ಪೌರಕಾರ್ಮಿಕರ ಮೇಲೂ ಲೈಂಗಿಕ ಕಿರುಕುಳ: ಅಧಿಕಾರಿಗಳ ವಿರುದ್ಧ ಆರೋಪ

ಬೆಂಗಳೂರು, ಅಕ್ಟೋಬರ್ 25: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಮೇಲೂ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಆಘಾತಕಾರಿ ಪ್ರಕರಣಗಳು ಬೆಳಕಿಗೆ ಬಂದಿವೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಸಂಬಂಧಿಗಳು ಸಾಮಾಜಿಕ ಜಾಲತಾಣ ಫೇಸ್ ಬುಕ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಬಿಬಿಎಂಪಿ ಸ್ವಚ್ಛತಾ ವಿಭಾಗದ ಅಧಿಕಾರಿಗಳು ಪೌರಕಾರ್ಮಿಕರ ಮೇಲೆ ಲೈಂಗಿಕ್ ದೌರ್ಜನ್ಯವೆಸಗಿದ್ದಾರೆ.

ವೇತನ ಬಟವಾಡೆ ಹಾಗೂ ಮತ್ತಿತರೆ ಸೌಲಭ್ಯಗಳನ್ನು ನೀಡುವ ಸಂದರ್ಭದಲ್ಲಿ ಮಹಿಳಾ ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

Me Too campaign enters into BBMP premises

ಈಗಾಗಲೇ ಚಿತ್ರರಂಗ, ರಾಜಕಾರಣಿಗಳು, ಪ್ರತಷ್ಠಿತ ವೈದ್ಯರು ಮತ್ತಿತರೆ ಸಮಾಜದ ಉನ್ನತ ಮಟ್ಟದಲ್ಲಿರುವ ವ್ಯಕ್ತಿಗಳ ಮೇಲೆ ಮಾತ್ರ ಕೇಳಿಬರುತ್ತಿದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಇದೀಗ ಬಿಬಿಎಂಪಿ ಪೌರಕಾರ್ಮಿಕರ ಮೇಲೂ ಕೇಳಿಬಂದಿದ್ದು, ದುಡಿಯುವ ವರ್ಗದವರ ಮೇಲೆ ಮೇಲಾಧಿಕಾರಿಗಳು ಶೋಷಣೆ ಮಾಡುತ್ತಿದ್ದಾರೆ ಎಂಬ ಅಭಿಪ್ರಾಯ ಕೇಳಿಬಂದಿದೆ.

ಬಡವರು ಪೌರಕಾರ್ಮಿಕ ಕೆಲಸಕ್ಕಾಗಿ ಬರುತ್ತಾರೆ. ಆದರೆ ನೀಚ ಅಧಿಕಾರಿಗಳು ಲೈಂಗಿಕ ಕಿರುಕುಳ ನೀಡ್ತಾರೆ. ನನ್ನ ಅತ್ತೆಯನ್ನು ಕೂಡಾ ನೀಚ ಅಧಿಕಾರಿಗಳು ಕೆಟ್ಟ ದೃಷ್ಟಿಯಿಂದ ನೋಡುತ್ತಾರೆ. ಈ ಬಗ್ಗೆ ಒಂದು ಗಂಟೆಗಳ ಕಾಲ ನಮ್ಮತ್ತೆ ಕಣ್ಣೀರು ಹಾಕಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಇನ್ನೊಂದು ಪೋಸ್ಟ್ ಅಪ್ ಲೋಡ್ ಆಗಿದ್ದು, ಬೆಂಗಳೂರಿನ ಪೌರಕಾರ್ಮಿಕರ ಮೇಲೆ ನಿತ್ಯ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಅನಕ್ಷರಸ್ಥರು ಎಂಬ ಕಾರಣಕ್ಕೆ ಅಧಿಕಾರಿಗಳು ಅವರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಅಧಿಕಾರಿಗಳು ಹೇಳಿದ ಹಾಗೆ ಕೇಳದಿದ್ದರೆ ಹಾಜರಾತಿ ಕಟ್ ಮಾಡುತ್ತಾರೆ. ಪೌರಕಾರ್ಮಿಕರ ಬಳಿ ಸ್ಮಾರ್ಟ್ ಫೋನ್ ಇಲ್ಲ, ಇಲ್ಲದಿದ್ದರೆ ಎಲ್ಲರ ಮುಖವಾಡ ಬಯಲಾಗುತ್ತಿತ್ತು ಎಂದು ಬರೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+