ಆನೇಕಲ್ ಬಳಿ ಭೀರಕ ಸರಣಿ ಅಪಘಾತ: ರಸ್ತೆ ಬದಿಯ 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್
Accident News: ಬೆಂಗಳೂರು ಹೊರವಲಯದಲ್ಲಿರುವ ಆನೇಕಲ್‌ನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಟ್ರಕ್‌ಹೊಂದು ರಸ್ತೆ ಅಕ್ಕಪಕ್ಕದಲ್ಲಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದಿದೆ. ಪರಿಣಾಮ ಐವರು ಗಾಯಗೊಂಡಿದ್ದು, ಇಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಬೆಸ್ತಮಾನಹಳ್ಳಿಯಿಂದ ಚಂದಾಪುರದ ಕಡೆಗೆ ಹೊರಟಿದ್ದ ಚಾಲಕ ರಸ್ತೆಯ ಅಕ್ಕಪಕ್ಕದಲ್ಲಿದ್ದ ವಾಹನಗಳ ಮೇಲೆ ಹತ್ತಿಯಿಸಿಕೊಂಡು ಹೋಗಿದ್ದಾನೆ. ಬಳಿಕ ಚಾಲಕ ಪೊಲೀಸರಿಂದ 14 ಕಿಲೋ ಮೀಟರ್ ತಪ್ಪಿಸಿಕೊಂಡು ಲಾರಿಯನ್ನು ನಿಲ್ಲಿಸದೇ ಹೋಗಿದ್ದಾನೆ. ಕೊನೆಗೆ ಹೊಸೂರು ಹೆದ್ದಾರಿಯ ಚಂದಾಪುರದಲ್ಲಿ ಸಾರ್ವಜನಿಕರು ಲಾರಿ ನಿಲ್ಲಿಸಿದ್ದಾರೆ. ಲಾರಿ ನಿಲ್ಲಿಸುತ್ತಿದ್ದಂತೆ ಚಾಲಕನನ್ನು ಕೆಳಗಿಸಿಳಿ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ಮದ್ಯದ ಅಮಲಿನಲ್ಲಿದ್ದ ಎಂದು ತಿಳಿದುಬಂದಿದೆ.

ಸದ್ಯ ಲಾರಿ ಚಾಲಕನನ್ನ ವಶಕ್ಕೆ ಪಡೆದಿರುವ ಸೂರ್ಯ ಸಿಟಿ ಪೋಲಿಸರು, ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಈ ಸರಣಿ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬರಬೇಕಿದೆ. ಇಂತಹ ಅಪಘಾತ ಪ್ರಕರಣಗಳು ಸಾಮಾನ್ಯವಾಗಿ ಬ್ರೇಕ್ ಫೇಲ್ ಆದ ವೇಳೆ ಸಂಭವಿಸಿರುವುದನ್ನು ನೋಡಿದ್ದೇವೆ ಹಾಗೂ ಕೇಳಿದ್ದೇವೆ. ಆದರೆ, ಈ ಚಾಲಕ ಬೇಕು ಅಂತಲೇ ಅಪಘಾತ ಮಾಡಿರಬಹದು ಎಂಬ ಶಂಕೆ ವ್ಯಕ್ತವಾಗಿದೆ.
ಅಪಘಾತದಲ್ಲಿ ಪುಟ್ಟ ಮಗು ಸಾವು: ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ಇತ್ತೀಚೆಗಷ್ಟೇ ನಡೆದಿತ್ತು. ಘಟನೆಯಲ್ಲಿ ಆಟೋ ಚಾಲಕ ಸೇರಿ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ ಓವರ್ ಟೇಕ್ ಮಾಡಲು ಹೋಗಿ ಆಟೋಗೆ ಕಾರು ಡಿಕ್ಕಿ ಹೊಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
ಸುಳ್ಯ ಕಡೆಯಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ಚಾಲಕ ಬಸ್ನ ಓವರ್ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಕಾರು ಪುತ್ತೂರಿನಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ಹನೀಫ್ ಬನ್ನೂರು ಅವರ ಮಗಳು ಶಜ್ವಾ ಫಾತಿಮಾ ಮೃತಪಟ್ಟಿದ್ದಾಳೆ.
ಘಟನೆಯಲ್ಲಿ ಹನೀಫ್, ಪತ್ನಿ, ಇಬ್ಬರು ಮಕ್ಕಳು ಮತ್ತು ಅತ್ತೆಗೆ ಗಾಯ ಆಗಿದ್ದು, ಈ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀರು ಪ್ರಕರಣ ದಾಖಲು ಮಾಡಿಕೊಂಡಿದ್ದರು.
ಅಪಘಾತದಲ್ಲಿ ಓರ್ವ ಸಾವು: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಗೇರುಸೊಪ್ಪ ಬಳಿ ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 11 ಮಂದಿಗೆ ಗಂಭೀರ ಗಾಯವಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿ ಬಳಿ ಈ ಭೀಕೆ ಅಪಘಾತ ಸಂಭವಿಸಿದೆ. ಈ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಪಕ್ಕದ ಕಂದಕಕ್ಕೆ ಬಸ್ ಪಲ್ಟಿ ಆಗಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಬರುತ್ತಿದ್ದ ವೇಳೆ ಕೆಎಸ್ಆರ್‌ಟಿಸಿ ಬಸ್ ಅಪಘಾತಕ್ಕೆ ಒಳಗಾಗಿದೆ. ಸುಳಿಮನೆ ಮುರ್ಕಿ ಕ್ರಾಸ್‌ನಲ್ಲಿ ನಿಯಂತ್ರಣ ತಪ್ಪಿ ಕಾರು-ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದುಕೊಂಡಿದೆ ಎಂದು ತಿಳಿದುಬಂದಿತ್ತು.












Click it and Unblock the Notifications