ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾರ್ಗ ಬದಲಾವಣೆ ಬಳಿಕ ಕೆಆರ್ ಮಾರ್ಕೆಟ್ ಮೇಲ್ಸೇತುವೆ ದುರಸ್ತಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 25: ಮಾರ್ಗ ಬದಲಾವಣೆಯಾದ ಬಳಿಕ ಕೆಆರ್ ಮಾರುಕಟ್ಟೆ ಮೇಲ್ಸೇತುವೆ ದುರಸ್ತಿ ಕಾರ್ಯ ಆರಂಭಿಸಲಾಗುತ್ತದೆ.

ಸುಮಾರು 2.65 ಕಿ.ಮೀ ಉದ್ದವಿರುವ ಮೇಲ್ಸೇತುವೆಯ ದುರಸ್ತಿಗೆ 4.30 ಕೋಟಿ ರೂ. ವೆಚ್ಚ ಮಾಡಲಾಗುತ್ತಿದ್ದು, ನಾಗೇಶ್ ಮಾಯಣ್ಣ ಸಾಯಿ ತ್ರಿಷಾ ಇನ್‌ಫ್ರಾ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಕಾಮಗಾರಿ ಗುತ್ತಿಗೆ ನೀಡಲಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ ಮೇಲೆ ಭಾರಿ ವಾಹನಗಳ ಸಂಚಾರ ನಿಷೇಧ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ ಮೇಲೆ ಭಾರಿ ವಾಹನಗಳ ಸಂಚಾರ ನಿಷೇಧ

ಡಿಸೆಂಬರ್ 26ರಂದೇ ಕಾಮಗಾರಿ ಆರಂಭವಾಗಬೇಕಿತ್ತು ಆದರೆ ಬದಲಿ ಮಾರ್ಗ ಸಿದ್ಧವಾಗದಿರುವ ಹಿನ್ನೆಲೆಯಲ್ಲಿ ಇನ್ನೊಂದು ವಾರ ಮುಂದೂಡುವ ಸಾಧ್ಯತೆ ಇದೆ. ಡಿ.28 ಅಥವಾ 29ರಿಂದ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

Market flyover repair work will start after the arrangements of alternative roads

ಹೆಬ್ಬಾಳದ ಮೂಲಕವೇ ಕೆಂಪೇಗೌಡ ಏರ್‌ಪೋರ್ಟ್‌ಗೆ ನಮ್ಮ ಮೆಟ್ರೋ ಹೆಬ್ಬಾಳದ ಮೂಲಕವೇ ಕೆಂಪೇಗೌಡ ಏರ್‌ಪೋರ್ಟ್‌ಗೆ ನಮ್ಮ ಮೆಟ್ರೋ

ಈ ಅವಧಿಯಲ್ಲಿ ಮೇಲುರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ. ಪುರಭವನದಿಂದ ಮೈಸೂರು ರಸ್ತೆ ಮತ್ತು ಚಾಮರಾಜಪೇಟೆಯ ಕಡೆಗೆ ಸಾಗುವವರು ಪರ್ಯಾಯ ರಸ್ತೆಗಳಲ್ಲಿ ತೆರಳಬೇಕಾಗುತ್ತದೆ. ಒಂದು ಪದರ ಡಾಂಬರು ಕಿತ್ತು ಹಾಕಿ, 3 ಎಂಎಂ ದಪ್ಪದ ಡಾಂಬರು ಶೀಟ್ ಹೊದಿಸಲಾಗುತ್ತದೆ. ಬಳಿಕ 40 ಎಂಎಂ ದಪ್ಪದ ಬಿಟುಮಿನ್ ಹಾಕಲಾಗುವುದು ಎಂಜಿನಿಯರ್ ಒಬ್ಬರು ಮಾಹಿತಿ ನೀಡಿದ್ದಾರೆ.

English summary
Traffic polices are yet to finalize the alternative roads. So sirsi circle flyover repair works have been delayed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X