• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪೊಲೀಸ್ ಸಿಬ್ಬಂದಿಗೆ ಕಡ್ಡಾಯ ವಾರದ ರಜೆ ಕೊಡಿ: ಪೊಲೀಸ್ ಮಹಾ ನಿರ್ದೇಶಕರ ಆದೇಶ

|

ಬೆಂಗಳೂರು ಜನವರಿ 28: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಕಡ್ಡಾಯವಾಗಿ ವಾರದ ರಜೆ ಮಂಜೂರು ಮಾಡುವಂತೆ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಆದೇಶಿಸಿದ್ದಾರೆ.

ಈ ಕುರಿತು ಪೊಲೀಸ್ ಆಯುಕ್ತರಿಗೆ, ಜಿಲ್ಲಾ ಅಧೀಕ್ಷಕರಿಗೆ ಅಧಿಕೃತ ಜ್ಞಾಪನಾ ರವಾನಿಸಿರುವ ಅವರು, ಪೊಲೀಸರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಬೇಕಾದರೆ ವಾರಕ್ಕೊಮ್ಮೆ ರಜೆ ಕಡ್ಡಾಯವಾಗಿ ಬೇಕು. ಹೀಗಾಗಿ ಪೊಲೀಸ್ ಸಿಬ್ಬಂದಿಗೆ ಕಡ್ಡಾಯವಾಗಿ ವಾರದ ರಜೆಯನ್ನು ಮಂಜೂರು ಮಾಡಬೇಕು. ರೊಟೇಷನ್ ಆಧಾರದ ಮೇಲೆ ವಾರಕ್ಕೊಮ್ಮೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ರಜೆ ಸೌಲಭ್ಯ ಸಿಗುವಂತೆ ಮಾಡಬೇಕು. ಬಂದೋತಬಸ್ತ್ ನೈಸರ್ಗಿಕ ವಿಕೋಪ, ಚುನಾವಣೆ ಸಂದರ್ಭ ಹೊರತು ಪಡಿಸಿ ಕಡ್ಡಾಯವಾಗಿ ಪೊಲೀಸ್ ಸಿಬ್ಬಂದಿಗೆ ರಜೆ ಮಂಜೂರು ಮಾಡಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರು ಗುರುವಾರ ತಿಳಿಸಿದ್ದಾರೆ. ಈ ಕುರಿತ ಅಧಿಕೃತ ಜ್ಞಾಪನಾ ಎಲ್ಲಾ ಪೊಲೀಸ್ ಠಾಣೆಗಳಿಗೆ ರವಾನಿಸಲಾಗಿದೆ.

ವಾರದ ರಜೆಗೆ ಪೊಲೀಸರಿಗೆ ಸಿಗಬೇಕಾಗಿರುವ ಭತ್ಯೆ, ವೇತನವನ್ನು ಕಡಿತ ಮಾಡುವಂತಿಲ್ಲ. ಪೊಲೀಸ್ ಅಧೀಕ್ಷಕ ದರ್ಜೆಯ ಅಧಿಕಾರಿಗಳು ಈ ಸಂಬಂಧ ನಿಯಮವನ್ನು ಕಡ್ಡಾಯವಾಗಿ ಅನುಷ್ಠಾನಕ್ಕೆ ತರಬೇಕು. ಅಲ್ಲದೇ ಪೊಲೀಸರ ರಜೆ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸೂಚಿಸಿದ್ದಾರೆ.

English summary
The state police chief has ordered the mandatory weekly leave for police personnel know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X