ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ 1 ಸಾವಿರ ರೂ. ದಂಡ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 01: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮಾಸ್ಕ್ ಧರಿಸದ ಜನರಿಗೆ ದಂಡ ವಿಧಿಸಲು ಹೆಚ್ಚುವರಿಯಾಗಿ 120 ಮಾರ್ಷಲ್‌ಗಳನ್ನು ನಿಯೋಜನೆ ಮಾಡಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಇರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಬಿಬಿಎಂಪಿ ಜನರಿಗೆ ಮನವಿ ಮಾಡಿದೆ. ಮಾಸ್ಕ್ ಧರಿಸದಿದ್ದರೆ ವಿಧಿಸುತ್ತಿದ್ದ ದಂಡವನ್ನು 200 ರೂ. ಗಳಿಂದ 1 ಸಾವಿರ ರೂ.ಗಳಿಗೆ ಏರಿಕೆ ಮಾಡಲಾಗಿದೆ.

ಬೆಂಗಳೂರಿನ ಜನರಿಗೆ ಖಡಕ್ ಎಚ್ಚರಿಕೆ ನೀಡಿದ ಬಿಬಿಎಂಪಿ ಬೆಂಗಳೂರಿನ ಜನರಿಗೆ ಖಡಕ್ ಎಚ್ಚರಿಕೆ ನೀಡಿದ ಬಿಬಿಎಂಪಿ

ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಇರುವವರಿಗೆ 1,000 ದಂಡ ವಿಧಿಸಲಾಗುತ್ತದೆ. ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಬಿಬಿಎಂಪಿ ಹೇಳಿದೆ.

198 ವಾರ್ಡ್‌ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿದ ಬಿಬಿಎಂಪಿ 198 ವಾರ್ಡ್‌ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿದ ಬಿಬಿಎಂಪಿ

Mask Mandatory BBMP Deployed 120 Marshals To Fine Offenders

ಮಾಸ್ಕ್ ಧರಿಸದೇ ಇರುವವರಿಗೆ ದಂಡ ವಿಧಿಸಲು 230 ಮಾರ್ಷಲ್‌ಗಳನ್ನು ನೇಮಿಸಲಾಗಿತ್ತು. ಪ್ರಸ್ತುತ ಇನ್ನೂ 120 ಮಂದಿ ಮಾರ್ಷಲ್‌ಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಪೊಲೀಸ್ ಸಿಬ್ಬಂದಿಗಳು ಸಹ ದಂಡ ವಿಧಿಸಲಿದ್ದಾರೆ.

ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳೂರು ಟಾಪ್! ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳೂರು ಟಾಪ್!

ಕೋವಿಡ್ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಕೈಗಳನ್ನು ಪದೇ ಪದೆ ತೊಳೆಯುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

Recommended Video

ರಾಜ್ಯ ಸರ್ಕಾರ ಜಾರಿಗೊಳಿಸಿದ unlock 5.0 ಮಾರ್ಗಸೂಚಿಯಲ್ಲಿ ಏನಿದೆ | Oneindia Kannada

ಆದರೂ ಜನರು ನಿಯಮವನ್ನು ಉಲ್ಲಂಘಿಸುತ್ತಿರುವುದು ಕಂಡು ಬರುತ್ತಿದೆ. ಪದೇ ಪದೇ ಮಾಸ್ಕ್ ಧರಿಸದೆ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

English summary
BBMP deployed 120 marshals along with police personnel to fine the people who not wearing masks in public place. People to pay 1000 Rs fine in BBMP limit if not wear masks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X