ಹುತಾತ್ಮ ಯೋಧರ ಕುಟುಂಬಕ್ಕೆ ಮಾತಾ ಅಮೃತಾನಂದಮಯಿ ಸಹಾಯ
ಬೆಂಗಳೂರು, ಫೆ.19: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಫೆಬ್ರವರಿ 14 ರಂದು ನಡೆದ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ಶ್ರೀ ಮಾತಾ ಅಮೃತಾನಂದಮಯಿ 5 ಲಕ್ಷ ರೂ ನೀಡಿ ಸಹಾಯ ಹಸ್ತ ಚಾಚಿದ್ದಾರೆ.
ದೇಶವು ಹೆಮ್ಮೆಯ ಯೋಧರನ್ನು ಕಳೆದುಕೊಂಡಿದೆ. ಯೋಧರ ಕುಟುಂಬಕ್ಕೆ ಸಹಾಯ ಮಾಡುವುದು ನಮ್ಮ ಧರ್ಮ, ನಮ್ಮನ್ನು ಸುರಕ್ಷಿತವಾಗಿಡಲು ಅವರು ತಮ್ಮ ಪ್ರಾಣವನ್ನು ತೊರೆದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಸ್ಥರಿಗೆ ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೊರೆಯಲಿ ಎಂದು ಶ್ರೀ ಮಾತಾ ಅಮೃತಾನಂದಯಿ ಹೇಳಿದ್ದಾರೆ.

ಪುಲ್ವಾಮಾದಲ್ಲಿ ಸೋಮವಾರ ನಡೆದ ಪ್ರತಿ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಮೂವರು ಉಗ್ರರನ್ನು ಹತ್ಯೆಮಾಡಲಾಗಿದೆ.
ಇದೀಗ 2019ರ ಭಾರತ ಯಾತ್ರೆ ಪ್ರಯುಕ್ತ ಮಾತಾ ಅಮೃತಾನಂದಮಯಿ ಮೈಸೂರಿಗೆ ತೆರಳಲಿದ್ದಾರೆ.












Click it and Unblock the Notifications