ಮದರಸಾ ಕೆಲಸದಾಕೆ ಮೇಲೆ ಅತ್ಯಾಚಾರವೆಸಗಿ ಐರನ್ ಬಾಕ್ಸ್ನಿಂದ ಸುಟ್ಟ ಮೌಲ್ವಿ
ಬೆಂಗಳೂರು, ಡಿಸೆಂಬರ್ 14: ಮೌಲ್ವಿಯೊಬ್ಬ ಮನೆ ಕೆಲಸದಾಕೆ ಮೇಲೆ ಅತ್ಯಾಚಾರವೆಸಗಿ ಕೊನೆಗೆ ಐರನ್ ಬಾಕ್ಸ್ನಿಂದ ಸುಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇತ್ತೀಚೆಗೆ ಒಂದರ ಹಿಂದೊಂದರಂತೆ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದೆಲ್ಲದರ ನಡುವೆ ಮೌಲ್ವಿ ಪ್ರಕರಣ ಬೆಳಕಿಗೆ ಬಂದಿದೆ.
ಅತ್ಯಾಚಾರ ಆರೋಪಿಗಳ ಎನ್ಕೌಂಟರ್: ಸುಪ್ರೀಂಕೋರ್ಟ್ ಮಹತ್ವದ ನಿರ್ಧಾರ
ಕೆಲಸಕ್ಕೆಂದು ಯುವತಿಯನ್ನು ಕರೆತಂದು, ಆಕೆಯನ್ನು ಗೃಹ ಬಂಧನದಲ್ಲಿಟ್ಟು ಅತ್ಯಾಚಾರ ನಡೆಸಿದ್ದಷ್ಟೇ ಅಲ್ಲದೆ ಐರನ್ ಬಾಕ್ಸ್ನಿಂದ ಯುವತಿಯ ದೇಹ ಸುಟ್ಟು ಚಿತ್ರಹಿಂಸೆ ನೀಡಿದ್ದಾನೆ.
ಕೋರಮಂಗಲದಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಣ ಸಂಸ್ಥೆಗಳು (ಟ್ಯುಟೋರಿಯಲ್) ಮತ್ತು ಮದರಸಾ ನಡೆಸುತ್ತಿರುವ ಫರ್ವೇಜ್ ಎಂಬ ಮೌಲ್ವಿ ಯುವತಿಯ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದ ವ್ಯಕ್ತಿಯಾಗಿದ್ದಾನೆ.
ಪೊಲೀಸರು ಮೌಲ್ವಿಯನ್ನು ಬಂಧಿಸಿ ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ. ಈ ಘಟನೆ ಸಂಬಂದ ಆರೋಪಿ ಫರ್ವೇಜ್ ವಿರುದ್ಧ ಐಪಿಸಿ ಸೆಕ್ಷನ್ 344 (ಅಕ್ರಮ ಬಂಧನ), 376 (ಅತ್ಯಾಚಾರ), 307 (ಕೊಲೆ ಯತ್ನ), 506, 507 (ಬೈಗುಳ), (ಜೀವ ಬೆದರಿಕೆ) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.