• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಸ್ತಿಗುಡಿ ದುರಂತ: ನಟ ದುನಿಯಾ ವಿಜಯ್ ವಿರುದ್ಧ ಚಾರ್ಜ್ ಶೀಟ್

|
Google Oneindia Kannada News

ಬೆಂಗಳೂರು, ನವೆಂಬರ್ 04: ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಸಂದರ್ಭದಲ್ಲಿ ನಡೆದ ದುರಂತದಲ್ಲಿ ಅನಿಲ್ ಹಾಗೂ ರಾಘವ್ ಉದಯ್ ಎಂಬ ನಟರು ಸಾವಿಗೀಡಾದ ಪ್ರಕರಣ ಮತ್ತೆ ಜೀವ ಪಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿಗಳಿಗೆ ನೆರವಾದ ಆರೋಪದ ಮೇಲೆ ನಟ ದುನಿಯಾ ವಿಜಯ್ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ.

ತಾವರೆಕೆರೆ ಪೊಲೀಸರು ಈಗಾಗಲೇ ಚಿತ್ರತಂಡದ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ಹಾಕಿರುವುದನ್ನು ಇಲ್ಲಿ ಸ್ಮರಿಸಬಹುದು. ಈಗ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು, ನಗರದ 2ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಜಯ್ ಹಾಗೂ ಚಿತ್ರತಂಡದ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಹಲ್ಲೆ ಪ್ರಕರಣ: ನಟ ದುನಿಯಾ ವಿಜಯ್ ಬಂಧನ, ಬಿಡುಗಡೆ ಹಲ್ಲೆ ಪ್ರಕರಣ: ನಟ ದುನಿಯಾ ವಿಜಯ್ ಬಂಧನ, ಬಿಡುಗಡೆ

ಮಾಸ್ತಿಗುಡಿ ಚಿತ್ರೀಕರಣ ಸಂದರ್ಭದಲ್ಲಿ ದುರಂತ ಪ್ರಕರಣದ ಮುಯ ಆರೋಪಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರು ನಾಪತ್ತೆಯಾಗಲು ನಟ ದುನಿಯಾ ವಿಜಯ್ ನೆರವಾಗಿದ್ದರು ಎಂದು ದೋಷಾರೋಪಣ ಪಟ್ಟಿಯಲ್ಲಿ ಹೇಳಲಾಗಿದೆ.

ನಿರ್ದೇಶಕ ನಾಗಶೇಖರ್, ಸುಂದರಗೌಡ, ಸಾಹಸ ನಿರ್ದೇಶಕ ರವಿವರ್ಮ, ಪೈಲಟ್ ಸೇರಿದಂತೆ ಆರು ಜನರ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ. ಆದರೆ, ತಾವರೆಕೆರೆ ಪೊಲೀಸರು ಹಾಕಿರುವ ಚಾರ್ಜ್ ಶೀಟ್ ನಲ್ಲಿ ದುನಿಯಾ ವಿಜಯ್ ಹೆಸರಿಲ್ಲ.

ಮಾಗಡಿಯ ಜೆಎಂಎಫ್ಸಿ ಕೋರ್ಟ್ ನಲ್ಲಿ ಪ್ರಕರಣ

ಮಾಗಡಿಯ ಜೆಎಂಎಫ್ಸಿ ಕೋರ್ಟ್ ನಲ್ಲಿ ಪ್ರಕರಣ

ಅನಿಲ್ ಮತ್ತು ರಾಘವ್ ಉದಯ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ತಿಗುಡಿ ಚಿತ್ರ ತಂಡದ ಐವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 304(A) ಹಾಗೂ 308 ಅನ್ವಯ ಕೇಸು ದಾಖಲಾಗಿದೆ.

ಮಾಗಡಿಯ ಜೆಎಂಎಫ್ಸಿ ಕೋರ್ಟ್, ಐ.ಪಿ.ಸಿ 304 (ಅಜಾಕರೂಕತೆಯಿಂದ ಉಂಟಾದ ಸಾವು ) ರಲ್ಲಿ ನಿರ್ಮಾಪಕ ನಾಗಶೇಖರ್, ಸುಂದರಗೌಡ, ಸಾಹಸ ನಿರ್ದೇಶಕ ರವಿವರ್ಮ, ಪೈಲಟ್ ಸೇರಿದಂತೆ ಆರು ಜನರ ವಿರುದ್ಧ ಸುಮಾರು 450 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ, ಇಲ್ಲಿ ದುನಿಯಾ ವಿಜಯ್ ವಿರುದ್ಧ ಯಾವುದೇ ಚಾರ್ಜ್ ಶೀಟ್ ಹಾಕಲಾಗಿಲ್ಲ

ದುನಿಯಾ ವಿಜಯ್ ವಿರುದ್ಧ ಎಫ್.ಐ.ಆರ್

ದುನಿಯಾ ವಿಜಯ್ ವಿರುದ್ಧ ಎಫ್.ಐ.ಆರ್

ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರನ್ನು ಎ-1 ಆರೋಪಿಯಾಗಿದ್ದು, ನಿರ್ದೇಶಕ ನಾಗಶೇಖರ್ ಅವರು ಎ-2 ಆರೋಪಿ, ಸಹ ನಿರ್ದೇಶಕ ಎ-3 ಆರೋಪಿ, ಸಾಹಸ ನಿರ್ದೇಶಕ ರವಿವರ್ಮ ಅವರನ್ನು ಎ-4 ಆರೋಪಿಯನ್ನಾಗಿ ಪ್ರಕರಣ ದಾಖಲಿಸಲಾಗಿದೆ. ಸಾಹಸ ಸಹ ನಿರ್ದೇಶಕ ಎ-5 ಆರೋಪಿಯಾಗಿದ್ದಾರೆ.

ತಾವರೆಕೆರೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಗೋವಿಂದ ರಾಜು, ದುನಿಯಾ ವಿಜಯ್ ವಿರುದ್ಧ ದೂರು ನೀಡಿದರು. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ಐ.ಪಿ.ಸಿ ಸೆಕ್ಷನ್ 363 ಅನ್ವಯ ನಟ ದುನಿಯಾ ವಿಜಯ್ ಮೇಲೆ ಸದ್ಯ ಎಫ್.ಐ.ಆರ್ ದಾಖಲಾಗಿದೆ

ದುನಿಯಾ ವಿಜಯ್ ವಿರುದ್ಧ 'ಗೂಂಡಾಗಿರಿ' ಆರೋಪ ಏಕೆ!?

ದುನಿಯಾ ವಿಜಯ್ ತಪ್ಪೊಪ್ಪಿಗೆ

ದುನಿಯಾ ವಿಜಯ್ ತಪ್ಪೊಪ್ಪಿಗೆ

ಸುಂದರ್.ಪಿ.ಗೌಡ ರವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ, ಸುಂದರ್.ಪಿ.ಗೌಡ ರನ್ನು ನಾನೇ ಪೊಲೀಸ್ ಸ್ಟೇಷನ್ ಗೆ ಕರೆದು ತರುವುದಾಗಿ ಪೊಲೀಸರ ಬಳಿ ದುನಿಯಾ ವಿಜಯ್ ಹೇಳಿದ್ದರು. ಆದರೆ, ಸಮಯಕ್ಕೆ ಸರಿಯಾಗಿ ಸುಂದರ್ ಅವರನ್ನು ಕರೆತಂದಿರಲಿಲ್ಲ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಸುಂದರ್ ಪಿ ಗೌಡ ಅವರನ್ನು ಪೊಲೀಸರು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಅವರು ತಪ್ಪಿಸಿಕೊಳ್ಳಲು ದುನಿಯಾ ವಿಜಯ್ ನೆರವು ನೀಡಿದ್ದರು, ಅಷ್ಟೇ ಅಲ್ಲ, ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದರು ಎಂದು ಆರೋಪಿಸಿ ವಿಜಯ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿತ್ತು. ವಿಜಯ್ ಅವರನ್ನು ಪೊಲೀಸರು ಬಂಧಿಸಲು ತೆರಳಿದ್ದಾಗ ಅವರು ನಾಪತ್ತೆಯಾಗಿದ್ದ ವಿಷಯ ತಿಳಿದುಬಂದಿತ್ತು. ನಂತರ ವಿಜಯ್ ಅವರನ್ನು ಬಂಧಿಸಲಾಗಿತ್ತು. ಸ್ಟೇಷನ್ ಬೇಲ್ ಪಡೆದು ಹೊರ ಬಂದಿದ್ದಾರೆ.

ಮಾಸ್ತಿಗುಡಿ ದುರಂತ: ಶವ ಹುಡುಕಿಕೊಟ್ಟ ಮಂಗಳೂರು ಈಜುತಜ್ಞರು ಮಾಸ್ತಿಗುಡಿ ದುರಂತ: ಶವ ಹುಡುಕಿಕೊಟ್ಟ ಮಂಗಳೂರು ಈಜುತಜ್ಞರು

ಮಾಸ್ತಿಗುಡಿ ದುರಂತ: ನಟ ದುನಿಯಾ ವಿಜಯ್ ವಿರುದ್ಧ ಚಾರ್ಜ್ ಶೀಟ್

ಮಾಸ್ತಿ ಗುಡಿ ಚಿತ್ರದ ಅಂತಿಮ ಹಂತದ ಚಿತ್ರೀಕರಣವನ್ನು ಬೆಂಗಳೂರು ಹೊರವಲಯದಲ್ಲಿರುವ ರಾಮನಗರ ಜಿಲ್ಲೆ ತಿಪ್ಪಗೊಂಡನಹಳ್ಳಿ ಕೆರೆ ಬಳಿ 2016ನವೆಂಬರ್ 09ರಂದು ಬೆಳಗ್ಗೆ ನಡೆದಿತ್ತು. ಮಧ್ಯಾಹ್ನದ ವೇಳೆ ಕೆರೆಯ ಮಧ್ಯ ಭಾಗದಲ್ಲಿ ಹೆಲಿಕಾಪ್ಟರ್ ನಿಂದ ನೀರಿಗೆ ಹಾರುವ ದೃಶ್ಯದ ಶೂಟಿಂಗ್ ನಡೆಯುವಾಗ ಈ ದುರಂತ ಸಂಭವಿಸಿತ್ತು.

ಭಜರಂಗಿ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಖಳನಟ ಉದಯ್ ಹಾಗೂ ಅನಿಲ್ ಎಂಬುವರು ಮಧ್ಯಾಹ್ನ 2.50ರ ಸುಮಾರಿಗೆ ಹೆಲಿಕಾಪ್ಟರ್ ನಿಂದ ಕೆರೆಗೆ ಹಾರಿದ್ದರು. ಆದರೆ, ನಂತರ ನೀರಿನಿಂದ ಮೇಲಕ್ಕೆ ಬಂದಿಲ್ಲ. ದುನಿಯಾ ವಿಜಯ್ ಕೂಡಾ ಕೆರೆಗೆ ಹಾರಿದ್ದರು ಆದರೆ, ಈಜಿಕ್ಕೊಂಡು ದಡ ಸೇರಿ ಪಾರಾಗಿದ್ದರು.

English summary
Chennammanakere Achhukattu police on Sunday(Nov 04) filed a chargesheet against Duniya VIijay and crew members of 'Masti Gudi' movie after 2 of its actors lost their lives attempting an action sequence. The FIR filed after T G Halli reservoir dam's director filed a formal complaint with the local police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X