ಕಸ ಕಿತ್ತಾಟ: ಮೂರನೇ ದಿನಕ್ಕೆ ಕಾಲಿಟ್ಟ ಉಪವಾಸ
ಬೆಂಗಳೂರು, ಜೂ.16: ನಗರದ ಕಸವನ್ನು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸುರಿಯುವುದನ್ನು ವಿರೋಧಿಸಿ ಮಂಡೂರು ಗ್ರಾಮಸ್ಥರು ಬೊಮ್ಮನಹಳ್ಳಿ ಗೇಟ್ ಬಳಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಗ್ರಾಮದ ಎಂಟು ಜನ ಅಮರಣಾಂತ ಉಪವಾಸ ಕೈಗೊಂಡಿದ್ದು ಉಳಿದ ಗ್ರಾಮಸ್ಥರು ಸತ್ಯಾಗ್ರಹಕ್ಕೆ ಬೆಂಬಲ ನೀಡುತ್ತಿದ್ದಾರೆ. ಭಾನುವಾರ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಎಎಪಿ ಕಾರ್ಯಕರ್ತರು ಭಾಗಿಯಾಗಿ ಬೆಂಬಲ ವ್ಯಕ್ತಪಡಿಸಿದರು.[ಮಂಡೂರು ಕಸ: ಅನಾರೋಗ್ಯಕ್ಕೆ ಮಹಿಳೆ ಬಲಿ]
ಭಾನುವಾರದ ಸಭೆ ವಿಫಲ: ಭಾನುವಾರ ನಗರದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಜೆ 6.30 ರಿಂದ ರಾತ್ರಿ 8.30ರವರೆಗೆ ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಬಿಬಿಎಂಪಿ ಮೇಯರ್ .ಎಸ್.ಸತ್ಯನಾರಾಯಣ, ಆಯುಕ್ತ ಲಕ್ಷ್ಮೀನಾರಾಯಣ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಮಂಡೂರು ಗ್ರಾಮಸ್ಥರೊಂದಿಗೆ ನಡೆಸಿದ ಮಾತುಕತೆ ಮತ್ತೆ ವಿಫಲವಾಗಿದೆ.
ಈ ಸಭೆಯಲ್ಲಿ ಸಚಿವರು ಕಸ ಸುರಿಯಲು ಆರು ತಿಂಗಳ ಕಾಲಾವಕಾಶ ನೀಡುವಂತೆ ಕೋರಿದರು. ಮೂರು ತಿಂಗಳು ಅವಕಾಶ ನೀಡಿದರೆ ಮಾತ್ರ ಕಸ ಸುರಿಯಲು ಅವಕಾಶ ನೀಡಲಾಗುವುದು. ಆ ಬಳಿಕ ಶಾಶ್ವತವಾಗಿ ಘಟಕ ಮುಚ್ಚುವುದಾಗಿ ಸರಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು ಲಿಖಿತ ಭರವಸೆ ನೀಡಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.
ಮತ್ತೊಂದು ಸಭೆ : ಜೂ.16 ಸೋಮವಾರದಂದು ಸಮಸ್ಯೆ ನಿವಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಚಿವ ರಾಮಲಿಂಗಾರೆಡ್ಡಿ, ಅಧಿಕಾರಿಗಳ ತಂಡ ಸಭೆ ನಡೆಸಲಿದ್ದಾರೆ.

ಉಪವಾಸ ನಿರತ ಗ್ರಾಮಸ್ಥರು:
ಮಂಡೂರಿನ ಎಂಟು ಜನರು ಅಮರಣಾಂತ ಉಪವಾಸ ಕೈಗೊಂಡಿದ್ದು ಉಳಿದ ಗ್ರಾಮಸ್ಥರು ಸತ್ಯಾಗ್ರಹಕ್ಕೆ ಬೆಂಬಲ ನೀಡುತ್ತಿದ್ದಾರೆ.

ಎಚ್.ಎಸ್.ದೊರೆಸ್ವಾಮಿ ಬೆಂಬಲ:
ಭಾನುವಾರ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಪಾಲ್ಗೊಂಡು ಪ್ರತಿಭಟನಗೆ ಬೆಂಬಲ ವ್ಯಕ್ತಪಡಿಸಿದರು.

ಎಎಪಿ ಬೆಂಬಲ:
ಭಾನುವಾರದ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗಿಯಾಗಿ ಮಂಡೂರಿನ ಜನತೆಗೆ ಬೆಂಬಲ ನೀಡಿದರು.

ಮೂರನೇ ದಿನಕ್ಕೆ ಉಪವಾಸ ಸತ್ಯಾಗ್ರಹ
ಬೊಮ್ಮನಹಳ್ಳಿ ಗೇಟ್ ಬಳಿ ನಡೆಸುತ್ತಿರುವ ಮಂಡೂರು ಗ್ರಾಮಸ್ಥರು ನಡೆಸುತ್ತಿರವ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications