ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಾಣಿ ವಧೆಗೆ ಸ್ಟನ್ನಿಂಗ್ ಕಡ್ಡಾಯ; ಪಶುಸಂಗೋಪನಾ ಇಲಾಖೆ ಮಹತ್ವದ ಆದೇಶ

|
Google Oneindia Kannada News

ಬೆಂಗಳೂರು, ಏಪ್ರಿಲ್ 2: ರಾಜ್ಯದಾದ್ಯಂತ ಭುಗಿಲೆದ್ದಿರುವ ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿವಾದದ ನಡುವೆ ಪಶುಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಅದರಂತೆ, ಇನ್ನು ಮುಂದೆ ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದೆ.

ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ ಕಡ್ಡಾಯವಾಗಿದೆ ಎಂದು ಪಶುಸಂಗೋಪನಾ ಇಲಾಖೆಯಿಂದ ಮಹತ್ವದ ಆದೇಶ ನೀಡಲಾಗಿದೆ.

ಪ್ರಾಣಿ ವಧೆ ಮಾಡುವ ಮುನ್ನ ಸ್ಟನ್ನಿಂಗ್ ಮಾಡಿಸಲೇಬೇಕು ಎಂದು ಹೇಳಲಾಗಿದೆ. ಕೋಳಿ, ಕುರಿ ಅಂಗಡಿಗಳಿಗೆ ಈ ಬಗ್ಗೆ ಸುತ್ತೋಲೆ ಹೊರಡಿಸಿ ಪಶುಸಂಗೋಪನಾ ಇಲಾಖೆ ಆದೇಶ ಹೊರಡಿಸಿದೆ.

Mandatory To Stun An Animal Or A Bird Before It Gets Slaught; Karnataka Animal Welfare Board Order

ಸ್ಟನ್ನಿಂಗ್ ಎಂದರೆ, ಪ್ರಾಣಿಗಳನ್ನು ವಧೆ ಮಾಡುವ ಮುನ್ನ ಪ್ರಜ್ಞೆ ತಪ್ಪಿಸುವ ವಿಧಾನ ಆಗಿದೆ. ಪ್ರಜ್ಞೆ ತಪ್ಪಿಸುವುದರಿಂದ ಪ್ರಾಣಿಗಳನ್ನು ಸಾಯಿಸುವಾಗ ಅವುಗಳಿಗೆ ನೋವು ತಿಳಿಯುವುದಿಲ್ಲ. ಯಾವುದೇ ಅಂಗಡಿಗಳಲ್ಲಿ ಇದನ್ನು ಪಾಲನೆ ಮಾಡದ ಹಿನ್ನೆಲೆ, ಅನೇಕ ದೂರುಗಳು ಪಶು ಸಂಗೋಪನಾ ಇಲಾಖೆಗೆ ಬಂದಿದ್ದವು. ಹೀಗಾಗಿ ಈ ಆದೇಶ ಹೊರಡಿಸಲಾಗಿದೆ.

ಆಹಾರಕ್ಕಾಗಿ ಪ್ರಾಣಿವಧೆ ಮಾಡುವಾಗ ಹಿಂಸೆ ನೀಡಬಾರದು, ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕು. ಬೆಂಗಳೂರು ವ್ಯಾಪ್ತಿಯಲ್ಲಿ 'ಸ್ಟನ್ನಿಂಗ್' ಮಾಡುವುದು ಕಡ್ಡಾಯ ಎಂದು ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಉಮಾಪತಿ ತಿಳಿಸಿದ್ದಾರೆ.

ಪ್ರಾಣಿಗಳಿಗೆ ಹಿಂಸೆ ನೀಡಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆದೇಶ ಮೀರಿದರೆ 50 ಸಾವಿರದಿಂದ 1 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

Mandatory To Stun An Animal Or A Bird Before It Gets Slaught; Karnataka Animal Welfare Board Order

ಸ್ಟನ್ನಿಂಗ್ ಹೇಗೆ ಮಾಡಲಾಗುತ್ತದೆ?
ಸ್ಟನ್ನಿಂಗ್ ಮೆಥಡ್‌ನಿಂದ ಪ್ರಾಣಿಗಳು ನರಳಾಟದಿಂದ ಸಾಯುವುದಿಲ್ಲ. ಸ್ಟನ್ನಿಂಗ್ ವೇಳೆ ಪ್ರಾಣಿಗಳ ತಲೆಗೆ ಜೋರಾಗಿ ಹೊಡೆಯಲಾಗುತ್ತದೆ. ಆಗ ಪ್ರಾಣಿಗಳ ತಲೆಗೆ ಪೆಟ್ಟು ಬಿದ್ದು ಅವುಗಳ ಮೆದುಳು ನಿಷ್ಕ್ರಿಯಗೊಳ್ಳುತ್ತದೆ. ಆ ವೇಳೆ ಪ್ರಾಣಿಗಳನ್ನು ವಧೆ ಮಾಡಲಾಗುತ್ತದೆ. ಹೀಗೆ, ಇನ್ನು ಮುಂದೆ ಕೋಳಿ, ಕುರಿ ಅಂಗಡಿಗಳಿಗೆ ಲೈಸೆನ್ಸ್ ಕೊಡುವಾಗಲೂ ಸ್ಟನ್ನಿಂಗ್ ವ್ಯವಸ್ಥೆ ಕಡ್ಡಾಯ ಆಗಿ ಇರಲೇಬೇಕು.

ಸ್ಟನ್ನಿಂಗ್ ವ್ಯವಸ್ಥೆ ಇಲ್ಲದಿದ್ದರೆ ಪರವಾನಗಿ ನೀಡಬಾರದು. 2001ರ ಸೆಕ್ಷನ್ 6 ಮತ್ತು 4ರ ಅಡಿಯಲ್ಲಿ ಸ್ಟನ್ನಿಂಗ್ ನಿಯಮ ಇದೆ. ನಿಯಮ ಬ್ರೇಕ್ ಮಾಡುವವರಿಗೆ 1960 ಆಕ್ಟ್ ಪ್ರಕಾರ 5 ಸಾವಿರದಿಂದ 50 ಸಾವಿರದವರೆಗೂ ದಂಡ ವಿಧಿಸಲಾಗುವುದು ಎಂದು ಸೂಚನೆ ಕೊಡಲಾಗಿದೆ.

Recommended Video

ಮೋದಿ ಹತ್ಯೆಗೆ ಪ್ಲ್ಯಾನ್: ಭದ್ರತಾ ಪಡೆಗೆ ಕಳುಹಿಸಿದ ಈ- ಮೇಲ್ ನಲ್ಲಿ ಶಾಕಿಂಗ್ ಮಾಹಿತಿ | Oneindia Kannada

ಆಕ್ಟ್ ಅಡಿಯಲ್ಲಿ ಪ್ರಾಣಿ ಹಿಂಸೆಯ ಪ್ರಕರಣ ದಾಖಲು ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಆಹಾರಕ್ಕಾಗಿ ಕೋಳಿ, ಕುರಿ ವಧೆ ಮಾಡುವವರು ಸ್ಟನ್ನಿಂಗ್ ನಿಯಮ ಅನುಸರಿಸಬೇಕಾಗಿದೆ.

English summary
Mandatory To Stun An Animal Or A Bird Before It Gets Slaught in Bengaluru district, Karnataka Animal Welfare Board Order.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X