Get Updates
Get notified of breaking news, exclusive insights, and must-see stories!

Bengaluru Airport: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್: ವಿಡಿಯೋ ವೈರಲ್: ರೊಚ್ಚಿಗೆದ್ದ ನೆಟ್ಟಿಗರು

Bengaluru Kempegowda International Airport: ಸಾಮಾನ್ಯವಾಗಿ ನಿಯಮದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧರ್ಮಕ್ಕೆ ಧಕ್ಕೆಯಾಗುವ ಘೋಷಣೆಗಳು, ನಮಾಜ್‌ ಮಾಡುವಂತಿಲ್ಲ. ಆದರೆ, ಇದನ್ನ ಮೀರಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್‌ 2ನಲ್ಲೊ ಸಾಮೂಹಿಕ ನಮಾಜ್‌ ಮಾಡಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಇದಕ್ಕೆ ವ್ಯಾಪಕ ಆಕ್ರೋಶಗಳು ಭುಗಿಲೆದ್ದಿವೆ. ಹಾಗಾದ್ರೆ ರೊಚ್ಚಿಗೆದ್ದ ನೆಟ್ಟಿಗರು ಪ್ರಶ್ನೆಗಳ ಸುರಮಳೆಯನ್ನೇ ಹರಿಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಂಪೊಂದು ಸಾಮೂಹಿಕ ನಮಾಜ್ ಮಾಡಿದ್ದು, ಇದು ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾದ್ರೆ ಆಕ್ರೋಶ ಹೊರಹಾಕಿರುವ ನೆಟ್ಟಿಗರು ಏನೆಲ್ಲಾ ಹೇಳಿದ್ಧಾರೆ ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ.

Mass Namaz at Bengaluru Airport Sparks Outrage Netizens and BJP Questions Security Clearance

ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ಹಜ್ ಯಾತ್ರಿಕರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೆಲವರು ನಮಾಜ್ ಮಾಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣ ಆವರಣದಲ್ಲಿ ನಮಾಜ್ ಮಾಡುವುದನ್ನು ಕರ್ನಾಟಕ ಬಿಜೆಪಿ ಟೀಕಿಸಿದ್ದು, ಹೆಚ್ಚಿನ ಭದ್ರತಾ ವಲಯದಲ್ಲಿ ಇಂತಹ ಕೃತ್ಯಕ್ಕೆ ಹೇಗೆ ಅವಕಾಶ ನೀಡಲಾಗಿದೆ? ಎಂದು ಪ್ರಶ್ನಿಸಿದೆ.

ಬಿಜೆಪಿ ಪಕ್ಷದ ವಕ್ತಾರ ವಿಜಯ್ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಈ ಅನುಮೋದನೆಯ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಈ ಘಟನೆ ನಡೆದಿದೆ.

ಇನ್ನು "ಈ ವ್ಯಕ್ತಿಗಳು ಹೆಚ್ಚಿನ ಭದ್ರತಾ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ? ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರ ಆರ್‌ಎಸ್‌ಎಸ್ ಪಾಠ ಸಂಚಾಲನೆ ನಡೆಸಿದಾಗ ಸರ್ಕಾರ ಏಕೆ ಆಕ್ಷೇಪಿಸುತ್ತದೆ? ಆದರೆ ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ಅಂತಹ ಚಟುವಟಿಕೆಗಳಿಗೆ ಕಣ್ಣು ಮುಚ್ಚಿ ಕುಳಿತಿದೆ?" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇನ್ನೂ ನೆಟ್ಟಿಗರು ಕೆಲವರು ಹೀಗೆ ವಿಮಾನ ನಿಲ್ದಾಣದಲ್ಲಿ ನಮಾಜ್‌ ಮಾಡಲು ಅವಕಾಶ ಮಾಡಿಕೊಟ್ಟಿರುವ ನಿರ್ಧಾರ ಸರಿಯೆ? ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ವಿಮಾನ ನಿಲ್ದಾದ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು. ಹೀಗೆ ಮುಂದುವರೆದರೆ, ಮುಂದಿನ ದಿನಗಳಲ್ಲಿ ಇದೇ ಮುಂದುವರೆದರೂ ಮುಂದುವರೆಯಬಹು. ಆದ್ದರಿಂದ ಇಂತಹ ಘಟನೆಗು ಮರುಕಳಿಸದಂತೆ ನೋಡಿಕೊಳ್ಳಬೇಕು ಅಂತಲೂ ಸಲಹೆ ನೀಡಿದ್ದಾರೆ.

ಅಲ್ಲದೆ, ಇನ್ನೂ ಕೆಲವರು ಇಂತಹ ಘಟನೆಗಳಿಂದ ಧರ್ಮ-ಧರ್ಮಗಳ ನಡುವೆ ಕೋಮು ಸಂಘರ್ಷಗಳು ಹುಟ್ಟಿಕೊಳ್ಳುತ್ತವೆ. ಆದ್ದರಿಂದ ಇಂತಹ ಘಟನೆಗಳು ಮರುಕಳಿಸದಂತೆ ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ, ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಗಲಭೆ ಸೃಷ್ಟಿಸುವಂತಹ ಘಟನೆಗಳಿಗೆ ಆಸ್ಪಾದನೆ ಕೊಡಬಾರದು. ಒಂದು ವೇಳೆ ಇವು ಮುಂದುವರೆದರೆ, ಉಳಿದವರು ಇದೇ ಹಾದಿ ಹಿಡಿದು ಕೋಮು ಸಂಘರ್ಷಕ್ಕೆ ಕಾರಣವಾಗಿಬಿಡುತ್ತವೆ. ಆದ್ದರಿಂದ ಈಗಲೇ ಎಚ್ಚೆತ್ತುಕೊಂಡು ಇಲ್ಲಿ ನಾಮಾಜ್‌ ಮಾಡಲು ಅವಕಾಶ ಕೊಟ್ಟಿರುವ ಹಾಗೂ ಮಾಡಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಅಂತಲೂ ಒತ್ತಾಯಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+