ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ ಬಂಧನ
ಖಳನಟ ಅನಿಲ್ ಹಾಗೂ ರಾಘವ್ ಉದಯ್ ಅವರು ದುರಂತ ಸಾವಿಗೀಡಾಗಿರುವ ಪ್ರಕರಣದಲ್ಲಿ ಮೊದಲ ಆರೋಪಿಯ ಬಂಧನವಾಗಿದೆ.
ರಾಮನಗರ, ನವೆಂಬರ್ 08: ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಸಂದರ್ಭದಲ್ಲಿ ಖಳನಟ ಅನಿಲ್ ಹಾಗೂ ರಾಘವ್ ಉದಯ್ ಅವರು ದುರಂತ ಸಾವಿಗೀಡಾಗಿರುವ ಪ್ರಕರಣದಲ್ಲಿ ಮೊದಲ ಆರೋಪಿಯ ಬಂಧನವಾಗಿದೆ. ತಾವರೆಕೆರೆ ಪೊಲೀಸರು ಮುಖ್ಯ ಆರೋಪಿ ಚಿತ್ರ ನಿರ್ಮಾಪಕ ಸುಂದರ್ ಪಿ ಗೌಡ ಅವರನ್ನು ಮಂಗಳವಾರ ಸಂಜೆ ಬಂಧಿಸಿದ್ದಾರೆ.
ಬಂಧಿತ ಆರೋಪಿ ಸುಂದರ್ ಗೌಡರನ್ನು ರಾಮನಗರದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, 14ದಿನಗಳ ಕಾಲ ನ್ಯಾಯಾಂಗ ಬಂಧನ ಶಿಕ್ಷೆ ಲಭಿಸಿದೆ. ಸದ್ಯ ರಾಮನಗರದ ಜಿಲ್ಲಾ ಕಾರಾಗೃಹದಲ್ಲಿದ್ದಾರೆ. ಮಿಕ್ಕ ಆರೋಪಿಗಳು ನಾಪತ್ತೆಯಾಗಿದ್ದು, ಹುಡುಕಾಟ ಜಾರಿಯಲ್ಲಿದೆ.[ಖಳನಟರ ಸಾವು: ಮಾಸ್ತಿಗುಡಿ ಚಿತ್ರ ತಂಡದ ವಿರುದ್ಧ ಎಫ್ ಐಆರ್]

ಅನಿಲ್ ಮತ್ತು ರಾಘವ್ ಉದಯ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ತಿಗುಡಿ ಚಿತ್ರ ತಂಡದ ಐವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 304(A) ಹಾಗೂ 308 ಅನ್ವಯ ಕೇಸು ದಾಖಲಾಗಿದೆ. ಆರೋಪ ಸಾಬೀತಾದರೆ ಕನಿಷ್ಠ 10 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರನ್ನು ಎ-1 ಆರೋಪಿಯಾಗಿದ್ದು, ನಿರ್ದೇಶಕ ನಾಗಶೇಖರ್ ಅವರು ಎ-2 ಆರೋಪಿ, ಸಹ ನಿರ್ದೇಶಕ ಎ-3 ಆರೋಪಿ, ಸಾಹಸ ನಿರ್ದೇಶಕ ರವಿವರ್ಮ ಅವರನ್ನು ಎ-4 ಆರೋಪಿಯನ್ನಾಗಿ ಪ್ರಕರಣ ದಾಖಲಿಸಲಾಗಿದೆ. ಸಾಹಸ ಸಹ ನಿರ್ದೇಶಕ ಎ-5 ಆರೋಪಿಯಾಗಿದ್ದು, ಚಿತ್ರದ ನಾಯಕ ನಟ ದುನಿಯಾ ವಿಜಯ್ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಇದೆ.
ಸೋಮವಾರ ಮಧ್ಯಾಹ್ನ ರಾಮನಗರ ಜಿಲ್ಲೆ ತಾವೆರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಹಂತದ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗುತ್ತಿತ್ತು. ಹೆಲಿಕಾಪ್ಟರ್ನಿಂದ ನೀರಿಗೆ ಹಾರಿ ನಾಯಕನಿಂದ ತಪ್ಪಿಸಿಕೊಳ್ಳುವ ಸನ್ನಿವೇಶದಲ್ಲಿ ಇಬ್ಬರು ನಟರು ನೀರುಪಾಲಾಗಿದ್ದರು. ಇಬ್ಬರ ದೇಹ ಇನ್ನೂ ಪತ್ತೆಯಾಗಿಲ್ಲ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications