ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇ 27 ರಿಂದ 29 ರವರೆಗೆ ದೇವನಹಳ್ಳಿ ತಾಲೂಕಿನಲ್ಲಿ ಮಾವು, ಹಲಸು ಮೇಳ

|
Google Oneindia Kannada News

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 25: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಕೃಷಿಕ ಸಮಾಜ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ "ಮಾವು ಮತ್ತು ಹಲಸು ಪ್ರದರ್ಶನ ಹಾಗೂ ಮಾರಾಟ ಮೇಳ-2022" ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

2022ರ ಮೇ 27 ರಿಂದ 29 ರವರೆಗೆ ದೇವನಹಳ್ಳಿ ತಾಲ್ಲೂಕಿನ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಹೋಟೆಲ್ ನಂದಿ ಉಪಚಾರ್ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ ಅವರು ತಿಳಿಸಿದರು.

ಆನ್‌ಲೈನ್‌ನಿಂದ ಮಾವು ಖರೀದಿಸಲು ವೆಬ್‌ಸೈಟ್, ಮೊಬೈಲ್ ನೆಟ್ಟಗಿಲ್ಲ! ಗ್ರಾಹಕರ ಬೇಸರಆನ್‌ಲೈನ್‌ನಿಂದ ಮಾವು ಖರೀದಿಸಲು ವೆಬ್‌ಸೈಟ್, ಮೊಬೈಲ್ ನೆಟ್ಟಗಿಲ್ಲ! ಗ್ರಾಹಕರ ಬೇಸರ

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಯ ವಿಡಿಯೋ ಸಂವಾದದ ಕೊಠಡಿಯಲ್ಲಿಂದು ಮಾವು ಮತ್ತು ಹಲಸು ಪ್ರದರ್ಶನ ಹಾಗೂ ಮಾರಾಟ ಮೇಳ-2022ರ ಕುರಿತು ನಡೆದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಗುಣವಂತ ಸೇರಿದಂತೆ ತಾಲ್ಲೂಕುಗಳಲ್ಲಿನ ಹಿರಿಯ ಸಹಾಯಕ ನಿರ್ದೇಶಕರುಗಳು ಉಪಸ್ಥಿತರಿದ್ದರು.

ಮಾವು ಮತ್ತು ಹಲಸು ಒಂದು ಋತುಮಾನ ಆಧಾರಿತ ಬೆಳೆ

ಮಾವು ಮತ್ತು ಹಲಸು ಒಂದು ಋತುಮಾನ ಆಧಾರಿತ ಬೆಳೆ

ಮಾವು ಮತ್ತು ಹಲಸು ಒಂದು ಋತುಮಾನ ಆಧಾರಿತ ಬೆಳೆಯಾಗಿದ್ದು, ಪ್ರಸ್ತುತ ಹಂಗಾಮಿನಲ್ಲಿ ಮಾವು ಮತ್ತು ಹಲಸು ಬೆಳೆ ಕಟಾವಿಗೆ ಬಂದಿದ್ದು, ಮಾವು ಹಾಗೂ ಹಲಸು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಹಾಗೂ ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳು ಸಿಗುವಂತೆ ಮಾಡಲು ಈ ಮೇಳದಲ್ಲಿ ಸುಮಾರು 50ಕ್ಕೂ ಹೆಚ್ಚು ವಿವಿಧ ಮಾವು ತಳಿಗಳ ಪ್ರದರ್ಶನ ಮತ್ತು 10ಕ್ಕೂ ಹೆಚ್ಚು ವಿವಿಧ ಮಾವಿನ ತಳಿಗಳ ಮಾರಾಟದ ವ್ಯವಸ್ಥೆಯನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ಕಲ್ಪಿಸಲಾಗಿದೆ ಎಂದರು.

ಜಿಲ್ಲೆಯ ಪ್ರಮುಖ ತೋಟಗಾರಿಕಾ ಬೆಳೆಗಳು

ಜಿಲ್ಲೆಯ ಪ್ರಮುಖ ತೋಟಗಾರಿಕಾ ಬೆಳೆಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ತೋಟಗಾರಿಕಾ ಬೆಳೆಗಳು ಹಾಗೂ ಜನರ ಬೇಡಿಕೆಗೆ ಅನುಗುಣವಾಗಿ ಮೇಳದಲ್ಲಿ ಮಾವು, ಹಲಸು, ಚಕೋತ, ದಾಳಿಂಬೆ, ದ್ರಾಕ್ಷಿ ಮಳಿಗೆ ಸೇರಿದಂತೆ 20 ರಿಂದ 25 ಮಳಿಗೆ ತೆರೆಯಲಾಗುವುದು ಎಂದರಲ್ಲದೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಕರ್ಯಗಳ ವ್ಯವಸ್ಥೆಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ ಹೇಳಿದರು.

ಸಸ್ಯ ಸಂತೆಯೆಂಬ ಕಾರ್ಯಕ್ರಮ

ಸಸ್ಯ ಸಂತೆಯೆಂಬ ಕಾರ್ಯಕ್ರಮ

ಈ ಮೇಳದಲ್ಲಿ ಸಸ್ಯ ಸಂತೆಯೆಂಬ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ/ಸಸಿ ಗಿಡಗಳನ್ನು, ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಹಾಗೂ ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರಲ್ಲದೆ, ಸಸ್ಯ ಸಂತೆಯಲ್ಲಿ ಮಾವು, ಸೀಬೆ, ತೆಂಗು, ನೇರಳೆ ಇತ್ಯಾದಿ ಹಾಗೂ ಅಲಂಕಾರಿಕ ಗಿಡಗಳನ್ನು ಮಾರಾಟ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ ಹೇಳಿದರು.

 7586.94 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ

7586.94 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ

ಬೆಂಗಳೂರು ಗ್ರಾಮಾಂತರ ಜಿಲೆಯಲ್ಲಿ ಮಾವು ಬೆಳೆಯನ್ನು 7586.94 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಪ್ರಮುಖವಾಗಿ ಬಾದಾಮಿ ರಸಪುರಿ, ತೋತಾಪುರಿ ಮಲ್ಲಿಕಾ, ಸೇಂದೂರು ಮುಂತಾದ ತಳಿಗಳನ್ನು ಬೆಳೆಯಲಾಗುತ್ತಿದೆ ಎಂದರಲ್ಲದೆ, ಹಲಸು ಬೆಳೆಯನ್ನು 69.52 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿದ್ದು, ಮೇಳದಲ್ಲಿ ಹಾಪ್‌ಕಾಮ್ಸ್ ದರಕ್ಕಿಂತ ಕಡಿಮೆ ದರದಲ್ಲಿ ಗ್ರಾಹಕರು ಹಣ್ಣುಗಳನ್ನು ಕೊಳ್ಳಬಹುದಾಗಿದೆ ಎಂದು ಕೆ.ರೇವಣಪ್ಪ ಹೇಳಿದರು.

English summary
Mango Mela will be organised in front off Hotel Nandi Upachar from May 27 to extend support to Bengaluru rural farmers said Zilla Panchayat CEO K Revanappa
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X