ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಒಂದೇ ಒಂದು ಮಳೆ, ಗರಿಷ್ಠ ತಾಪಮಾನದಲ್ಲಿ ಭಾರಿ ಇಳಿಕೆ

|
Google Oneindia Kannada News

ಬೆಂಗಳೂರು, ಮೇ 2: ಬೆಂಗಳೂರಿಗರಿಗೆ ಈಗ ವೆದರ್ ಕೂಲ್ ಎನಿಸುತ್ತಿದೆ ಅಲ್ಲವೇ..

ಫ್ಯಾನಿ ಚಂಡಮಾರುತದ ಪರಿಣಾಮದಿಂದ ಬೆಂಗಳೂರಲ್ಲಿ ಸುರಿದ ಒಂದು ದಿನದ ಮಳೆಗೆ ಗರಿಷ್ಠ ತಾಪಮಾನದಲ್ಲಿ ಭಾರಿ ಇಳಿಕೆ ಕಂಡಿದೆ.

ಲೋಕಸಭಾ ಚುನಾವಣೆ ವಿಶೇಷ ಪುಟ

ಮಂಗಳವಾರ ನಗರದ ವಿವಿಧೆಡೆ ಸುರಿದ ಮಳೆಯಿಂದಾಗಿ ಗರಿಷ್ಠ ತಾಪಮಾನ 30.1 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಮೇಲ್ಮೈ ಸುಳಿಗಾಳಿ ಹಾಗೂ ಫ್ಯಾನಿ ಚಂಡಮಾರುತ ಭಾವದಿಂದ ಬೆಂಗಳೂರಲ್ಲಿ ಬುಧವಾರವೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು.

Maximum temperature down in Bengaluru due to cyclone effect

ಮಂಗಳವಾರ ಸಂಜೆ ನಗರದಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿದ ಹಿನ್ನೆಲೆಯಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗಿದೆ. ಗುರುವಾರ ಬೆಂಗಳೂರಲ್ಲಿ ಗರಿಷ್ಠ ತಾಪಮಾನ ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದೆ. ಗುರುವಾರದ ಬಳಿಕ ಫ್ಯಾನಿ ಚಂಡಮಾರುತ ಪ್ರಭಾವ ಕಡಿಮೆ ಆಗುವ ಸಾಧ್ಯತೆ ಇದೆ.

ಲೋಕಸಭಾ ಚುನಾವಣೆ 2019ರ ವಿಶೇಷ ಗ್ಯಾಲರಿ

ಸ್ವಲ್ಪ ಪ್ರಮಾಣದ ಮೋಡ ಇರುವುದರಿಂದ ಉಷ್ಣಾಂಶದ ಪ್ರಮಾಣವೂ ಕಡಿಮೆ ಇರಲಿದೆ. ಬೆಂಗಳೂರು ಕೇಂದ್ರ ಭಾಗದಲ್ಲಿ ಗರಿಷ್ಠ ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.5 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌‌ನಲ್ಲಿ ಗರಿಷ್ಠ 29.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.8 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 30.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
Due to cyclone effect Bengaluru city witness decreasing Maximum temperature. Nearly 4 degree celsius decrease.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X