ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾನ್ಯತಾ ಟೆಕ್ ಪಾರ್ಕ್ ವಿರುದ್ಧ ಕ್ರಿಮಿನಲ್ ಪ್ರಕರಣ?

By Mahesh
|
Google Oneindia Kannada News

ಬೆಂಗಳೂರು, ಅ.08: ರಾಜ ಕಾಲುವೆ ಒತ್ತುವರಿ ಮಾಡಿಕೊಂಡ ಮಾನ್ಯತಾ ಟೆಕ್ ಪಾರ್ಕ್ ವಿರುದ್ಧ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ರಿಮಿನಲ್ ಪ್ರಕರಣ ದಾಖಲಿಸಲಿದೆ ಎಂದು ಮೇಯರ್ ಮಂಜುನಾಥ್ ರೆಡ್ಡಿ ಅವರು ಗುರುವಾರ ಹೇಳಿದ್ದಾರೆ.

ವಸಂತನಗರ ವಾರ್ಡ್‌ನಲ್ಲಿ ಬಿಬಿಎಂಪಿ ವತಿಯಿಂದ ನಿರ್ಮಿಸ ಲಾಗಿರುವ ವಾಣಿಜ್ಯ ಸಮುಚ್ಚಯವನ್ನು ಉದ್ಘಾಟಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು. ಮಾನ್ಯತಾ ಟೆಕ್‌ಪಾರ್ಕ್‌ನವರು ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿದ್ದಾರೆ.

ಒತ್ತುವರಿ ತೆರವುಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಅವರು ಪ್ರತಿಕ್ರಿಯಿಸಿಲ್ಲ. ಪ್ರಕಾಶ್ ಎಂಬ ಬಾಲಕ ರಾಜಕಾಲುವೆಯಲ್ಲಿ ಕೊಚ್ಚಿಹೋದ ಪ್ರಕರಣಕ್ಕೆ ಒತ್ತುವರಿಯೇ ಕಾರಣವಾಗಿದೆ. ಮಾನ್ಯತಾ ಟೆಕ್‌ಪಾರ್ಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಲಾಗಿದೆ ಎಂದರು.

Manyata Tech Park to face criminal charges

ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಬಳಿಯ ಪಿ ಅಂಡ್‌ ಟಿ ಕಾಲೋನಿ ನಿವಾಸಿವೆಂಕಟೇಶ್‌ ಅವರ ಪುತ್ರ, ಬೆಂಗಳೂರು ತಮಿಳು ಸಂಘಂ ಸ್ಕೂಲ್‌ ನಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಪ್ರಕಾಶ್‌ ಎಂಬಾತನ ಶವ ಗುರುವಾರ ಬೆಳಗ್ಗೆ ಪತ್ತೆಯಾಗಿದೆ.

ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಲು ಮೇಯರ್ ಮಂಜುನಾಥ್ ಅವರು ಆಗಮಿಸಿದ್ದರು. ರಾಜಕಾಲುವೆಯಲ್ಲಿ ಕೊಚ್ಚಿಹೋಗಿ ಮೃತಪಟ್ಟ ಬಾಲಕ ಪ್ರಕಾಶ್ ಕುಟುಂಬ ವರ್ಗದವರಿಗೆ ಮಾನ್ಯತಾ ಟೆಕ್‌ಪಾರ್ಕ್ ವತಿಯಿಂದಲೇ ಪರಿಹಾರ ಕೊಡಿಸುವುದಾಗಿ ಮೇಯರ್ ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್, ಆಯಾ ವಾರ್ಡ್‌ಗಳಲ್ಲಿ ಚರಂಡಿ ವ್ಯವ್ಥೆಯನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಲ್ಲಿ ಅಧಿಕಾರಿಗಳು ವಿಫಲವಾಗಿರುವುದು ಕಂಡು ಬಂದಿದೆ.

ಟೆಕ್‌ಪಾರ್ಕ್‌ನವರು ಒತ್ತುವರಿ ಮಾಡಿಕೊಂಡಿರುವ ರಾಜಕಾಲುವೆಯನ್ನು ಈ ಕೂಡಲೇ ತೆರವುಗೊಳಿಸಲು ಸೂಚಿಸಿದ್ದೇವೆ ಇನ್ನು ಮುಂದೆ ಯಾವುದೇ ಚರಂಡಿಗಳಲ್ಲಿ ಅನಾಹುತ, ಪ್ರಾಣಹಾನಿ ಸಂಭವಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

English summary
Bengaluru Mayor BN Manjunatha Reddy on Thursday said the Bruhat Bengaluru Mahanagara Palike (BBMP) would file a criminal complaint against Manyata Tech Park for encroaching on the storm water drain in which a 15-year-old boy was washed away on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X