Bengaluru Rains : ಮಾಂಡೌಸ್ ಚಂಡಮಾರುತ: ಬೆಂಗಳೂರಿನಲ್ಲಿ ಮುಂದುವರಿದ ಮಳೆ, ಹಳದಿ ಅಲರ್ಟ್
ಬೆಂಗಳೂರು, ಡಿ.11: ಮಾಂಡೌಸ್ ಚಂಡಮಾರುತದ ಪ್ರಭಾವದಿಂದ ನಗರದಲ್ಲಿ ಜಿಟಿ ಜಿಟಿ ಮಳೆ ನಿಂತಿಲ್ಲ. ಚಳಿಯಂತೂ ಹೆಚ್ಚಾಗುತ್ತಲೆ ಇದೆ. ಭಾನುವಾರ ಕೂಡ ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ.
ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ನಗರದಲ್ಲಿ ಹಳದಿ ಅಲರ್ಟ್ ಮುಂದುವರೆಸಿದೆ. ಮಳೆ ಅಥವಾ ಗುಡುಗು ಸಹಿತ ಮಳೆ ಮತ್ತು ಮೋಡ ಕವಿದ ವಾತಾವರಣವು ಡಿಸೆಂಬರ್ 13 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ.
ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಡಿಸೆಂಬರ್ 13 ರವರೆಗೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ ಜೋರಾದ ಗಾಳಿ ಬೀಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ನಲ್ಲಿ, ಬೆಂಗಳೂರಿನಲ್ಲಿ ಶನಿವಾರ 12 ಮಿಮೀ ಮಳೆಯಾಗಿದೆ ಎಂದು ತಿಳಿಸಿದೆ. ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಸಹ ಮಳೆಯಾಗಿದೆ.
ಶನಿವಾರ ಬೆಳಗ್ಗೆ ಕನಿಷ್ಠ ತಾಪಮಾನ 16.8 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದು, ಬೆಂಗಳೂರಿನಲ್ಲಿ ಮಾಂಡೌಸ್ ಚಂಡಮಾರುತದ ಪರಿಣಾಮ ಕಂಡುಬಂದಿದೆ. ದಾವಣಗೆರೆಯಲ್ಲಿ ಶನಿವಾರದ ಕನಿಷ್ಠ ತಾಪಮಾನ 13.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಶನಿವಾರ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗಿದೆ. ಮಳೆಯ ಕಾರಣ ನಗರದಾದ್ಯಂತ ಟ್ರಾಫಿಕ್ ಜಾಮ್, ಆಹಾರ ವಿತರಣೆ ಮತ್ತು ಟ್ಯಾಕ್ಸಿ ಸೇವೆಗಳ ಮೇಲೆ ಪರಿಣಾಮ ಬೀರಿದೆ.

ಡಿಸೆಂಬರ್ 11 ಮತ್ತು 12 ರಂದು ಕರ್ನಾಟಕದ ಕರಾವಳಿ ಪ್ರದೇಶಗಳು ಮತ್ತು ಉತ್ತರ ಒಳನಾಡಿನಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಚಿತ್ರದುರ್ಗ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿಯೂ ಉತ್ತಮ ಮಳೆಯಾಗಲಿದೆ ಚಂಡಮಾರುತದ ಪುಲ್ ಎಫೆಕ್ಟ್‌ನಿಂದ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.











Click it and Unblock the Notifications