ಕಾಂಗ್ರೆಸ್ ಸರ್ಕಾರ ಉರಳಿಸುವುದು HD ಕುಮಾರಸ್ವಾಮಿಯ ಹಗಲುಕನಸು: ಎಂಬಿ ಪಾಟೀಲ್

ಬೆಂಗಳೂರು, ಮೇ 11: ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರ್ಕಾರ ಪತನವಾಗಲಿದೆ, ಉರುಳಿ ಬೀಳಲಿದೆ ಎನ್ನುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಮಾತು ಬರೀ ಹಗಲುಗನಸು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಲೇವಡಿ ಮಾಡಿದರು.

ಇಂದು ಶನಿವಾರ ತಮ್ಮ‌ ನಿವಾಸದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪರ ಲೋಕಸಭಾ ಕ್ಷೇತ್ರದಲ್ಲಂತೂ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

MB Patil HitsBack For HD Kumaraswamy Over Karnataka Govt Fall Down statement

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಮತದಾರರ ಮನ ಗೆದ್ದಿವೆ. ಫಲಿತಾಂಶದ ನಂತರ ಜೆಡಿಎಸ್ ಗತಿ ಏನಾಗಲಿದೆ ಕಾದು ನೋಡೋಣ ಎಂದು ಅವರು ಪ್ರತಿಪಾದಿಸಿದರು.

ಜೆಡಿಎಸ್ ಪಕ್ಷದ ಅನೇಕರು ಕಾಂಗ್ರೆಸ್ಸಿನ ಸಂಪರ್ಕದಲ್ಲಿ ಇದ್ದಾರೆ. ಪೆನ್ ಡ್ರೈವ್ ಪ್ರಕರಣವು ಅವರಿಗೆ ತಲೆನೋವಾಗಿ ಪರಿಣಮಿಸಿದೆ ಎಂದು ಅವರು ವಿವರಿಸಿದರು.

MB Patil HitsBack For HD Kumaraswamy Over Karnataka Govt Fall Down statement

ಕ್ಲೀನ್ ಚಿಟ್ ಪಡೆಯುವ ಯೋಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣನವರ ಕಾಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ಕ್ಲೀನ್ ಚಿಟ್ ತೆಗೆದುಕೊಂಡು, ಬಿಜೆಪಿಯಿಂದ ಪರಿಶುದ್ಧತೆಯ ಸರ್ಟಿಫಿಕೇಟ್ ಪಡೆದುಕೊಳ್ಳುವ ಯೋಜನೆ ಇದರ ಹಿಂದಿದೆ ಎಂದು ಅವರು ಆರೋಪಿಸಿದರು.

ಸದ್ಯಕ್ಕೆ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ತನಿಖೆ ನಡೆಯುತ್ತಿರುವ ಎಸ್ಐಟಿ ಬಗ್ಗೆ ಓರ್ವ ಸಚಿವನಾಗಿ ನಾನು ಏನನ್ನೂ ಮಾತನಾಡಲು ಬಯಸುವುದಿಲ್ಲ. ಎಸ್ಐಟಿ ತನ್ನ‌ ಕೆಲಸ ಮಾಡಲಿದೆ ಎಂದು ಪಾಟೀಲ್ ಹೇಳಿದರು.

ಸಿಬಿಐಗೆ ಕೈಗೆ ಒಪ್ಪಿಸಲು ಆಗ್ರಹ

ಕರ್ನಾಟಕ ರಾಜಕಾರಣದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ರಾಜಕೀಯ ಕೆಸರೆರಚಾಟು ಮುಂದುವರಿದಿದೆ. ಸವಾಲಿಗೆ ಪ್ರತಿ ಸವಾಲು ಎಂಬಂತ ಸ್ಥಿತಿ ಕಂಡು ಬರುತ್ತಿದೆ. ಈ ಮಧ್ಯೆ ಬಿಜೆಪಿ ನಾಯಕರು ಹಾಗೂ ಎಚ್‌ಡಿ ಕುಮಾರಸ್ವಾಮಿ ಅವರು ಪ್ರಕರಣವನ್ನು ಸಿಬಿಐ ಹಸ್ತಾಂತರಿಸುವಂತೆ ಆಗ್ರಹಿಸಿದೆ.

ಇದಕ್ಕೆ ಒಪ್ಪದ ರಾಜ್ಯ ಸರ್ಕಾರ, ಕರ್ನಾಟಕ ಪೊಲೀಸರ ಮೇಲೆ ನಮಗೆ ನಂಬಿಕೆ ಇದೆ. ತನಿಖೆಗೆ ಅವರೇ ಸಮರ್ಥರಿದ್ದಾರೆ ಎಂದು ತಿಳಿಸಿದೆ. ದೇಶ ಬಿಟ್ಟು ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಆರೋಪಿ ದೇಶಕ್ಕೆ ಮರಳಿದ್ದಾರೆ.

ಇದೇ ಪ್ರಕರಣದ ಜತೆಗೆ ಮಹಿಳೆಯ ಅಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ತಂದೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರನ್ನು ನ್ಯಾಯಾಂಗ ಬಂಧನದಲ್ಲಿಡಲಾಗಿದೆ. ಅತ್ಯಾಚಾರ, ಅಪಹರಣ, ಪೆನ್‌ಡ್ರೈವ ವಿಚಾರ ಕುರಿತು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+