ಮಲ ಹೊರುವ ಪದ್ಧತಿ ಜೀವಂತ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಲಾವ್‌

ಬೆಂಗಳೂರು, ಜುಲೈ 3: ಮಲ ಹೊರುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯಿದೆ 2013ರ ಅಡಿಯಲ್ಲಿರುವ ನಿಯಮಗಳ ಅನುಸಾರ ಕೈಗೊಂಡಿರುವ ಕ್ರಮಗಳ ಕುರಿತಂತೆ ಜುಲೈ 9ರಂದು ಪ್ರತಿಕ್ರಿಯೆ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕಳೆದ ವಿಚಾರಣೆ ವೇಳೆ ಪದ್ದತಿ ಇನ್ನೂ ಜೀವಂತವಾಗಿರುವ ಬೇಸರ ವ್ಯಕ್ತಪಡಿಸಿದ್ದ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

Manual Scavenging High Court Directed State To Give Explanation On Implementation

ನಿಷೇಧದ ನಡುವೆಯೂ ಮಲ ಹೊರುವ ಪದ್ದತಿ ಜಾರಿಯಲ್ಲಿರುವ ಕುರತು ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಅರ್ಜಿ ಮತ್ತು ಅಲ್ ಇಂಡಿಯನ್ ಸೆಂಟ್ರಲ್ ಕೌನ್ಸಿಲ್ ಟ್ರೇಡ್ ಯೂನಿಯನ್ ಮತ್ತು ಹೈಕೋರ್ಟ್ ಕಾನೂನು ಸೇವೆಗಳ ಪಾಧಿಕಾರ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

ತಡೆಗೆ ನಿರ್ದೇಶನ ನೀಡಲು ಸೂಚನೆ

ಕಾನೂನಿನಲ್ಲಿ ನಿಷೇಧವಿದ್ದರೂ, ರಾಜ್ಯದಲ್ಲಿ ಮಲ ಹೊರುವ ಪದ್ಧತಿ ಜಾರಿಯಲ್ಲಿರುವ ಕ್ರಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತ್ತು.

ಅರ್ಜಿಯಲ್ಲಿ ರಾಜ್ಯದಲ್ಲಿ ನಿಷೇಧದ ನಡುವೆ ಎಷ್ಟು ಮಲ ಹೊರುವ ಪದ್ಧತಿಯ ಪ್ರಕರಣಗಳು ದಾಖಲಾಗಿದೆ. ಅಂತಹ ಘಟನೆಗಳ ತಡೆಯಲು ಸ್ಥಳೀಯ ಸಂಸ್ಥೆಗಳು ಸೂಚನೆ ನೀಡುವುದು ಮತ್ತು ಬಹಿರಂಗವಾಗಿ ಮಲ ಹೊರುವ ಪದ್ದತಿ ನಿಷೇಧಿಸಲು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸೂಚನೆ ನೀಡಲು ಅರ್ಜಿಯಲ್ಲಿ ಕೋರಲಾಗಿತ್ತು.

ಅರ್ಜಿದಾರರೊಬ್ಬರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರು, ಕಾಯಿದೆಯಡಿಯಲ್ಲಿ ರೂಪಿಸಿರವ ನಿಯಮಗಳನ್ನು ರಾಜ್ಯ ಸರ್ಕಾರ ಅನುಷ್ಟಾನ ಮಾಡುವಲ್ಲ ವಿಫಲವಾಗಿದೆ. ಕಾಯಿದೆಯ ಸೆಕ್ಷನ್ ೨೬ರ ಪ್ರಕಾರ ವರ್ಷಕ್ಕೆ ಎರಡು ರಾಜ್ಯ ಮಟ್ಟದ ಸಭೆಗಳನ್ನು ಆಯೋಜನೆ ಮಾಡಿ, ಕಾಯಿದೆಯಲ್ಲಿನ ನಿಯಮಗಳನ್ನು ಜಾರಿ ಮಾಡುವ ಕುರಿತಂತೆ ಪರಿಶೀಲನೆ ನಡೆಸಬೇಕು ಎಂಬುದಾಗಿ ತಿಳಿಸಲಾಗಿದೆ. ಆದರೆ, ಕಳೆದ ವರ್ಷದಿಂದ ಕೇವಲ ಒಂದು ಸಭೆಯನ್ನು ಮಾತ್ರ ಮಾಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಆರು ತಿಂಗಳು ಕಳೆದರೂ ಒಂದು ಸಭೆಯನ್ನೂ ನಡೆಸಿಲ್ಲ ಎಂದು ವಿವರಿಸಿದರು.

ಅಲ್ಲದೇ ರಾಜ್ಯ ಮಟ್ಟದ ಸಭೆಗಳನ್ನು ಜನವರಿ ಮತ್ತು ಜುಲೈ ತಿಂಗಳಲ್ಲಿ ನಡೆಸುವುದು ಸಾಮಾನ್ಯವಾಗಿದೆ. ಈ ಸಭೆಗಳು ಶಾಸನ ಬದ್ಧವಾಗಿದ್ದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಬೇಕಾಗಿದ್ದು, ಕಾಯಿದೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿವಿಧ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ವರದಿಯನ್ನು ಮಾಡಬೇಕಾಗಿದೆ ಎಂದು ಅವರು ಪೀಠಕ್ಕೆ ತಿಳಿಸಿದರು.

ಈ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಲೋಕಸಭೆ ಚುನಾವಣೆಯ ಕಾರಣದಿಂದ ಸಭೆ ನಡೆಸಲು ಸಾಧ್ಯವಾಗಲಿಲ್ಲ. ಆದರೆ, ಶೀಘ್ರದಲ್ಲಿ ಸಭೆ ನಡೆಸಲು ಕಾಲಾವಕಾಶ ಕೋರಿದರು. ಅದಕ್ಕೆ ಪೀಠ ಮಾಹಿತಿ ಪಡೆದು ತಿಳಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+