Bengaluru Metro, Airport: ಬೆಂಗಳೂರು ಜನ ಮರೆಯಲಾಗದ ಯೋಜನೆಗಳಿಗೆ ಚಾಲನೆ ನೀಡಿದ್ದ ಮನಮೋಹನ್ ಸಿಂಗ್
Bengaluru Airport, Metro: ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ (ಡಿಸೆಂಬರ್ 26) ರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ನವದೆಹಲಿಯ ಏಮ್ಸ್‌ಗೆ ಅವರನ್ನು ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇನ್ನು ಅವರು ಬೆಂಗಳೂರಿನ ಜನರು ಮರೆಯಲಾದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರು ಮಂದಿ ಎಂದೆಂದಿಗೂ ಮರೆಯದ ಯೋಜನೆಗಳಿಗೆ ಚಾಲನೆ ನೀಡಿದ್ದರು. ಹೀಗೆ ತಮ್ಮ ಅಧಿಕಾರಾವಧಿಯಲ್ಲಿ ಬೆಂಗಳೂರಿಗೆ ಅಪಾರ ಕೊಡುಗೆ ನೀಡಿದ್ದಾರೆ.

2008ರಲ್ಲಿ ಪ್ರಧಾನ ಮಂತ್ರಿ ಆಗಿದ್ದ ವೇಳೆ ಮನಮೋಹನ್ ಸಿಂಗ್ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ್ದರು. ವಿಮಾನ ನಿಲ್ದಾಣ ಉದ್ಘಾಟನೆಯಾದ ಮೂರು ವರ್ಷಗಳ ನಂತರ ಮೊದಲ ನಮ್ಮ ಮೆಟ್ರೋ ಮಾರ್ಗವನ್ನು ಲೋಕಾರ್ಪಣೆ ಮಾಡಿದ್ದರು. ಅಕ್ಟೋಬರ್ 20, 2011ರಂದು ಬೈಯಪ್ಪನಹಳ್ಳಿಯಿಂದ ಎಂಜಿ ರೋಡ್ ಮೊದಲ ಮೆಟ್ರೋ ರೈಲಿಗೆ ಚಾಲನೆ ನೀಡಿದ ಕೀರ್ತಿ ಅವರದ್ದಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಮನಮೋಹನ್ ಸಿಂಗ್ ಅವರು ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರು ಅಭಿವೃದ್ಧಿಗೆ ತುಂಬಾ ಕೊಡುಗೆಗಳನ್ನು ನೀಡಿದ್ದಾಎಎ. ನರ್ಮ್ ಯೋಜನೆ ಮೂಲಕ ಅನೇಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದುರ.
ಅಲ್ಲದೆ, ಬೆಂಗಳೂರಿನ ಅನೇಕ ಮೇಲ್ಸೇತುವೆಗಳು ಇವರು ನೀಡಿದ ಕೊಡುಗೆಗಳಾಗಿವೆ. ಅವರ ಬಗ್ಗೆ ಮಾತನಾಡಲು ಒಂದು ದಿನ ಸಾಲುವುದಿಲ್ಲ. ಅವರು ದೇಶದ ಎಲ್ಲಾ ವರ್ಗದ ಜನರಿಗೆ ಮರೆಯಲಾಗದ ಕೊಡುಗೆ ನೀಡಿದ್ದಾರೆ. ರೈತರ ಸಾಲಮನ್ನಾ ಮಾಡಿ ಅವರ ಪರವಾಗಿ ದೃಢವಾಗಿ ನಿಂತವರಾದ ಕೀರ್ತಿ ಅವರದ್ದಾಗಿದೆ ಎಂದು ಹೇಳಿದರು.
ಇನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ರಾಜಕೀಯ ವ್ಯಕ್ತಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನಕ್ಕೆ ಪ್ರತಿಕ್ರಿಯೆಯಾಗಿ, ಡಿಸೆಂಬರ್ ಕೇಂದ್ರದ ಸರ್ಕಾರವು 7 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
ಮನಮೋಹನ್ ಸಿಂಗ್ ಅವರು ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಎಂದೇ ಪ್ರಖ್ಯಾತಿ ಹೊಂದಿದವರಾಗಿದ್ದರು. 1990-91ರ ಗಲ್ಫ್ ಯುದ್ಧವು ತೈಲ ಬೆಲೆಗಳಲ್ಲಿ ತೀವ್ರ ಹೆಚ್ಚಳಕ್ಕೆ ಕಾರಣವಾಯಿತು. ಇದರೊಂದಿಗೆ ಭಾರತವು ಅಂದು ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸಿತ್ತಿತ್ತು. ಈ ವೇಳೆ ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ಮನಮೋಹನ್ ಸಿಂಗ್ ಅವರು ನಿಭಾಯಿಸಿದ ರೀತಿಯನ್ನು ಮರೆಯುವಂತಿಲ್ಲ.
ಇದೇ ಸಮಯದಲ್ಲಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಕೆಲಸಗಾರರಿಂದ ರವಾನೆ ಆಗುತ್ತಿದ್ದ ಹಣವು ಕುಸಿಯಿತು. ಇದರಿಂದ ಭಾರತದ ವಿದೇಶೀ ವಿನಿಮಯದ ಮೀಸಲಿನ ಪ್ರಮಾಣವು $6 ಶತಕೋಟಿಗಿಂತ ಕಡಿಮೆ ಮಟ್ಟದ ಕುಸಿತಕ್ಕೆ ಕಾರಣವಾಯಿತು. ಇದು ಭಾರತದ ವಿದೇಶೀ ವಿನಿಮಯ ಸಂಗ್ರಹವನ್ನು ಕೇವಲ ಮೂರು ವಾರಗಳ ಆಮದುಗಳನ್ನು ಸರಿದೂಗಿಸಲು ಅಷ್ಟೇ ಸಾಗುತ್ತಿತ್ತು.
ಇದಕ್ಕೂ ಮೊದಲು, ಚಂದ್ರಶೇಖರ್ ಅವರ ಉಸ್ತುವಾರಿ ಸರ್ಕಾರವು ಚಿನ್ನವನ್ನು ಒತ್ತೆ ಇಡಲು ಆರ್‌ಬಿಐನ ಪ್ರಖ್ಯಾತ ಸಲಹೆಯನ್ನು ತೆಗೆದುಕೊಂಡು, ಗೌಪ್ಯ ಕಾರ್ಯಾಚರಣೆಯ ಮೂಲಕ ಸುಮಾರು 47 ಟನ್‌ಗಳಷ್ಟು ಚಿನ್ನವನ್ನು ನಾಲ್ಕು ಹಂತಗಳಲ್ಲಿ ಜುಲೈವರೆಗೆ ವಿದೇಶಗಳಿಗೆ ರವಾನೆ ಮಾಡಲಾಯಿತು. ಈ ಮೂಲಕ ಸುಮಾರು $400 ಮಿಲಿಯನ್ ಸಂಗ್ರಹಿಸಿತ್ತು. ಆದರೆ ನಂತರ ಬಂದ ಪಿ.ವಿ.ನರಸಿಂಹರಾವ್ ಸರ್ಕಾರದಲ್ಲಿ ವಿತ್ತ ಸಚಿವರಾಗಿ ಮನಮೋಹನ್ ಸಿಂಗ್ ಅವರು ತಂದ ಸುಧಾರಣೆಗಳು ಭಾರತದ ಆರ್ಥಿಕತೆಯನ್ನು ಉದಾರೀಕರಣಗೊಳಿಸಿ, ಭಾರತೀಯ ಆರ್ಥಿಕತೆ ವ್ಯವಸ್ಥೆಯನ್ನು ಶಾಶ್ವತವಾಗಿ ಬದಲಾಯಿಸಿತ್ತು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications