ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮದ್ಯ ನಿಷೇಧ: ಮಲ್ಲೇಶ್ವರದಿಂದ ವಿಧಾನಸೌಧದತ್ತ ಹೊರಟ ಪ್ರತಿಭಟನಾ ಮೆರವಣಿಗೆ

|
Google Oneindia Kannada News

ಬೆಂಗಳೂರು, ಜನವರಿ 30: ಮದ್ಯಪಾನ ನಿಷೇಧಕ್ಕೆ ಆಗ್ರಹಿಸಿ ಸಾವಿರಾರು ಮಹಿಳೆಯರು ಕಳೆದ 12 ದಿನಗಳಿಂದ ಪ್ರತಿಭಟನಾ ಕಾಲ್ನಡಿಗೆ ಆರಂಭಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಎಚ್‌ಎಸ್ ದೊರೆಸ್ವಾಮಿ ಮೆರವಣಿಗೆಗೆ ಚಾಲನೆ ನೀಡಿದ್ದಾರೆ. ಮದ್ಯಪಾನ ನಿಷೇಧಿಸಬೇಕು ಎಂದು ಆಗ್ರಹಿಸಿ ಸಾವಿರಾರು ಮಹಿಳೆಯರು ಚಿತ್ರದುರ್ಗದಿಂದ ಕಾಲ್ನಡಿಯಲ್ಲೇ ಬೆಂಗಳೂರಿಗೆ ಬಂದಿದ್ದಾರೆ.

ಮದ್ಯ ನಿಷೇಧಕ್ಕೆ ಆಗ್ರಹಿಸಿ ಮಹಿಳೆಯರಿಂದ ವಿಧಾನಸೌಧ ಮುತ್ತಿಗೆ ಇಂದು ಮದ್ಯ ನಿಷೇಧಕ್ಕೆ ಆಗ್ರಹಿಸಿ ಮಹಿಳೆಯರಿಂದ ವಿಧಾನಸೌಧ ಮುತ್ತಿಗೆ ಇಂದು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮದ ದಿನವೇ ಮದ್ಯ ನಿಷೇಧ ಹೋರಾಟ ಶುರುವಾಗಿದ್ದು, ಚಿತ್ರದುರ್ಗದಿಂದ ಜನವರಿ 19ರಂದು ಕಾಲ್ನಡಿಗೆ ಮೂಲಕ ಬೆಂಗಳೂರಿಗೆ ಹೊರಟಿದ್ದ ಸಾವಿರಾರು ಮಹಿಳೆಯರು ಮಂಗಳವಾರ ಮಧ್ಯಾಹ್ನ ರಾಜ್ಯ ರಾಜಧಾನಿಗೆ ಲಗ್ಗೆಯಿಟ್ಟಿದ್ದಾರೆ.

Massive protest by rural women seeking liquor ban

ಸತತ 10 ದಿನಗಳ ಕಾಲ ನಡೆದುಕೊಂದು ಬಂದು ನಿನ್ನೆ ರಾಜಧಾನಿಯನ್ನು ತಲುಪಿದ್ದಾರೆ. ಸದ್ಯ ಮಲ್ಲೇಶ್ವರಂನ ಆಟದ ಮೈದಾನದಲ್ಲಿ ವಾಸ್ತವ್ಯ ಹೂಡಿರುವ ಮಹಿಳೆಯರು ಚಳಿಯಲ್ಲೇ ರಾತ್ರಿ ಕಳೆದಿದ್ದಾರೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದು, ವಾಹನ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆ ಇದೆ. ಆದ್ರೆ ಪ್ರತಿಭಟನಾನಿರತ ಮಹಿಳೆಯರನ್ನು ಫ್ರೀಡಂ ಪಾರ್ಕ್ ಬಳಿಯೇ ತಡೆಯಲು ಪೊಲೀಸರು ಯೋಜನೆ ರೂಪಿಸಿದ್ದಾರೆ.

ಮದ್ಯಪಾನ ನಿಷೇಧ ಮಾಡಿ ಅಂತ ಒಂದೆಡೆ ಮಹಿಳೆಯರು ಹೋರಾಟ ಮಾಡಲು ಮುಂದಾಗಿದ್ದರೆ, ಇನ್ನೊಂದೆಡೆ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದಾರೆ. ಈಗಾಗಲೆ 40 ಕಡೆ ಶೌಚಾಲಯ ವ್ಯವಸ್ಥೆ ಮಾಡಿದ್ದಾರೆ. ಆದ್ರೆ ಅದು ಸರಿ ಹೊಂದುತ್ತಿಲ್ಲ. ಉಚಿತ ವ್ಯವಸ್ಥೆ ಎಂದು ಹೇಳಿ ಹಣ ಪಡೆಯುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸುತ್ತಿದ್ದಾರೆ. ಈ ಕುರಿತು ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

English summary
The march by women from rural parts of Karnataka demanding a statewide ban on the sale of alcohol reached Bengaluru on Tuesday. After 11 days of marching, they will end their protest today with a final public interaction outside the Vidhana Soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X