ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆ ಕಾಂಗ್ರೆಸ್ ಮುಖಂಡರ ರಹಸ್ಯ ಸಭೆ
Recommended Video
ಬೆಂಗಳೂರು, ಮೇ 01: ಮಂಡ್ಯ ಕಾಂಗ್ರೆಸ್ ಮುಖಂಡರು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರೊಂದಿಗೆ ನಿನ್ನೆ ರಹಸ್ಯ ಸಭೆಯೊಂದನ್ನು ನಡೆಸಿದ್ದಾರೆ ಎನ್ನಲಾಗಿದೆ.
ಸುಮಲತಾ ಸೇರಿದಂತೆ ಮಂಡ್ಯದ ಕಾಂಗ್ರೆಸ್ ಮುಖಂಡರು ಹೊಟೆಲ್ ಒಂದರಲ್ಲಿ ಸಭೆಯಲ್ಲಿ ಪಾಲ್ಗೊಂಡಿರುವ ವಿಡಿಯೋ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದು ರಹಸ್ಯ ಸಭೆಯೋ ಅಥವಾ ತಮಗೆ ಚುನಾವಣೆಯಲ್ಲಿ ಸಹಾಯ ಮಾಡಿದ ಕಾಂಗ್ರೆಸ್ ನಾಯಕರಿಗೆ ಧನ್ಯವಾದ ಅರ್ಪಿಸಲು ಆಯೋಜಿಸಲಾದ ಪಾರ್ಟಿ ಮಾದರಿ ಕಾರ್ಯಕ್ರಮವೊ ಎಂಬ ಅನುಮಾನ ಏಳುತ್ತಿದೆ.
ಸಭೆಯಲ್ಲಿ ಮಂಡ್ಯದ ಕಾಂಗ್ರೆಸ್ ಮುಖಂಡರಾದ ಚೆಲುವರಾಯಸ್ವಾಮಿ, ರಘುವೀರ್ ಗೌಡ, ಮಳವಳ್ಳಿ ನರೇಂದ್ರ ಸ್ವಾಮಿ, ಮಳವಳ್ಳಿ ಶಿವಣ್ಣ, ಮಾಗಡಿ ಬಾಲಕೃಷ್ಣ ಇನ್ನೂ ಕೆಲವು ಮುಖಂಡರು ಭಾಗವಹಿಸಿದ್ದುದು ವಿಡಿಯೋ ದೃಶ್ಯಾವಳಿಗಳಲ್ಲಿ ಸ್ಪಷ್ಟವಾಗುತ್ತಿದೆ. ಸಭೆಯ ನೃತೃತ್ವವನ್ನು ಸುಮಲತಾ ಅವರು ವಹಿಸಿದ್ದರು.
ಮಂಡ್ಯದಲ್ಲಿ ಚೆಲುವರಾಯಸ್ವಾಮಿ ಸೇರಿದಂತೆ ಹಲವು ಮುಖಂಡರು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡದೆ ಚುನಾವಣೆಯಿಂದ ದೂರುಳಿದಿದ್ದರು, ಇವರು ಸುಮಲತಾ ಅವರಿಗೆ ಬೆಂಬಲ ನೀಡಿದ್ದಾರೆ ಎನ್ನಲಾಗುತ್ತಿತ್ತು. ಈಗ ಅದೇ ನಾಯಕರು ಸುಮಲತಾ ಅವರೊಂದಿಗೆ ಸಭೆ ನಡೆಸಿರುವುದು ಈ ಅನುಮಾನಕ್ಕೆ ಹೆಚ್ಚಿನ ಪುಷ್ಟಿ ನೀಡಿದೆ.

ನಗರದ ಖಾಸಗಿ ಹೊಟೆಲ್ ಒಂದರಲ್ಲಿ ಸಭೆ
ನಗರದ ಖಾಸಗಿ ಹೊಟೆಲ್ ಒಂದರಲ್ಲಿ ಈ ರಹಸ್ಯ ಸಭೆ ನಡೆದಿದ್ದು, ರಾಕ್‌ಲೈನ್ ವೆಂಕಟೇಶ್ ಅವರು ಈ ಪಾರ್ಟಿಯನ್ನು ಸುಮಲತಾ ಅವರ ಪರವಾಗಿ ಆಯೋಜಿಸಿದ್ದರು ಎನ್ನಲಾಗುತ್ತಿದೆ, ಸಭೆಯಲ್ಲಿ ಸುಮಲತಾ ಅವರು ಭಾಗವಹಿಸಿದ್ದರು, ಅವರ ಜೊತೆ ಇನ್ನೊಬ್ಬ ಮಹಿಳೆ ಸಹ ಭಾಗವಹಿಸಿದ್ದರು. ಜೊತೆಗೆ ರಾಕ್‌ಲೈನ್ ವೆಂಟಕೇಶ್ ಸಹ ಭಾಗವಹಿಸಿದ್ದರು.

ಸುಮಲತಾ ಅವರನ್ನು ಬೆಂಬಲಿಸಿದ್ದವರ ಉಚ್ಚಾಟಿಸಿದ ಕೆಪಿಸಿಸಿ
ಸುಮಲತಾ ಅವರಿಗೆ ಬೆಂಬಲ ನೀಡಿದ್ದ ಎಂಟು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಕೆಪಿಸಿಸಿ ಈಗಾಗಲೇ ವಜಾ ಮಾಡಿತ್ತು, ಅಷ್ಟೆ ಅಲ್ಲದೆ ಚೆಲುವರಾಯಸ್ವಾಮಿ ಮತ್ತು ಇತರರಿಗೆ ಎಚ್ಚರಿಕೆ ಸಹ ನೀಡಿತ್ತು ಆದರೂ ಸಹ ಹಲವು ಕಾಂಗ್ರೆಸ್ ಮುಖಂಡರು ಬಹಿರಂಗವಾಗಿಯೇ ಸುಮಲತಾ ಅವರಿಗೆ ಬೆಂಬಲ ಘೋಷಿಸಿದ್ದರು.

ಮಂಡ್ಯದಲ್ಲಿ ಭಾರಿ ತುರುಸಿನ ಪೈಪೋಟಿ
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ನಡುವೆ ಭಾರಿ ತುರುಸಿನ ಪೈಪೋಟಿ ನಡೆದಿದೆ. ಮಂಡ್ಯದಲ್ಲಿ ಯಾರೇ ಗೆದ್ದರೂ ಬಹು ಕನಿಷ್ಟ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದು ಅಂದಾಜಿಸಲಾಗಿದೆ. ಸುಮಲತಾ ಅವರಿಗೆ ಅವಕಾಶಗಳು ಹೆಚ್ಚಿವೆ ಎಂಬ ಊಹಾಪೋಹ ಕೇಳಿಬರುತ್ತಿದೆ.

ಜಿ.ಟಿ.ದೇವೇಗೌಡ ಇಂದಿನ ಹೇಳಿಕೆಗೆ ತಾಳೆ
ಇಂದಷ್ಟೆ ಜಿ.ಟಿ.ದೇವೇಗೌಡ ಅವರು ಮಾಧ್ಯಮಗಳೊಟ್ಟಿಗೆ ಮಾತನಾಡಿ 'ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಹಲವರು ಬಿಜೆಪಿಗೆ ಮತ ಹಾಕಿದ್ದಾರೆ' ಎಂದಿದ್ದರು. ನಿನ್ನೆಯ ಸಭೆಯನ್ನು ಗಮನಿಸುವುದಾದರೆ ಮಂಡ್ಯದಲ್ಲಿ ಕಾಂಗ್ರೆಸ್‌ನವರು ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಿದಂತಿದೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications