ಬೆಂಗಳೂರು : ಚೆನ್ನೈ ತಲುಪಿದ ಜೀವಂತ ಹೃದಯ
ಬೆಂಗಳೂರು, ಡಿ.19 : ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ತೆಗೆದುಕೊಂಡು ಹೋಗಿದ್ದ ಜೀವಂತ ಹೃದಯ ಚೆನ್ನೈಗೆ ತಲುಪಿದೆ. ಅಮಿತ್ ಉಪಾಧ್ಯ ಎನ್ನುವವರು ತಮ್ಮ ಮಗಳ ಹೃದಯವನ್ನು ದಾನ ಮಾಡಿದ್ದು, ಚೆನ್ನೈನಲ್ಲಿನ ಮಗುವೊಂದಕ್ಕೆ ಅದನ್ನು ಅಳವಡಿಸಲಾಗುತ್ತದೆ.
ಸಮಯ 2 ಗಂಟೆ : ಜೀವಂತ ಹೃದಯ ಚೆನ್ನೈ ತಲುಪಿದ್ದು, ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಸಮಯ 1.30 : ಜೀವಂತ ಹೃದಯ ಎಚ್‌ಎಎಲ್ ವಿಮಾನ ನಿಲ್ದಾಣ ತಲುಪಿದೆ.
ಸಮಯ 1.22 : ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಎಂ.ಎನ್.ಆರ್.ವಿ.ಪ್ರಸಾದ್ ನೇತೃತ್ವದಲ್ಲಿ ಸಂಚಾರಿ ಪೊಲೀಸರು ಆಂಬ್ಯುಲೆನ್ಸ್ ಸಾಗಲು ಅಗತ್ಯ ಸೌಲಭ್ಯವನ್ನು ಒದಗಿಸಿಕೊಟ್ಟಿದ್ದಾರೆ.
ಸಮಯ 1.20 : ಮಣಿಪಾಲ್ ಆಸ್ಪತ್ರೆಯಿಂದ ಜೀವಂತ ಹೃದಯ ಹೊತ್ತ ಆಂಬ್ಯುಲೆನ್ಸ್ ಎಚ್‌ಎಎಲ್ ಏರ್‌ಪೋರ್ಟ್‌ನತ್ತ ಹೊರಟಿದೆ. ಜಿರೋ ಟ್ರಾಫಿಕ್‌ನಲ್ಲಿ ಹೃದಯವನ್ನು ತೆಗೆದುಕೊಂಡು ಹೋಗಲಾಗುತ್ತಿದೆ.
ಹಿಂದಿನ ಸುದ್ದಿ : ಬೆಂಗಳೂರಿನಿಂದ ಮತ್ತೊಂದು ಜೀವಂತ ಹೃದಯ ಚೆನ್ನೈಗೆ ಹೊರಟಿದೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟ ಮಗುವಿನ ಹೃದಯವನ್ನು ಚೆನ್ನೈಗೆ ತೆಗೆದುಕೊಂಡು ಹೋಗಲಾಗತ್ತದೆ. ಹೃದಯವನ್ನು ವಿಮಾನ ನಿಲ್ದಾಣಕ್ಕೆ ಸಾಗಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಮಣಿಪಾಲ್ ಆಸ್ಪತ್ರೆಯಲ್ಲಿ ಬ್ರೇನ್ ಡೆಡ್ ಆಗಿ ಮೃತಪಟ್ಟ 8 ತಿಂಗಳ ಮಗುವಿನ ಹೃದಯವನ್ನು ದಾನ ಮಾಡಲು ಪೋಷಕರು ಒಪ್ಪಿಗೆ ನೀಡಿದ್ದಾರೆ. ಚೆನ್ನೈನಲ್ಲಿನ 2 ವರ್ಷದ ಮಗುವಿಗೆ ಹೃದಯವನ್ನು ಕಸಿ ಮಾಡಲಾಗುತ್ತದೆ. ಜೀವಂತ ಹೃದಯ ಶೀಘ್ರದಲ್ಲೇ ಮಣಿಪಾಲ್ ಆಸ್ಪತ್ರೆಯಿಂದ ಹೊರಡಲಿದ್ದು, ಎಚ್‌ಎಎಲ್ ಏರ್‌ಪೋರ್ಟ್ ಮೂಲಕ ಚೆನ್ನೈ ತಲುಪಲಿದೆ. [ಬೆಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸಿದ ಜೀವಂತ ಹೃದಯ]

ಸೆ.3ರಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಿಂದ ಜೀವಂತ ಹೃದಯವನ್ನು ಚೆನ್ನೈನ ಪೋರ್ಟಿಸ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತು. ಈ ಬಾರಿ ಮಣಿಪಾಲ್ ಆಸ್ಪತ್ರೆಯಿಂದ ಎಚ್‌ಎಎಲ್ ವಿಮಾಣ ನಿಲ್ದಾಣದ ಮೂಲಕ ಚೆನ್ನೈಗೆ ಹೃದಯವನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

ಕಳೆದ ಬಾರಿ ತರಾತುರಿಯಲ್ಲಿ ಎಲ್ಲಾ ವ್ಯವಸ್ಥೆ ಮಾಡಿಕೊಂಡು ಹೃದಯ ಸಾಗಣೆ ಮಾಡಲಾಗಿತ್ತು. ಈ ಬಾರಿ ಸಂಚಾರಿ ಪೊಲೀಸರಿಗೆ ಮೊದಲೇ ಮಾಹಿತಿ ನೀಡಿದ್ದು, ಜೀರೋ ಟ್ರಾಫಿಕ್ ಮೂಲಕ ಜೀವಂತ ಹೃದಯವಿರುವ ಆಂಬ್ಯುಲೆನ್ಸ್ ಎಚ್‌ಎಎಲ್ ವಿಮಾನ ನಿಲ್ದಾಣ ತಲುಪಲಿದೆ. ಅಲ್ಲಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಹೃದಯವನ್ನು ತೆಗೆದುಕೊಂಡು ಹೋಗಲಾಗುತ್ತದೆ. [ಬಡವರಿಗಾಗಿ ಮಿಡಿಯುತ್ತಿರುವ 'ಹೃದಯ'ವಂತೆ ರೀನಾ]
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications