Water Crisis: ಬೆಂಗಳೂರು ಐಟಿ ಕಂಪನಿಗಳಿಗೆ ಕೇರಳ ಗಾಳ: ಸಚಿವರು ಹೇಳಿದ್ದೇನು?
ಬೆಂಗಳೂರು, ಮಾರ್ಚ್ 31: ನೀರಿನ ಕೊರತೆ ಎಂಬುದು ನೈಸರ್ಗಿಕ ಸಹಜ ವಿದ್ಯಮಾನವಾಗಿದೆ. ಇದು ಕೇವಲ ಬೆಂಗಳೂರು, ಕರ್ನಾಟಕ ಮಾತ್ರವಲ್ಲದೇ, ಕೇರಳವು ಹೊರತಲ್ಲ. ಹೀಗಿದ್ದಾಗ ಬೆಂಗಳೂರಿನ ಐಟಿ ಕಂಪನಿಗಳಿಗೆ ಕೇಳರ ರಾಜ್ಯ ಆಹ್ವಾನ ನೀಡುವುದು ಒಕ್ಕೂಟ ವ್ಯವಸ್ಥೆಯ ತತ್ತ್ವಕ್ಕೆ ವಿರುದ್ಧವಾದುದು ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಖಂಡಿಸಿದ್ದಾರೆ.
ಭಾನುವಾರ ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಬರಗಾಲ ಮತ್ತು ಬೇಸಿಗೆ ಎರಡೂ ಸೇರಿಕೊಂಡು ನಮ್ಮ ದೇಶವೂ ಸೇರಿದಂತೆ ಜಗತ್ತಿನ ಎಲ್ಲೆಡೆಯೂ ನೀರಿನ ಕೊರತೆ ಉಂಟಾಗಿರುವುದು ನಿಸರ್ಗ ಸಹಜ ವಿದ್ಯಮಾನದ ಪರಿಣಾಮವಾಗಿದೆ. ಬೆಂಗಳೂರಿನಲ್ಲಿ ನೀರಿಲ್ಲವೆಂದು ಕೇರಳ ರಾಜ್ಯಕ್ಕೆ ಬರುವಂತೆ ಇಲ್ಲಿನ ಐ.ಟಿ. ಕಂಪನಿಗಳಿಗೆ ಆಹ್ವಾನ ನೀಡುತ್ತಿರುವುದು ಸರಿಯಲ್ಲ ಎಂದು ಅವರು ಕಿಡಿ ಕಾರಿದರು.

'ನಾವೆಲ್ಲರೂ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಅಂದಮೇಲೆ, ಪರಸ್ಪರ ಕೊಡು-ಕೊಳ್ಳುವಿಕೆ ಇರಬೇಕೇ ವಿನಾ ಪರಿಸ್ಥಿತಿಯ ದುರ್ಲಾಭ ಪಡೆಯಲು ನೋಡಬಾರದು. ಇದರಿಂದ ಕೊನೆಗೆ ಯಾರಿಗೂ ಒಳ್ಳೆಯದಾಗುವುದಿಲ್ಲ. ಈ ಪ್ರಾಥಮಿಕ ಸತ್ಯವನ್ನು ಕೇರಳದ ಸಚಿವರು ಅರ್ಥ ಮಾಡಿಕೊಳ್ಳಬೇಕು' ಎಂದರು.
ದೊಡ್ಡ ಮಟ್ಟದ ನೀರಿನ ಸಮಸ್ಯೆ ಆಗಿಲ್ಲ
ಕರ್ನಾಟಕ, ಕೇರಳ ಮಾತ್ರವಲ್ಲದೇ ಈ ವರ್ಷ ಜಗತ್ತಿನ ಎಲ್ಲೆಡೆಗಳಲ್ಲೂ ನೀರಿನ ಕೊರತೆ ಕಾಣಿಸಿಕೊಂಡಿದೆ. ರಾಜಧಾನಿಯ ಐ.ಟಿ. ಕಂಪನಿಗಳು ನೆಲೆಯೂರಿರುವ ಪ್ರದೇಶಗಳಲ್ಲಿ ಕೂಡ ಗಂಭೀರ ಸ್ವರೂಪದಲ್ಲೇನೂ ನೀರಿನ ಕೊರತೆ ಕಾಣಿಸಿಕೊಂಡಿಲ್ಲ. ಜತೆಗೆ ನಮ್ಮಲ್ಲಿ ಕೇರಳ ಮೂಲದ ಲಕ್ಷಾಂತರ ಯುವಕ- ಯುವತಿಯರು ನೆಮ್ಮದಿಯಿಂದ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಅವರು ಮರೆಯಬಾರದು ಎಂದು ಸಲಹೆ ನೀಡಿದರು.
ಒಂದು ರಾಜ್ಯವಾಗಿ ಕೇರಳ ಎಷ್ಟು ಬೇಕಾದರೂ ಬಂಡವಾಳವನ್ನು ಆಕರ್ಷಿಸಬಹುದು. ಆದರೆ, ಈ ರೀತಿ ಕ್ಷುಲ್ಲಕ ರಾಜಕಾರಣ ಸರಿಯಲ್ಲ, ಐ.ಟಿ. ವರಮಾನ ಮತ್ತು ರಫ್ತು ವಹಿವಾಟಿನಲ್ಲಿ ಕರ್ನಾಟಕವು ದೇಶಕ್ಕೇ ಮೊದಲ ಸ್ಥಾನದಲ್ಲಿದೆ. ನಮ್ಮಲ್ಲಿ ಕೈಗಾರಿಕಾ ಸ್ನೇಹಿ ನೀತಿಗಳಿವೆ.
ಬೆಂಗಳೂರು ದೇಶದ ಆರ್ಥಿಕ ಶಕ್ತಿ
ಇಲ್ಲಿರುವಷ್ಟು ಜಾಗತಿಕ ಮಟ್ಟದ ಕಂಪನಿಗಳು ಬೇರೆಲ್ಲೂ ಇಲ್ಲ. ಹೀಗಾಗಿ ಬೆಂಗಳೂರು ಕಳೆದ ಎರಡೂವರೆ ದಶಕಗಳಲ್ಲಿ ದೇಶದ ಹೊಸ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮಿದೆ. ಆದರೆ ಕೇರಳಕ್ಕೆ ಇಂತಹ ಸಾಧನೆ ಸಾಧ್ಯವಾಗಿಲ್ಲ. ನೀರಿನ ಕೊರತೆಯನ್ನೇ ಮುಂದಿಟ್ಟುಕೊಂಡು ಇನ್ನೊಬ್ಬರ ಅವಕಾಶಗಳನ್ನು ಕಸಿದುಕೊಳ್ಳುತ್ತೇವೆ ಎನ್ನುವ ಚಿಂತನೆ ಅತ್ಯಂತ ಅಪಾಯಕಾರಿ ಎಂದು ತಿಳಿಸಿದರು.

ಇಲ್ಲಿ 40 ನದಿಗಳಿವೆ ಎಂದು ಕೇರಳ ಸಚಿವರು ತಿಳಿಸಿದ್ದಾರೆ. ಆದರೆ ಅಲ್ಲಿ ಎಷ್ಟು ಅಣೆಕಟ್ಟುಗಳಿವೆ? ಎಷ್ಟರಲ್ಲಿ ಈಗ ನೀರಿದೆ? ಮುಂತಾದ ಪ್ರಶ್ನೆಗಳು ಉದ್ಭವವಾಗುತ್ತವೆ. ಕೇವಲ ನದಿಗಳಿದ್ದ ಮಾತ್ರಕ್ಕೆ ಕಂಪನಿಗಳನ್ನು ಕಟ್ಟುವುದು ಸಾಧ್ಯವಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಮುಂಗಾರು ಪೂರ್ವ ಮಳೆ ಬರಲಿದೆ. ಬೆಂಗಳೂರು ಸೇರಿದಂತೆ ಎಲ್ಲೆಡೆಯೂ ಪರಿಸ್ಥಿತಿ ಸುಧಾರಿಸಲಿದೆ ಎಂದು ಅವರು ವಿವರಿಸಿದರು.
ಕೈಗಾರಿಕೆ ಪ್ರದೇಶಗಳಿಗೆ ನೀರು ಪೂರೈಕೆ ವ್ಯವಸ್ಥೆ
ಕರ್ನಾಟಕದ ಎಲ್ಲ ಕೈಗಾರಿಕಾ ಪ್ರದೇಶಗಳಿಗೆ ಸಮೀಪದ ನದಿ ಮೂಲಗಳಿಂದ ನೀರು ಸರಬರಾಜಿಗೆ ಪ್ರತ್ಯೇಕ ವ್ಯವಸ್ಥೆ ಮಾಡುತ್ತಿದ್ದು ಈ ಕುರಿತು ರಾಜ್ಯ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಹಾಗೆಯೇ ಬೆಂಗಳೂರಿನ ಕೈಗಾರಿಕಾ ಪ್ರದೇಶಗಳಿಗೆ ಕಾವೇರಿ ನದಿಯಿಂದ ನೀರು ತರುವ ಪ್ರತ್ಯೇಕ ಯೋಜನೆ ಜಾರಿ ಸಂಬಂಧ ಹಲವು ಸಭೆಗಳನ್ನು ನಡೆಸಿ, ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.
ಉತ್ತರ ಕರ್ನಾಟಕದ ವಿಜಯಪುರದ ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಆಲಮಟ್ಟಿ, ಧಾರವಾಡ, ಕಿತ್ತೂರು, ದುರ್ಗದಕೇರಿ ಕೈಗಾರಿಕಾ ಪ್ರದೇಶಗಳಿಗೆ ಮಲಪ್ರಭಾ ನದಿಯಿಂದ ನೀರು ಸರಬರಾಜು ಮಾಡುವ ಯೋಜನೆಗೆ ಟೆಂಡರ್ ಕರೆಯಲಾಗಿದೆ. ಯೋಜನೆ ಅನುಷ್ಠಾನದ ಹಂತದಲ್ಲಿದೆ. ಹೀಗೆ ರಾಜ್ಯದ ಎಲ್ಲ ಕಡೆಗೂ ಈ ರೀತಿಯ ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಕೈಗಾರಿಕೆಗಳಿಗೆ ನೀರು ಪೂರೈಕೆಗೆ ಕ್ರಮವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications