ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಗೋಲಿಬಾರ್: ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

|
Google Oneindia Kannada News

Recommended Video

ಮಂಗಳೂರಿನ ಗೋಲಿಬಾರ್ ಪ್ರಕರಣವನ್ನ CIDಗೆ ವಹಿಸಿದ ಯಡಿಯೂರಪ್ಪ | YEDIYURAPPA | CBI | ONEINDIAKANNADA

ಬೆಂಗಳೂರು, ಡಿಸೆಂಬರ್ 23: ಮಂಗಳೂರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಗಲಭೆಯಲ್ಲಿ ನಡೆದ ಗೋಲಿಬಾರ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಸಿಎಂ, ಮಂಗಳೂರು ಗೋಲಿಬಾರ್ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಅದರ ಜೊತೆಗೆ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರಿಗೂ ಕಠಿಣ ಶಿಕ್ಷೆಯಾಗಬೇಕು ಎಂದರು.

ಸಂಪುಟ ವಿಸ್ತರಣೆ: ಮತ್ತೆ ದೆಹಲಿ ಪ್ರವಾಸ ಮುಂದೂಡಿದ ಯಡಿಯೂರಪ್ಪ ಸಂಪುಟ ವಿಸ್ತರಣೆ: ಮತ್ತೆ ದೆಹಲಿ ಪ್ರವಾಸ ಮುಂದೂಡಿದ ಯಡಿಯೂರಪ್ಪ

ಸಿಐಡಿ ತನಿಖೆ ಬೇರೆ, ಮಾಜಿಸ್ಟ್ರೇಟ್ ತನಿಖೆ ಬೇರೆ, ಮಂಗಳೂರು ಇನ್ನಾದರೂ ಶಾಂತವಾಗಿರುತ್ತೆ ಎಂದು ಭಾವಿಸಿರುತ್ತೇನೆ. ಈಗಾಗಲೇ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದ್ದೇನೆ. ಯಾವುದೇ ಗಲಭೆಗೆ ಪ್ರೋತ್ಸಾಹ ಕೊಡುವವರನ್ನು ಸಹಿಸುವುದಿಲ್ಲ ಎಂದು ತಿಳಿಸಿದರು.

Mangalore Golibar: The State Government Has Been Tasked With Investigating The CID

ಈ ಪೌರತ್ವ ಕಾಯ್ದೆಯಿಂದ ಯಾವುದೇ ಅಲ್ಪಸಂಖ್ಯಾತರಿಗೆ ತೊಂದರೆಯಾಗುವುದಿಲ್ಲ, ಇದಕ್ಕೆ ಸಂಬಂಧಿಸಿದಂತೆ ಖುದ್ದು ಪ್ರಧಾನಿ ನರೇಂದ್ರ ಮೋದಿಯೇ ಸ್ಪಷ್ಟನೆ ಕೊಟ್ಟಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಬೂದಿ ಮುಚ್ಚಿದ ಕೆಂಡ ಮಂಗಳೂರಿಗೆ ಸಿದ್ದರಾಮಯ್ಯ ಭೇಟಿಬೂದಿ ಮುಚ್ಚಿದ ಕೆಂಡ ಮಂಗಳೂರಿಗೆ ಸಿದ್ದರಾಮಯ್ಯ ಭೇಟಿ

ಇಷ್ಟಾದರೂ ಕಾಂಗ್ರೆಸ್ ಪಕ್ಷ ಉದ್ದೇಶಪೂರ್ವಕವಾಗಿ ಪಿತೂರಿ ಮಾಡುತ್ತಿದೆ. ಈ ಬಗ್ಗೆ ಜನರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಸಿಎಂ, ದೆಹಲಿ ಪ್ರವಾಸವನ್ನು ಮತ್ತೆ ಒಂದು ವಾರ ಮುಂದೂಡಲಾಗಿದೆ. ಒಂದು ವಾರ ಬಿಟ್ಟು ದೆಹಲಿಗೆ ತೆರಳುವುದಾಗಿ ತಿಳಿಸಿದರು. ಇದರಿಂದ ಸಚಿವ ಸ್ಥಾನಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. ದೆಹಲಿ ಭೇಟಿಯವರೆಗೂ ಕಾಯಲೇಬೇಕು.

English summary
Chief Minister BS Yeddyurappa has said that the CID investigation into the Golibar case in riots in Mangalore against the Citizenship Amendment Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X