Tumkur Cricket Stadium: ತುಮಕೂರು ಕ್ರಿಕೆಟ್ ಸ್ಟೇಡಿಯಂ ಯೋಜನೆಯಲ್ಲಿ ಮಹತ್ವದ ಬೆಳವಣಿಗೆ

ಬೆಂಗಳೂರು, ಮೇ 06: ರಾಜಧಾನಿ ಬೆಂಗಳೂರಿನ ನಂತರ ಅಭಿವೃದ್ಧಿ ಆಗುತ್ತಿರುವ ಮತ್ತೊಂದು ನಗರ, ಜಿಲ್ಲೆ ಎಂದರೆ ಅದು ತುಮಕೂರು. ಇಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ್ದರು. ಈ ವೇಳೆ ಅವರು ರಾಷ್ಟ್ರೀಯ ಹೆದ್ದಾರಿ ಸಮೀಪ ಹೊಸ ಅಂತಾರಾಷ್ಟ್ರೀಯ ಕ್ರಿಡಾಂಗಣ ನಿರ್ಮಿಸಲು ಚಾಲನೆ ನೀಡಿದ್ದರು. ಸೋಮವಾರ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ಜಮೀನು ಸ್ವಾಧೀನ ಪತ್ರವನ್ನು ಹಸ್ತಾಂತರ ಮಾಡಿದರು.

ತುಮಕೂರು ಜಿಲ್ಲೆಯ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ನೀಡಲಾಯಿತು. ಸಂಸ್ಥೆಯ ಪದಾಧಿಕಾರಿಗಳು, ಈಗ ಕೊಟ್ಟಿರುವ ಜಾಗದ ಪಕ್ಕದಲ್ಲೇ ಇರುವ 6.5 ಎಕರೆ ಖರಾಬು ಜಮೀನನ್ನು KSCAಗೆ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.

MB Patil has Hand Over 41 Acre Land Document to KSCA of New Cricket Stadium Tumkur

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ಮನವಿಗೆ ಸ್ಪಂದಿಸಿದ ಸಚಿವರು, ಈ ಮನವಿಯ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ತುಮಕೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣಗಳು ಬರಬೇಕಾದ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.

ಪ್ರತಿಭೆಗಳಿಗೆ ಉಜ್ವಲ ಅವಕಾಶ

ಬೆಂಗಳೂರಿಗೆ ತಾಗಿಕೊಂಡಿರುವ ತುಮಕೂರು ಜಿಲ್ಲೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಅಲ್ಲಿ ಒಂದು ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ಅಗತ್ಯವಿದೆ ಎಂದು ಗೃಹ ಸಚಿವ ಪರಮೇಶ್ವರ ಕೂಡ ಹೇಳುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ನಗರದ ಮಧ್ಯಭಾಗದಲ್ಲಿದೆ. ಹೀಗಾಗಿ ಇಲ್ಲಿ ಪಾರ್ಕಿಂಗ್, ಸಂಚಾರ ದಟ್ಟಣೆ ಇತ್ಯಾದಿ ಸಮಸ್ಯೆಗಳಿವೆ. ತುಮಕೂರಿನಲ್ಲೂ ಒಂದು ಕ್ರೀಡಾಂಗಣ ಬಂದರೆ ಅಲ್ಲಿನ ಪ್ರತಿಭೆಗಳಿಗೆ ಉಜ್ವಲ ಅವಕಾಶಗಳು ಸಿಗಲಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

Take a Poll

ವಿಜಯಪುರದಲ್ಲೂ ಇಂಥದ್ದೊಂದು ಅಂತಾರಾಷ್ಟ್ರೀಯ ಕ್ರಿಕೇಟ್ ಕ್ರೀಡಾಂಗಣ ಬರಬೇಕು ಎನ್ನುವುದು ತಮ್ಮ ಕನಸಾಗಿದೆ. ಇಂತಹ ಮೈದಾನದಲ್ಲಿ ಪಂಚತಾರಾ ಹೋಟೆಲ್ ಸೇರಿ ಅನೇಕ ಅನುಕೂಲಗಳು ಬರಲಿವೆ. ಸುತ್ತಮುತ್ತಲಿನ ಪ್ರದೇಶಗಳು ಸಹ ಅಭಿವೃದ್ಧಿ ಕಾಣಲಿವೆ ಎಂದು ಪಾಟೀಲ ಆಶಯ ವ್ಯಕ್ತಪಡಿಸಿದರು.

ಕ್ರೀಡೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ತುಮಕೂರು ವ್ಯಾಪ್ತಿಯ ಈ 41 ಎಕರೆ ಜಾಗವನ್ನು ರಿಯಾಯಿತಿ ದರದಲ್ಲಿ ಅಂದರೆ ಎಕರೆಗೆ ₹15 ಲಕ್ಷದಂತೆ ಸ್ವಾಧೀನ ಮಾಡಿಕೊಂಡು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ನೀಡಲಾಗಿದೆ ಎಂದು ಪಾಟೀಲರು ವಿವರಿಸಿದರು. ಜಾಗ ಹಸ್ತಾಂತರವನ್ನು ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್ ಸೇರಿದಂತೆ ಇತರ ಪದಾಧಿಕಾರಿಗಳು ಸ್ವೀಕರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+