ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

6 ವರ್ಷಗಳಲ್ಲಿ ಮೇ ತಿಂಗಳಲ್ಲಿ ಬೆಂಗಳೂರು ಇಷ್ಟು ಕೂಲ್ ಇದ್ದಿದ್ದು ಇದೇ ಮೊದಲು

|
Google Oneindia Kannada News

ಬೆಂಗಳೂರು, ಜೂನ್ 03: ಕಳೆದ 6 ವರ್ಷಗಳಲ್ಲೇ ಮೇ ತಿಂಗಳಲ್ಲಿ ಕಾಣದ ತಂಪಾದ ವಾತಾವರಣವನ್ನು ಬೆಂಗಳೂರು ಈ ಬಾರಿ ಕಂಡಿದೆ.

ಉರಿ ಬಿಸಿಲು ಇರಬೇಕಾದ ತಿಂಗಳಿನಲ್ಲಿ ಬಹುತೇಕ ದಿನಗಳು ಮಳೆ ಬಂದು ಇಡೀ ಭೂಮಿಯನ್ನೇ ತಂಪಾಗಿ ಇರಿಸಿತ್ತು. ಮೇ ತಿಂಗಳಿನಲ್ಲಿ 31.79 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು.

ರಾಜ್ಯದಲ್ಲಿ ಜೂನ್ 6ರವರೆಗೂ ಅಧಿಕ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್ರಾಜ್ಯದಲ್ಲಿ ಜೂನ್ 6ರವರೆಗೂ ಅಧಿಕ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್

ನಗರವು ಮೇ ತಿಂಗಳಲ್ಲಿ ಒಂದೇ ಒಂದು ದಿನವೂ 35 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚಿನ ಉಷ್ಣಾಂಶವನ್ನು ಈ ಬಾರಿ ಕಂಡಿಲ್ಲ. ರಾಜ್ಯದಲ್ಲಿ ಜೂನ್‌ 3 ಹಾಗೂ 6 ರಂದು ಭಾರಿ ಮಳೆಯಾಗಲಿದ್ದು ಕೆಲವು ಜಿಲ್ಲೆಗಳಿಗೆ ಯೆಲ್ಲೊಆಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

May 2021 Was Bengalurus Coolest In 6 years; Average Max Temperature Was 31.79c

ನೈರುತ್ಯ ಮುಂಗಾರು ಮಾರುತಗಳು ಜೂನ್‌ 3ರಂದು ಕೇರಳ ಕರಾವಳಿಗೆ ಅಪ್ಪಳಿಸಲಿದ್ದು, ರಾಜ್ಯಕ್ಕೆ ಜೂನ್‌ 5ರಂದು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್‌, ಕಲಬುರಗಿ, ಗದಗ, ಕೊಪ್ಪಳ ಮತ್ತು ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಜೂನ್‌ 4ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಕಲಬುರಗಿ, ಬೆಂ.ಗ್ರಾಮಾಂತರ, ಬೆಂ.ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ರಾಯಚೂರು, ತುಮಕೂರಿನಲ್ಲಿ ಮಳೆಯಾಗಲಿದೆ.

ತೌಕ್ತೆ, ಯಾಸ್ ಚಂಡಮಾರುತದಿಂದಾಗಿ ಬಹುತೇಕ ದಿನ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಕೊರೊನಾ ಲಾಕ್‌ಡೌನ್‌ನಿಂದಾಗಿ ನಗರದಲ್ಲಿ ವಾಯುಮಾಲಿನ್ಯ ಕೂಡ ಶೇ.60ರಷ್ಟು ಕಡಿಮೆಯಾಗಿದೆ.

English summary
This year Bengaluru saw its coolest May in 6 years. The average max temperature this May was 31.79c against the climatological average of 33.3c. The city did not see a single 35c + day this May.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X