Breaking: ಮಾರ್ಥಾಸ್ ಆಸ್ಪತ್ರೆಯ ಹೊಸ ಕಟ್ಟಡದ ಮೇಲ್ಛಾವಣಿ ಕುಸಿತ
ಬೆಂಗಳೂರು, ಮೇ31: ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರಿ ನಗರದ ಖಾಸಗಿ ಆಸ್ಪತ್ರೆಯ ಮೇಲ್ಛಾವಣಿ ಕುಸಿದುಬಿದ್ದಿದೆ. ನಿರ್ಮಾಣ ಕಾರ್ಯದಲ್ಲಿ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ತೊಡಗಿಸಿಕೊಂಡಿದ್ದಾರೆ.
ನೃಪತುಂಗ ರಸ್ತೆಯಲ್ಲಿರುವ ಸೇಂಟ್ ಮಾರ್ಥಾಸ್ ಆಸ್ಪತ್ರೆಯ ಮೇಲ್ಛಾವಣಿ ನಿರ್ಮಾಣ ಕಾರ್ಯಕ್ಕಾಗಿ ಐವರು ಕಾರ್ಮಿಕರು ಬೆಳಗ್ಗೆ 6 ಗಂಟೆ ಸುಮಾರಿಗೆ ಕೆಲಸಕ್ಕಾಗಿ ಆಗಮಿಸಿದ್ದರು. ಈ ವೇಳೆ ಏಕಾಏಕಿ ಮೇಲ್ಛಾವಣಿ ಕುಸಿದು ಕೆಳಗೆ ಬಿದ್ದಿದೆ. ಕೆಲಸ ಮಾಡುತ್ತಿದ್ದ ಐವರು ಅವಶೇಷದಡಿ ಸಿಲುಕಿಕೊಂಡಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ಅಗ್ನಿಶಾಮಕದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಇಬ್ಬರನ್ನು ಇಬ್ಬರನ್ನು ರಕ್ಷಿಸಿದ್ದಾರೆ. ಅವಶೇಷದಡಿ ಮತ್ತಿಬ್ಬರು ಸಿಲುಕಿಕೊಂಡಿದ್ದು ಜೆಸಿಬಿ ಬಳಸಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಮಾರ್ಥಾಸ್ ಆಸ್ಪತ್ರೆಯು ಹೊಸದಾಗಿ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿತ್ತು. ಕಳೆದ ಎರಡು ದಿನಗಳ ಹಿಂದಷ್ಟೇ ಸೆಂಟ್ರಿಂಗ್ ಹಾಕಿ ಮೇಲ್ಛಾವಣಿಗೆ ಕಾಂಕ್ರಿಟ್ ಹಾಕಿದ್ದರು ಎನ್ನಲಾಗುತ್ತಿದೆ. ಕಾಂಕ್ರಿಟ್ ಬಳಿಕ ಕಾರ್ಮಿಕರ ಮತ್ತೊಂದು ಪ್ಲೋರ್ ನಿರ್ಮಾಣ ಕಾರ್ಯಕ್ಕಾಗಿ ಕಾರ್ಮಿಕರು ಆಗಮಿಸಿದ್ದರು. ಈ ವೇಳೆಯಲ್ಲಿ ಏಕಾಏಕಿ ಮೇಲ್ಛಾವಣಿ ಕುಸಿದು ಬಿದ್ದಿದೆ.

Recommended Video
ಮಾರ್ಥಾಸ್ ಆಸ್ಪತ್ರೆಯ ಹೊಸ ಕಟ್ಟಡ ಕುಸಿಯಲು ಕಳಪೆ ಕಾಮಗಾರಿ ಕಾರಣ ಎನ್ನಲಾಗುತ್ತಿದೆ. ಇನ್ನು ರಾತ್ರಿ ಸುರಿದ ಮಳೆಯಿಂದಾಗಿ ಮೇಲ್ಛಾವಣಿ ಕುಸಿದಿದೆ ಎಂದು ಸಹ ಹೇಳಲಾಗುತ್ತಿದೆ. ಅದೇನಾದರೂ ಸದ್ಯ ಕಟ್ಟಡದ ಅವಶೇಷದ ಅಡಿಯಲ್ಲಿ ಸಿಲುಕಿರುವ ಇಬ್ಬರು ಕಾರ್ಮಿಕರನ್ನು ರಕ್ಷಿಸುವ ಕಾರ್ಯವನ್ನು ಅಗ್ನಿಶಾಮಕ ಸಿಬ್ಬಂದಿ ಕೈಗೊಂಡಿದ್ದಾರೆ. ಜೆಸಿಬಿ ಸೇರಿದಂತೆ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ತರಿಸಿರುವ ಅಗ್ನಿಶಾಮಕ ದಳ ಐವರು ಕಾರ್ಮಿಕರ ಪೈಕಿ ಮೂವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಇನ್ನುಳಿದ ಇಬ್ಬರು ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.












Click it and Unblock the Notifications