Get Updates
Get notified of breaking news, exclusive insights, and must-see stories!

ಮಾಸ್ತಿಗುಡಿ ಚಿತ್ರ ನಿರ್ದೇಶಕ ನಾಗಶೇಖರ್ ಬಂಧನ

ಮಾಸ್ತಿಗುಡಿ ಚಿತ್ರದ ನಿರ್ದೇಶಕ ನಾಗಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದುರಂತ ಸಾವಿಗೀಡಾಗಿರುವ ಪ್ರಕರಣದಲ್ಲಿ ಮೊದಲ ಆರೋಪಿ ನಿರ್ಮಾಪಕ ಸುಂದರ್ ಗೌಡ ಅವರನ್ನು ಈಗಾಗಲೇ ಬಂಧಿಸಲಾಗಿದೆ..

ತಾವರೆಕೆರೆ, ನವೆಂಬರ್ 09: ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಸಂದರ್ಭದಲ್ಲಿ ಮೃತಪಟ್ಟ ಖಳನಟ ಅನಿಲ್ ಹಾಗೂ ರಾಘವ್ ಉದಯ್ ಅವರು ಪೈಕಿ ಉದಯ್ ಅವರ ಶವ ಬುಧವಾರ ಮಧ್ಯಾಹ್ನ ಪತ್ತೆಯಾಗಿದೆ. ಈ ನಡುವೆ ಚಿತ್ರದ ನಿರ್ದೇಶಕ ನಾಗಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ದುರಂತ ಸಾವಿಗೀಡಾಗಿರುವ ಪ್ರಕರಣದಲ್ಲಿ ಮೊದಲ ಆರೋಪಿ ನಿರ್ಮಾಪಕ ಸುಂದರ್ ಗೌಡ ಅವರನ್ನು ಈಗಾಗಲೇ ಬಂಧಿಸಲಾಗಿದೆ.. ಮಂಗಳವಾರ ಸಂಜೆ ಬಂಧಿಸಿಲಾದ ಸುಂದರ್ ಅವರು ಸದ್ಯ ರಾಮನಗರ ಕಾರಾಗೃಹದಲ್ಲಿದ್ದು, 14ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.[ಮಾಸ್ತಿಗುಡಿ ದುರಂತ: ಒಂದು ಶವ ಕೊನೆಗೂ ಪತ್ತೆ]

Mastigudi Tragedy : Tavarekere Police detain accused Director Nagashekar

ಅನಿಲ್ ಮತ್ತು ರಾಘವ್ ಉದಯ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ತಿಗುಡಿ ಚಿತ್ರ ತಂಡದ ಐವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 304(A) ಹಾಗೂ 308 ಅನ್ವಯ ಕೇಸು ದಾಖಲಾಗಿದೆ. ಆರೋಪ ಸಾಬೀತಾದರೆ ಕನಿಷ್ಠ 10 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.[ಮಾಸ್ತಿಗುಡಿ ದುರಂತ: ಇಬ್ಬರು ನಟರು ಕೆರೆಗೆ ಹಾರ]

ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರನ್ನು ಎ-1 ಆರೋಪಿಯಾಗಿದ್ದು, ನಿರ್ದೇಶಕ ನಾಗಶೇಖರ್ ಅವರು ಎ-2 ಆರೋಪಿ, ಸಹ ನಿರ್ದೇಶಕ ಎ-3 ಆರೋಪಿ, ಸಾಹಸ ನಿರ್ದೇಶಕ ರವಿವರ್ಮ ಅವರನ್ನು ಎ-4 ಆರೋಪಿಯನ್ನಾಗಿ ಪ್ರಕರಣ ದಾಖಲಿಸಲಾಗಿದೆ. ಸಾಹಸ ಸಹ ನಿರ್ದೇಶಕ ಎ-5 ಆರೋಪಿಯಾಗಿದ್ದು, ಚಿತ್ರದ ನಾಯಕ ನಟ ದುನಿಯಾ ವಿಜಯ್ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಇದೆ.[ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ ಬಂಧನ]

ಸೋಮವಾರ ಮಧ್ಯಾಹ್ನ ರಾಮನಗರ ಜಿಲ್ಲೆ ತಾವೆರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಹಂತದ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗುತ್ತಿತ್ತು. ಹೆಲಿಕಾಪ್ಟರ್​ನಿಂದ ನೀರಿಗೆ ಹಾರಿ ನಾಯಕನಿಂದ ತಪ್ಪಿಸಿಕೊಳ್ಳುವ ಸನ್ನಿವೇಶದಲ್ಲಿ ಇಬ್ಬರು ನಟರು ನೀರುಪಾಲಾಗಿದ್ದರು.[ಮಾಸ್ತಿಗುಡಿ ಚಿತ್ರ ತಂಡದ ವಿರುದ್ಧ ಎಫ್ ಐಆರ್]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+