ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಎಂಎ ವಂಚನೆ ಪ್ರಕರಣ : ಮನ್ಸೂರ್‌ ಖಾನ್‌ ನ್ಯಾಯಾಲಯಕ್ಕೆ ಹಾಜರ್

|
Google Oneindia Kannada News

ಬೆಂಗಳೂರು, ಜುಲೈ 20: ಐಎಂಎ ಬಹುಕೋಟಿ ಹಗರಣಕ್ಕೆ ಕಾರಣರಾದ ಮನಸೂರ್‌ಖಾನ್‌ನನ್ನು ಬೆಂಗಳೂರಿನ ಇಡಿ ಕಚೇರಿಗೆ ಕರೆತರಲಾಗಿದೆ. ಈಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ದುಬೈನಿಂದ ದೆಹಲಿಗೆ ಮನ್ಸೂರ್ ಹೊರಟಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡಿದ್ದ ಎಸ್‌ಐಟಿಯು ವಿಮಾನ ನಿಲ್ದಾಣದಲ್ಲಿ ಕಾದು ಕೂತು ಆತನನ್ನು ಬಂಧಿಸಿದ್ದರು. ಮನ್ಸೂರ್ ಖಾನ್‌ನನ್ನು ಇಡಿ ಅಧಿಕಾರಿಗಳು ಶುಕ್ರವಾರ ರಾತ್ರಿ ದೆಹಲಿ ಕೋರ್ಟ್ ಎದುರು ಹಾಜರು ಪಡಿಸಲಾಗಿತ್ತು. ಇಂದು ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಕರೆತರಲಾಗಿದೆ. ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಬಹುಕೋಟಿ ವಂಚಕ ಮನ್ಸೂರ್ ಅಲಿಖಾನ್ ಇಂದು ಬೆಂಗಳೂರಿಗೆ ಬಹುಕೋಟಿ ವಂಚಕ ಮನ್ಸೂರ್ ಅಲಿಖಾನ್ ಇಂದು ಬೆಂಗಳೂರಿಗೆ

ಐಎಂಎ ಸಂಸ್ಥೆಯು ಸಾವಿರಾರು ಜನರಿಗೆ 4000 ಸಾವಿರ ಕೋಟಿಗೂ ಅಧಿಕ ಹಣ ವಂಚನೆ ಮಾಡಿದೆ ಎನ್ನಲಾಗಿದ್ದು, ಮನ್ಸೂರ್ ಖಾನ್ ಮೇಲೆ 60000 ಕ್ಕೂ ಹೆಚ್ಚು ಪ್ರಕರಣಗಳು ಕರ್ನಾಟಕ, ಹೊರ ರಾಜ್ಯ ಸೇರಿದಂತೆ ಹೊರ ದೇಶಗಳಿಂದಲೂ ದಾಖಲಾಗಿದ್ದವು. ಬಳ್ಳಾರಿಯ ಕಾವೇರಿ ಜಂಕ್ಷನ್ ಬಳಿ ಕಾರಿನಲ್ಲಿ ಖಾನ್‍ನನ್ನು ಇಡಿ ಅಧಿಕಾರಿಗಳು ಕರೆದುಕೊಂಡು ಬರುತ್ತಿದ್ದಾರೆ. ಬೆಳಗ್ಗೆ 1 ಗಂಟೆಗೆ ಶಾಂತಿನಗರದ ಇಡಿ ವಿಶೇಷ ಕೋರ್ಟ್ ಎದುರು ಅಧಿಕಾರಿಗಳು ಮನ್ಸೂರ್ ಖಾನ್‍ನನ್ನು ಹಾಜರು ಪಡಿಸಿದ್ದಾರೆ.

Mansoor khan appeared before Special PMLA court

ಜೂನ್ 8 ರಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಕುಟುಂಬ ಸದಸ್ಯರ ಸಮೇತ ಮನ್ಸೂರ್ ಖಾನ್ ಪರಾರಿ ಆಗಿದ್ದ. ಅಲ್ಲಿಂದಲೇ ವಿಡಿಯೋಗಳನ್ನು ಬಿಡುಗಡೆ ಮಾಡಿ ಕೆಲವು ಗಣ್ಯರಿಗೆ ಕೋಟ್ಯಂತ ರೂಪಾಯಿ ಲಂಚ ನೀಡಿದ್ದಾಗಿ ಹೇಳಿದ್ದ, ಇದರಲ್ಲಿ ಶಾಸಕ ರೋಷನ್ ಬೇಗ್ ಸಹ ಒಬ್ಬರು.

ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು.

ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.

English summary
IMA ponzi scam case: IMA founder-owner Mohammed Mansoor Khan at Shanti Nagar Enforcement Directorate (ED) office in Bengaluru. He will be produced before Special PMLA court today where the agency will seek his custodial remand.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X