ಲಾಲ್‌ಬಾಗ್ ಉದ್ಯಾನವದಲ್ಲಿ ಮಾವು ಮೇಳ ಆಯೋಜನೆ ಬಗ್ಗೆ ಇಲಾಖೆ ಆಲೋಚನೆ
ಬೆಂಗಳೂರು, ಮೇ 01: ಕೋವಿಡ್‌ನಿಂದ ಬೆಂಗಳೂರು ಮಹಾನಗರದ ಜನತೆಗೆ ಮಾವು ಮೇಳವೇ ಇಲ್ಲ ಎಂಬುವುದು ಬೇಸರದ ಸಂಗತಿಯಾಗಿತ್ತು. ಆದರೆ ಮತ್ತೆ ಬೆಂಗಳೂರು ಮಹಾನಗರಿಯ ಜನತೆಗೊಂದು ಸಂತಸದ ಸುದ್ದಿ ಏನೆಂದರೆ ಎರಡು ವರ್ಷಗಳ ಬಳಿಕ ಬೆಂಗಳೂರಿನ ಲಾಲ್‌ಬಾಗ್ ಉದ್ಯಾನದಲ್ಲಿ ಮಾವು ಮೇಳವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.
ತೋಟಗಾರಿಕೆ ಇಲಾಖೆ ಮಾಹಿತಿ ನೀಡಿದ್ದು, ಇದೇ ಮೇ ತಿಂಗಳು ಕೊನೆಯ ವಾರದಲ್ಲಿ ಅಥವಾ ಜೂನ್ ತಿಂಗಳಿನ ಆರಂಭದಲ್ಲಿ ಮಾವಿನ ಹಣ್ಣುಗಳ ಮೇಳವನ್ನು ನಗರದ ಲಾಲ್‌ಬಾಗ್‌ನಲ್ಲಿ ಆಯೋಜಿಸಲು ಯೋಜನೆ ರೂಪಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ. ಲಾಲ್‌ಬಾಗ್ ಉದ್ಯಾನದಲ್ಲಿ ಮಾವು ಮೇಳವನ್ನು ಆಯೋಜಿಸಲು ಇಲಾಖೆ ಸಿದ್ದವಾಗಿದೆ ಹಾಗೂ 2 ವರ್ಷಗಳ ನಂತರ ನಡೆಯುತ್ತಿರುವ ಈ ಮೇಳದಲ್ಲಿ 200 ಮಾವು ಬೆಳೆಗಾರರಾದ ರೈತರಿಗೆ ಹಾಗೂ ಹಣ್ಣುಗಳನ್ನು ಖರೀದಿಸಲು ಬರುವ ಗ್ರಾಹಕರು ಪ್ರಯೋಜನವನ್ನು ಪಡೆದುಕೊಳ್ಳಬಹುದು.
ನಗರದ ಲಾಲ್‌ಬಾಗ್ ಉದ್ಯಾನದಲ್ಲಿ ಮೇಳದ ಕೇಂದ್ರವಾಗಲಿದ್ದು, ಕಬ್ಬನ್ ಪಾರ್ಕ್‌ನಲ್ಲಿ ಚಟುವಟಿಕೆಗಳು ಸಣ್ಣ ಪ್ರಮಾಣದಲ್ಲಿ ನಡೆಯಲಿವೆ ಎಂದು ತೋಟಗಾರಿಕೆ ಇಲಾಖೆ ಹೇಳಿದೆ. ಮಾವು ಮೇಳವು ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ನಡೆದಿಲ್ಲ, ಆದರೂ ಈ ಮಾವು ಮೇಳದಲ್ಲಿ ನೇರವಾಗಿ ಗ್ರಾಹಕರಿಗೆ ಮಾವಿನ ಹಣ್ಣುಗಳನ್ನು ಮಾರಾಟ ಮಾಡಬಹುದೆಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಮಾವು ಪೂರೈಕೆ ಸರಪಳಿಯು ವಿಭಿನ್ನ ದಿಕ್ಕಿನಲ್ಲಿ ವಿಸ್ತರಿಸಿದೆ ಎಂದು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಲಿಮಿಟೆಡ್‌ನ (KSMDMCL) ಮೂಲಗಳು ತಿಳಿಸಿವೆ.

ನಗರಗಳ ಅಪಾರ್ಟ್‌ಮೆಂಟ್ ಫೆಡರೇಶನ್‌ಗಳೊಂದಿಗೆ ಸಂಪರ್ಕ ಹೊಂದಿದ್ದೇವೆ, ದೆಹಲಿಗೆ ಹಣ್ಣುಗಳನ್ನು ಕಳುಹಿಸಿದ್ದೇವೆ ಮತ್ತು ಮೇಳದ ಅನುಪಸ್ಥಿತಿಯು ರೈತರಿಗೆ ಹೆಚ್ಚಿನ ನಷ್ಟವನ್ನು ಉಂಟುಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಮಾವಿನ ಹಣ್ಣುಗಳನ್ನು ಮಾರಾಟ ಮಾಡುವ ಇನ್ನೊಂದು ಮಾರ್ಗವಾಗಿ ಆನ್‌ಲೈನ್ ಪೋರ್ಟಲ್‌ಗಳನ್ನು ಬಳಸಿಕೊಳ್ಳುವ ಮೂಲಕ ಮಾವಿನ ಹಣ್ಣುಗಳನ್ನು ಮಾರಟ ಮಾಡಲಾಗುತ್ತಿದೆ. ಇದು ರೈತರಿಗೆ ನಷ್ಟವಾಗದೇ ಅವರಿಗೆ ಹೆಚ್ಚಿನ ಉಪಾಯವಾಗಿದೆ ಎಂದು ಕೆಎಸ್‌ಎಂಡಿಎಂಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಸಿ.ಜಿ ನಾಗರಾಜು ತಿಳಿಸಿದ್ದಾರೆ.

ಈ ಮೇಳದಿಂದ ಇನ್ನಷ್ಟು ಬೇಡಿಕೆಗಳು ಬಂದರೆ ಮೇಳವು ಬೆಳಗಾವಿ, ಧಾರವಾಡ, ಚಾಮರಾಜನಗರ ಮತ್ತು ರಾಮನಗರದಂತಹ ಜಿಲ್ಲೆಗಳಿಗೆ ಸ್ಥಳಗಳಿಗೆ ದೊಡ್ಡ ಪ್ರಮಾಣದ ಮಾವಿನ ಹಣ್ಣನ್ನು ಕೊಂಡೊಯ್ಯುತ್ತವೆ ಎಂದು ಅವರು ತಿಳಿಸಿದರು. ನಿಗಮವು ಕರ್ನಾಟಕದ ಕೊಪ್ಪಳ ಜಿಲ್ಲೆ ಮತ್ತು ದಕ್ಷಿಣ ಕರ್ನಾಟಕದಂತಹ ಜಿಲ್ಲೆಯಲ್ಲೂ ಮಾವು ಬೆಳೆಯದ ಪ್ರದೇಶಗಳಲ್ಲಿ ಮೇಳವನ್ನು ಆಯೋಜಿಸಲಾಗಿದೆ ಇನ್ನು ಬೇರೆಯ ಜಿಲ್ಲೆಗಳಿಂದ ಮಾವು ಮೇಳದ ಬೇಡಿಕೆಗಳು ಬಂದರೆ ಮೇಳವನ್ನು ಆಯೋಜಿಸಲು ನಿಗಮವು ಸಜ್ಜಾಗಿರುತ್ತದೆ ಎಂದು ನಿಗಮವು ತಿಳಿಸಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications