Corona Case Raises: ರಾಜಧಾನಿಯಲ್ಲಿ ಮಾಸ್ಕ್, ಸ್ಯಾನಿಟೈಸ್‌ಗೆ ಭಾರೀ ಬೇಡಿಕೆ, ಮಾರಾಟ ಹೆಚ್ಚಳ
ಬೆಂಗಳೂರು, ಜೂನ್ 04: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೋವಿಡ್ ವೈರಸ್ ಭೀತಿ ಹೆಚ್ಚಾಗಿದೆ. ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ, ಮತ್ತೊಂದೆಡೆ ಸೋಂಕಿನಿಂದ ಒಟ್ಟು ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇಷ್ಟಾದರೂ ಬೆಂಗಳೂರಿನಲ್ಲಿ ಜನರಿಗೆ ಆರೋಗ್ಯ ಕಾಳಜಿ ಇದಿಯಾ? ಇಲ್ಲವೇ? ಎಂಬುದು ಚರ್ಚೆ ಹುಟ್ಟು ಹಾಕಿದೆ. ಸಾರ್ವಜನಿಕ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇರಬೇಕಾದವರು ಮಾಸ್ಕ್ ಧರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಬೆಂಗಳೂರು ನಗರದಲ್ಲಿ ಮನೆಯಿಂದ ಹೊರ ಓಡಾಡುವವರು ಮಾಸ್ಕ್ ಹಾಕುತ್ತಿದ್ದಾರೆ. ಆದರೆ ನಿರೀಕ್ಷಿಸಿದಷ್ಟಿಲ್ಲ ಎನ್ನಲಾಗಿದೆ. ಜನರು ವೈರಸ್ ವಿರುದ್ಧ ಎಚ್ಚರಿಕೆ ಕಾಯ್ದುಕೊಳ್ಳಬೇಕಿದೆ. ಈ ಬಗ್ಗೆ ವಿವಿಧ ಔಷಧಿ ಮಳಿಗೆಗಳು, ಸಾರ್ವಜನಿಕ ಸ್ಥಳ ಭೇಟಿ ನೀಡಿ ಪರಿಶೀಲಿಸಿದ್ದು. ಮಾಸ್ಕ ಖರೀದಿ ಹಾಗೂ ಹ್ಯಾಂಡ್ ಸ್ಯಾನಿಟೈಸರ್‌ಗಳ ಖರೀದಿ ದಿಢೀರ್ ಏರಿಕೆ ಆಗಿರುವುದು ಗೊತ್ತಾಗಿದೆ ಎಂದು 'ಡಿಎಚ್' ವರದಿ ಮಾಡಿದೆ.

ಮಾಸ್ಕ್‌ಗಳ ಮಾರಾಟದಲ್ಲಿ ಏರಿಕೆ ಕಂಡು ಬಂದಿದೆ. ಇದಕ್ಕೆ ಕೊರೋನಾ ಸೋಂಕು ಹರಡುವ ಭೀತಿ ಕಾರಣ ಎಂದು ವಸಂತ ನಗರದ ಔಷಧಾಲಯವೊಂದರ ಮಾಲೀಕರು ತಿಳಿಸಿದ್ದಾರೆ. ಜೊತೆಗೆ ಈ ಭಾಗದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಧೂಳಿನ ಕಾರಣದಿಂದಲೂ ಹೀಗೆ ಮಾಸ್ಕ್ ಖರೀದಿಸುತ್ತಿದ್ದಾರೆ ಅಂತಲೂ ಹೇಳಲಾಗುತ್ತಿದೆ.
ಹಲಸೂರು ಕೆರೆಯ ಸುತ್ತಮುತ್ತಲಿನ ಔಷಧಿ ಅಂಗಳಲ್ಲಿ 20 ರಿಂದ 40 ವರ್ಷ ವಯಸ್ಸಿನವರು ಹೆಚ್ಚಿನ ಸಂಖ್ಯೆಯಲ್ಲಿ ಮಾಸ್ಕ್ ಖರೀದಿಸಿದ್ದು ಗೊತ್ತಾಗಿದೆ. ನಿರಂತರವಾಗಿ ಪ್ರತಿ ದಿನ ಹೆಚ್ಚಿನ ಪ್ರಮಾಣದಲ್ಲಿ ಮಾಸ್ಕ್ ಸೇಲ್ ಆಗುತ್ತಿದೆ. ಹತ್ತಿರವೇ ಕಚೇರಿಗಳು, ಶಾಲಾ, ಕಾಲೇಜುಗಳ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಸ್ಯಾನಿಟೈಸ್ ಹಾಗೂ ಮಾಸ್ಕ್ ಬಳಕೆ ಆಗುತ್ತಿದೆ. ಇದರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಮಾಸ್ಕ್, ಸ್ಯಾನಿಟೈಸರ್ ಬಾಟಲಿ ತರಿಸಿದ್ದೇವೆ ಎಂದು ಔಷಧಿ ಮಳಿಗೆಯೊಂದರ ಸಿಬ್ಬಂದಿ ಮಾಹಿತಿ ಕೊಟ್ಟರು.
ಲಾಕ್‌ಡೌನ್ ದಿನಗಳ ನೆನೆಪು
ಈ ಹಿಂದೆ ಕೊವಿಡ್ ದಿನಗಳಲ್ಲಿ ಅಂದರೆ ಲಾಕ್‌ಡೌನ್ ಸಂದರ್ಭದಲ್ಲಿ ಜನರು ಸ್ಯಾನಿಟೈಸ್, ಮಾಸ್ಕ್ ದಾಸ್ತಾನು ಮಾಡಿಕೊಂಡಿದ್ದೆವು. ಕಾರ್ಪೊರೇಟ್ ಉದ್ಯೋಗಿಗಳು, ವಿದ್ಯಾರ್ಥಿಗಳು, ಕಚೇರಿ ಸಿಬ್ಬಂದಿ, ಮಹಿಳೆಯರು, ವೃದ್ಧರು ಹೆಚ್ಚಿನ ಆರೋಗ್ಯ ಕಾಳಜಿ ವಹಿಸಿದ್ದಾರೆ. ಹಲಸೂರು ವ್ಯಾಪ್ತಿಯ ಸುತ್ತಮುತ್ತ ಮಾಸ್ಕ್ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿ ಆಗಿದೆ. ಆದರೆ ಎಂಜಿ ರಸ್ತೆಯ ವ್ಯಾಪ್ತಿಯ ಔಷಧಿ ಮಳಿಗೆಗಳಲ್ಲಿ ಮಾರಾಟ ಹೆಚ್ಚಳವಾಗಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾಸ್ಕ್ ಮಾರಾಟವಾಗಬಹುದು ಎಂಬ ನಿರೀಕ್ಷೆ ಇದೆ ಎಂದು ಔಷಧಂಗಡಿ ಸಿಬ್ಬಂದಿ ಹೇಳಿದರು.
ಹೆಚ್ಚಾಗಿ ಜನರು ಎನ್95 ಮಾಸ್ಕ್‌ಗಳನ್ನು ಪಡೆಯುತ್ತಾರೆ. ಯಾಕೆಂದರೆ ಆ ಮಾಸ್ಕ್‌ಗಳು ಹೆಚ್ಚು ಸುರಕ್ಷಿತ ಎಂಬುದು ಜನರ ಭಾವನೆ ಆಗಿದೆ. ಈ ಬಗ್ಗೆ ನಂಬಿಕೆ ಇದ್ದ ಕಾರಣ ಅವುಗಳ ಮಾರಾಟ ಹೆಚ್ಚಾಗಿದೆ. ಮತ್ತಷ್ಟು ಮಂದಿ 5 ರಿಂದ 10 ರೂಪಾಯಿಗೆ ಸಿಗುವ ಸರ್ಜಿಕಲ್ ಮಾಸ್ಕ್‌ಗಳನ್ನು ಮುಗಿಬಿದ್ದು ಖರೀದಿಸುತ್ತಾರೆ. ಎನ್95 ಮಾಸ್ಕ್ ಬೆಲೆ 40 ರಿಂದ 95 ರೂಪಾಯಿ ಇದೆ. ಅವುಗಳನ್ನು ಖರೀದಿಸಿದ್ದಾರೆಂದು ತಿಳಿದು ಬಂದಿದೆ.
-
ಕಣ್ಣು ಸಮಸ್ಯೆಗಳು ಹೆಚ್ಚುತ್ತಿವೆಯೇ? ಈ ಆಹಾರಗಳು ನಿಮ್ಮ ದೃಷ್ಟಿಯನ್ನು ರಕ್ಷಿಸುತ್ತವೆ -
Powerful Vastu Plants: ಮನೆಗೆ ಪಾಸಿಟಿವ್ ಎನರ್ಜಿ ಬೇಕಾ? ಈ ಸಸ್ಯಗಳನ್ನು ಇಡಿ, ಜೀವನವೇ ಬದಲಾಗುತ್ತದೆ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ












Click it and Unblock the Notifications