ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಿರಿಯ ಕವಯಿತ್ರಿ 'ಮಾನ್ಯ'ಳ ಕೃತಿಗೆ ಮೂರು ಬಿರುದುಗಳು

|
Google Oneindia Kannada News

ಬೆಂಗಳೂರು, ಆಗಸ್ಟ್ 27: ಕಿರಿಯ ಕವಯಿತ್ರಿ ಎಂದೇ ಕರೆಯುವ 9 ವರ್ಷದ ಮಾನ್ಯ ಹರ್ಷಗೆ ಮೂರು ಬಿರುದುಗಳು ಸಂದಿವೆ.

ಮಾನ್ಯ ಇದೀಗ ವಿಬ್‌ಗಯಾರ್ ಶಾಲೆಯಲ್ಲಿ ಓದುತ್ತಿದ್ದಾಳೆ, ಆಕೆ ಬರೆದ "ನೇಚರ್ ಅವರ್ ಫ್ಯೂಚರ್" ಪುಸ್ತಕ ಬಿಡುಗಡೆ ಗೊಂಡಿದ್ದು, ಮೂರು ದಾಖಲೆಗಳನ್ನು ರಚಿಸಿದೆ. ಒಂಬತ್ತನೇ ವಯಸ್ಸಿನಲ್ಲಿಯೇ ಪುಸ್ತಕ ಬರೆದು ಅತಿ ಕಿರಿಯ ವಯಸ್ಸಿನ ಕವಯಿತ್ರಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ಚಿತ್ರ ಹಾಗೂ ಹರ್ಷ ದಂಪತಿಗಳ ಮಗಳಾದ ಮಾನ್ಯ ಹರ್ಷ ಮೂರು ದಾಖಲೆಗಳ‌ ಒಡತಿ. ಏಷಿಯಾ ಬುಕ್ ಆಫ್ ರೆಕಾರ್ಡ್ಸ್ , ಇಂಡಿಯಾ ಬುಕ್ ಆಫ್ ರೆಕಾರ್ಡ್ಸ, ವಜ್ರ ವರ್ಲ್ಡ್ ರೆಕಾರ್ಡ್, ವತಿಯಿಂದ ಮೂರು ಬಿರುದುಗಳು ಈಗೆ ಪಾತ್ರವಾಗಿವೆ.

Manya Has Received 3 Awards For Her Book

ಚಿಕ್ಕ ವಯಸ್ಸಿನಲ್ಲೇ, ಪರಿಸರ ಪ್ರಜ್ಞೆ ಹಾಗೂ ಕಾಳಜಿ ಬೆಳೆಸಿಕೊಂಡಿರುವ ಒಂಬತ್ತರ ವಯಸ್ಸಿನಲ್ಲಿಯೇ ನೇಚರ್ ಅವರ್ ಫ್ಯೂಚರ್ ಪುಸ್ತಕ ಬರೆದು ಭಾರತದ ಕಿರಿಯ ಕವನಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾಳೆ.

ನೇಚರ್ ಅವರ್ ಫ್ಯೂಚರ್ ಪುಸ್ತಕ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಗಿಟ್ಟಿಸಿಕೊಂಡಿದೆ. 55 ಕವನಗಳನ್ನು ಒಳಗೊಂಡಿರುವ ಈ ಪುಸ್ತಕ, ಚಿಣ್ಣರಲ್ಲಿ ಪರಿಸರ ಪ್ರಜ್ಞೆ ಮೂಡಿಸಿದೆ. ದೇಶ, ದೇಶ ಪ್ರೇಮ,ಸೈನಿಕರ‌ ತ್ಯಾಗ-ಬಲಿದಾನ, ಪ್ರಕೃತಿ, ಪರಿಸರ‌, ಹೆಣ್ಣಿನ ಮಹತ್ವದ ಬಗ್ಗೆ ಕವನಗಳನ್ನು ಒಳಗೊಂಡಿರುವ ಈ ಪುಸ್ತಕ ದಾಖಲೆ ಸೃಷ್ಟಿಸಿದೆ.

-ವಜ್ರ ವರ್ಲ್ಡ್ ರೆಕಾರ್ಡ್ ವತಿಯಿಂದ ಈ ಪುಸ್ತಕ ಬರೆದ ಮಾನ್ಯ ಹರ್ಷ ಭಾರತದ ಅತ್ಯಂತ ಕಿರಿಯ ಕವಯಿತ್ರಿ ಎಂಬ ಬಿರುದು ನೀಡಿ ಸನ್ಮಾನಿಸಲಾಗಿದೆ. ಏಷಿಯಾ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ, ಗ್ರ್ಯಾಂಡ್ ಮಾಸ್ಟರ್ ಬಿರುದು , ಪಾರಿತೋಷಕ ನೀಡಿ ಗೌರವಿಸಲಾಗಿದೆ.

Manya Has Received 3 Awards For Her Book

-ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ ಪರಿಸರ ಕುರಿತ ಕವನಗಳು ರಚಿಸಿದ ಅತ್ಯಂತ ಕಿರಿಯ ಕವಯಿತ್ರಿ ಎಂಬ ಬಿರುದು, ಪಾರಿತೋಷಕ, ಮೆಡಲ್ ನೀಡಿ ಗೌರವಿಸಲಾಗಿದೆ.

ಸಣ್ಣ ವಯಸ್ಸಿನಲ್ಲೇ ಬರೆಯುವ ಗೀಳು ಅಂಟಿಸಿಕೊಂಡ ಮಾನ್ಯ, ಆರನೇ ವಯಸ್ಸಿಗೇ ಹಲವಾರು ಕವನಗಳನ್ನು ರಚಿಸತೊಡಗಿದಳು. ಇದನ್ನು ಕಂಡ ಆಕೆಯ ಶಾಲಾ ಶಿಕ್ಷಕರು, ಈ ಪುಟ್ಟ ಕವಯಿತ್ರಿಯ ಬರೆಯುವ ಹವ್ಯಾಸವನ್ನು ಮತ್ತಷ್ಟು ಪ್ರೋತ್ಸಾಹಿಸಿದರು.

ಆಕೆಗೆ 2018ರ ಕಿಡ್ಸ್ ವರ್ಲ್ಡ್ ಅಂತಾರಾಷ್ಟ್ರೀಯ ಸಣ್ಣ ಕಥೆಗಳ ಪ್ರಶಸ್ತಿಗೂ ಮಾನ್ಯ ಪಾತ್ರರಾಗಿದ್ದಾಳೆ. ಈಕೆ ರಚಿಸಿದ," ಥಾಂಕ್ಸ್ ಗಿವಿಂಗ್" ಸಣ್ಣ ಕಥೆಯು ಭಾರೀ ಪ್ರಶಂಸೆಗೆ ಒಳಪಟ್ಟಿದೆ.

Manya Has Received 3 Awards For Her Book

ಮೂರು ವರ್ಷಗಳ, ಪುಸ್ತಕ ಮುದ್ರಿಸುವ, ಈಕೆಯ ಕನಸು ಈಗ ನನಸಾಗಿದೆ. "ನೇಚರ್ ಅವರ್ ಫ್ಯೂಚರ್" ಪುಸ್ತಕ ಮಾನ್ಯಾಳ ಪರಿಸರ ಪ್ರಜ್ಞೆ ಹಾಗೂ ಕಾಳಜಿ ಗೆ ಕನ್ನಡಿ ಹಿಡಿದಂತಿದೆ.

ಮಾರ್ಚ್ 22,2018 ರೈ ವಿಶ್ವ ಜಲ ಸಂರಕ್ಷಣಾ ದಿನಾಚರಣೆ ಅಂಗವಾಗಿ , ಚಿನ್ನದ ವಾಕಥಾನ್ ಆಯೋಜಿಸಿದ್ದ ಈ ಪೋರಿ, ಸ್ನೇಹಿತರೊಂದಿಗೆ "ನೀರು ಉಳಿಸಿ" ಆಂದೋಲನ ನಡೆಸಿದ್ದಳು. ಅಂತೆಯೇ, ಜೆ.ಪಿ.ನಗರದ ಪುಟ್ಟೇನಹಳ್ಳಿ ಕೆರೆಗೆ ಕಾಲ್ನಡಿಗೆಯಲ್ಲಿ ತೆರಳಿ, ಗಿಡಗಳನ್ನು ನೆಟ್ಟು ಪರಿಸರ ಪ್ರಜ್ಞೆ ಮೂಡಿಸದಳು ಮಾನ್ಯ ಹರ್ಷ.

ಕಲೆ, ಕ್ರೀಡೆ ಯಲ್ಲಿ ವಿಶೇಷ ಆಸಕ್ತಿ ಹೊಂದಿರುವ ಮಾನ್ಯ, ,ಹಾಡು, ಕುಣಿತ,ಈಜುಗಾರಿಕೆ, ಯಲ್ಲಿ ಹಲವಾರು ಪ್ರಶಸ್ತಿ ಗೌರವಗಳನ್ನು ಪಡೆದಿದ್ದಾಳೆ. ಕರಾಟೆ ಹಾಗೂ ಟೆಕ್ವಾಂಡೋ ವಿದ್ಯೆ ರೂಢಿಸಿಕೊಂಡಿರುವ ಮಾನ್ಯ ಕಲೆ-ಸಾಹಿತ್ಯ-ಕ್ರೀಡೆಗಳಲ್ಲಿ ಮುಂಚೂಣಿಯಲ್ಲಿದ್ದಾಳೆ.

ಇಷ್ಟಕ್ಕೆ ನಿಲ್ಲದೆ ಮಾನ್ಯಾಳ ಪುಸ್ತಕ ಪ್ರೀತಿ, ಈಗ ಈಕೆ ಕನ್ನಡದಲ್ಲಿ ರಚಿಸಿರುವ ಕವನ ಹಾಗೂ ಕಥೆಗಳ ಗುಚ್ಛವನ್ನು ಮುದ್ರಿಸುವ ತವಕದಲ್ಲಿದ್ದಾಳೆ.

English summary
Manya has received 3 Awards for her book NATURE OUR FUTURE, INDIA BOOK OF RECORDS - Youngest to write a book on NatureASIA BOOK OF RECORDS - GrandMaster TitleVAJRA BOOK OF WORLD RECORD - Youngest Poet on Nature.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X