ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬ್ಲ್ಯಾಕ್ ಫಂಗಸ್‌ಗೆ ಔಷಧಿ ಪೂರೈಕೆಗೆ ಸೂಕ್ತ ಕ್ರಮ : ಸುಧಾಕರ್

|
Google Oneindia Kannada News

ಬೆಂಗಳೂರು, ಮೇ 24: ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಕಂಡುಬಂದಿದ್ದು, ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ವ್ಯವಸ್ಥೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 300 ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಸೋಂಕಿತರು ಇದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಇದೆ. 17 ಮೆಡಿಕಲ್ ಕಾಲೇಜುಗಳಲ್ಲಿ ಕೂಡ ವ್ಯವಸ್ಥೆ ಇದೆ. ಆದರೆ ಔಷಧಿ ಸ್ವಲ್ಪ ಕೊರತೆ ಇದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಜೊತೆ ಈ ಬಗ್ಗೆ ಚರ್ಚಿಸಲಾಗಿದೆ ಎಂದರು.

ಇಡೀ ದೇಶದಲ್ಲಿ ವರ್ಷಕ್ಕೆ 100-200 ರಷ್ಟು ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗುತ್ತಿದ್ದರು. ಈಗ ರಾಜ್ಯದಲ್ಲೇ 300 ಕ್ಕೂ ಅಧಿಕ ಸೋಂಕಿತರಿರುವಾಗ ಔಷಧಿ ಕೊರತೆ ಕಂಡುಬರುತ್ತದೆ. ಇದಕ್ಕಾಗಿ ಔಷಧ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. 1 ಸಾವಿರಕ್ಕೂ ಅಧಿಕ ವೈಲ್ ಗಳನ್ನು ಕಳುಹಿಸಿಕೊಡುವ ನಿರೀಕ್ಷೆಯೂ ಇದೆ. ಬ್ಲ್ಯಾಕ್ ಫಂಗಸ್ ಗೆ 1,150 ವೈಲ್ ಔಷಧಿ ರಾಜ್ಯಕ್ಕೆ ದೊರೆತಿದೆ. 20 ಸಾವಿರ ವೈಲ್‌ಗೆ ಬೇಡಿಕೆ ಇಡಲಾಗಿದೆ ಎಂದರು.

Measures to supply medicine for black fungus: Dr.K.Sudhakar

ಈ ಸೋಂಕು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಮಾಡಲು ಸಮಿತಿ ರಚಿಸಿದ್ದು, ಈ ಸಮಿತಿ ವರದಿ ನೀಡಿದೆ. ಸ್ಟೀರಾಯಿಡ್ ಜೊತೆಗೆ ಹ್ಯುಮಿಡಿಫೈರ್ ನಲ್ಲಿ ನಲ್ಲಿ ನೀರು ಬಳಕೆ, ಐಸಿಯು ವೆಂಟಿಲೇಟರ್ ಅನ್ನು ಇನ್ನೊಬ್ಬರಿಗೆ ಬಳಸುವಾಗ, ಒಂದೇ ಮಾಸ್ಕ್ ದೀರ್ಘಕಾಲ ಬಳಕೆ, ಟ್ಯೂಬ್, ಹಾಸಿಗೆ ಮೊದಲಾದ ಮೂಲಗಳಿಂದ ಸೋಂಕು ಬರುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನು ತಡಗಟ್ಟುವ ಬಗೆಯನ್ನೂ ತಿಳಿಸಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಕಟ್ಟಡ ನವೀಕರಣ ಕಾಮಗಾರಿ ನಡೆಸಬಾರದು, ಹೊರಗಿನವರು ವಾರ್ಡ್‍ಗೆ ಬರಬಾರದು, ಪ್ರತಿ ಪಾಳಿ ಮುಗಿದ ಮೇಲೆ ಸ್ವಚ್ಛತೆ ಮಾಡಬೇಕು, ಪ್ರತಿ ಉಪಕರಣಗಳನ್ನು ಸ್ವಚ್ಛವಾಗಿಡಬೇಕು ಎಂದು ಸೂಚಿಸಲಾಗಿದೆ ಎಂದರು.

ಕೋವಿಡ್ ನಿಂದ ಗುಣಮುಖರಾದಾಗ ಇಎನ್ ಟಿ ವೈದ್ಯರು ಮತ್ತೆ ತಪಾಸಣೆ ಮಾಡಬೇಕು. 3, 7, 21 ನೇ ದಿನ ತಪಾಸಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

Recommended Video

ಪ್ಯಾಲೆಸ್ತೇನ್ ಇಸ್ರೇಲ್ ಕಿತ್ತಾಟದಿಂದ ಅಲ್ಲಿನ ಪರಿಸ್ಥಿತಿ ಹೀಗಾಗಿದೆ!! | Oneindia Kannada

ಆಶಾ ಕಾರ್ಯಕರ್ತರು ಸೇರಿದಂತೆ ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗೆ ವೇತನ ಪಾವತಿಸಲಾಗಿದೆ. ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಚಾರ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕಿದೆ. ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಚರ್ಚಿಸಲಾಗುವುದು. 10 ಲಕ್ಷಕ್ಕೂ ಅದಿಕ ಪಿಪಿಇ ಕಿಟ್ ನಮ್ಮ ಬಳಿ ಇದೆ. ಈ ವಸ್ತುಗಳ ಗುಣಮಟ್ಟದ ಬಗೆಗಿನ ಆರೋಪ ಸುಳ್ಳು ಎಂದು ಸ್ಪಷ್ಟಪಡಿಸಿದರು.

English summary
All district hospitals have been prepared for treatment of mucormycosis as there are more than 300 cases reported in the state, said Health & Medical Education Minister Dr.K.Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X