸಿಕೊಂಡಿತ್ತು. ಈ ಮೂಲಕ ಜೆಡಿಎಸ್ ಪಕ್ಷದ ಅಭಿಮಾನಿಗಳು ಕಲರವ ಎಬ್ಬಸಿದ್ದರು.

ಶನಿವಾರ ಆರ್‌ಸಿಬಿ ಮತ್ತು ದೆಹಲಿ ಪಂದ್ಯದಲ್ಲಿ ಕಾಂಗ್ರೆಸ್ ಅಭಿಮಾನಿಗಳು ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಗೆಲ್ಲಬೇಕು ಎಂದು ಫಲಕ ಪ್ರದರ್ಶನ ಮಾಡಲಾಗಿದೆ. ಫೇಸ್‌ಬುಕ್‌ನಲ್ಲಿ ಈ ಫೋಟೋ ಹಂಚಿಕೊಂಡು 'ನಿಮ್ಮ ಅಭಿಮಾನಕ್ಕೆ ನನ್ನ ನಮನಗಳು' ಎಂದು ಕುಸುಮಾ ಹನುಮಂತರಾಯಪ್ಪ ಹೇಳಿದ್ದಾರೆ.
ಅಭ್ಯರ್ಥಿ ಘೋಷಣೆ ಮಾಡಲಾಗಿದೆ; ಕರ್ನಾಟಕ ಕಾಂಗ್ರೆಸ್ ತನ್ನ 124 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿಯೇ ರಾಜರಾಜೇಶ್ವರಿ ನಗರ (ಆರ್. ಆರ್. ನಗರ) ಕ್ಷೇತ್ರಕ್ಕೆ ಕುಸುಮಾ ಹನುಮಂತರಾಯಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಅವರು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಳಿ ಬಿ-ಫಾರಂ ಪಡೆದಿದ್ದಾರೆ. ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 20 ಕೊನೆಯ ದಿನವಾಗಿದೆ.
ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ನಡೆದಿತ್ತು. ತವರು ನೆಲದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 174 ರನ್ ಗಳಿಸಿತ್ತು. ಡೆಲ್ಲಿ ಕ್ಯಾಪಿಟಲ್ಸ್ 154 ರನ್‌ಗಳಿಸಿ ಸೋಲೊಪ್ಪಿಕೊಂಡಿತು. ಸಾವಿರಾರು ಆರ್‌ಸಿಬಿ ಅಭಿಮಾನಿಗಳು ತವರು ನೆಲದಲ್ಲೇ ನೆಚ್ಚಿನ ತಂಡ ಪಂದ್ಯ ಗೆಲ್ಲುವುದನ್ನು ಕಣ್ತುಂಬಿಕೊಂಡರು.
ಈ ಹಿಂದಿನ ಪಂದ್ಯದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 200+ ರನ್ ಸಿಡಿಸಿಯೂ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್‌ಸಿಬಿ ಸೋಲು ಕಂಡಿತ್ತು. ಆಗ ತಂಡದ ಬೌಲರ್ ವಿರುದ್ಧ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಶನಿವಾರದ ಪಂದ್ಯದಲ್ಲಿ ಆರ್‌ಸಿಬಿ ಗೆಲ್ಲುವ ಮೂಲಕ ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.

ಈ ಪಂದ್ಯದಲ್ಲಿಯೇ ಯುವಕನೊಬ್ಬ 'R. R. ನಗರ 100 % WIN ಕುಸುಮಕ್ಕ' ಎಂಬ ಫಲಕ ಹಿಡಿದು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಣೆ ಮಾಡಿದ್ದಾನೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಫೇಸ್‌ಬುಕ್ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಮುನಿರತ್ನ, ಕುಸುಮಾ ಎದುರಾಳಿಗಳು; ರಾಜರಾಜೇಶ್ವರಿ ನಗರ (ಆರ್. ಆರ್. ನಗರ) ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಮುನಿರತ್ನ ಮತ್ತು ಕುಸುಮಾ ಹನುಮಂತರಾಯಪ್ಪ ಈ ಬಾರಿ ಸಹ ಎದುರಾಳಿಗಳು. 2013 ಮತ್ತು 2108ರಲ್ಲಿ ಮುನಿರತ್ನ ಕಾಂಗ್ರೆಸ್ ಅಭ್ಯರ್ಥಿಯಾಗಿ ಕ್ಷೇತ್ರದಲ್ಲಿ ಗೆದ್ದಿದ್ದರು. 2019ರಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರು. 2020ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದು ಬಂದರು.
2020ರಲ್ಲಿ ಮುನಿರತ್ನ ಬಿಜೆಪಿ ಅಭ್ಯರ್ಥಿಯಾದಾಗ ಅವರಿಗೆ ಎದುರಾಳಿಯಾಗಿದ್ದು ಕಾಂಗ್ರೆಸ್‌ನ ಕುಸುಮಾ ಹನುಂತರಾಯಪ್ಪ. ಉಪ ಚುನಾವಣೆಯಲ್ಲಿ ಅವರು 67,877 ಮತಗಳನ್ನು ಪಡೆದು ಬಿಜೆಪಿಯ ಮುನಿರತ್ನ (1,25,990 ಮತ) ವಿರುದ್ಧ ಸೋಲು ಕಂಡರು. ಈ ಬಾರಿಯ ಚುನಾವಣೆಯಲ್ಲಿಯೂ ಮತ್ತೆ ಇಬ್ಬರು ಎದುರಾಳಿಗಳು. ಆರ್. ಆರ್. ನಗರ ಕ್ಷೇತ್ರಕ್ಕೆ ಜೆಡಿಎಸ್ ಈ ಬಾರಿಯ ಚುನಾವಣೆಗೆ ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್‌ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್‌ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications