Meat Ban: ಅ.2ರಂದು ಮಾಂಸ ಸಿಗಲ್ಲ! ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟಕ್ಕೆ ಬ್ರೇಕ್
ಬೆಂಗಳೂರು: ಕರ್ನಾಟಕ ಸರ್ಕಾರದ ಹಂತದಿಂದ ಹಿಡಿದು, ಕಚೇರಿ, ಶಾಲಾ ಕಾಲೇಜುಗಳಲ್ಲಿ ಸಂಘ-ಸಂಸ್ಥೆಗಳು ಅಕ್ಟೋಬರ್ 2ರಂದು ಶುಕ್ರವಾರ ಗಾಂಧಿ ಜಯಂತಿ ಆಚರಣೆ ಮಾಡಲಿವೆ. ಈ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ.
ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ದಿನಾಂಕ 02-10-2026ರ ಶುಕ್ರವಾರದಂದು ಪ್ರಯುಕ್ತ ಕಾಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಉಪ ನಿರ್ದೇಶಕರು(ಪಶುಪಾಲನೆ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇವಾ ಸುಧಾರಣೆಗಾಗಿ ಪ್ರತೀ ಶುಕ್ರವಾರ ಫೋನ್-ಇನ್ ಕಾರ್ಯಕ್ರಮ
ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಪ್ರತೀ ಶುಕ್ರವಾರ ಸಾರ್ವಜನಿಕರೊಂದಿಗೆ ಫೋನ್-ಇನ್ ಕಾರ್ಯಕ್ರಮ ಆರಂಭಿಸಿದ್ದಾರೆ. ಈ ವಾರದ ಫೋನ್-ಇನ್ ಕಾರ್ಯಕ್ರಮವು 2026 ರ ಅಕ್ಟೋಬರ್ 2 ರಂದು (ಶುಕ್ರವಾರ) ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ನಡೆಯಲಿದೆ.
ಈ ಎಲ್ಲ ಸಮಸ್ಯೆಗೆ ಪರಿಹಾರ ಪಡೆಯಿರಿ!
ಈ ಅವಧಿಯಲ್ಲಿ ನಾಗರಿಕರು ರಸ್ತೆ ಗುಂಡಿಗಳು ಹಾಗೂ ದುರಸ್ತಿ ಕಾರ್ಯಗಳು, ಬೀದಿ ದೀಪಗಳ ನಿರ್ವಹಣೆ, ಮನೆಮನೆ ಕಸ ಸಂಗ್ರಹಣೆ ಮತ್ತು ವಿಲೇವಾರಿ, ಅಪಾಯಕಾರಿಯಾದ ಮರಗಳು/ಕೊಂಬೆಗಳ ತೆರವು, ಸೊಳ್ಳೆ ನಿಯಂತ್ರಣ ಕ್ರಮಗಳು, ಬೀದಿ ನಾಯಿಗಳ ನಿಯಂತ್ರಣ, ಉದ್ಯಾನವನಗಳ ಅಭಿವೃದ್ಧಿ ಹಾಗೂ ಸಂರಕ್ಷಣೆ, ಅನಧಿಕೃತ ಬ್ಯಾನರ್ ಮತ್ತು ಪೋಸ್ಟರ್ ಗಳ ತೆರವು, ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿ ನಿವಾರಣೆ, ಇ-ಖಾತಾ ಸಂಬಂಧಿತ ಸಮಸ್ಯೆಗಳು ಸೇರಿದಂತೆ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಆಯುಕ್ತರೊಂದಿಗೆ ನೇರವಾಗಿ ಮಾತನಾಡಬಹುದಾಗಿದೆ.
ಫೋನ್-ಇನ್ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಎಲ್ಲಾ ಅಹವಾಲುಗಳನ್ನು 'ಸಹಾಯ 2.0' ಪೋರ್ಟಲ್ ನಲ್ಲಿ ದಾಖಲಿಸಿ, ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ತಕ್ಷಣವೇ ಕಳುಹಿಸಲಾಗುತ್ತದೆ. ದೂರು ದಾಖಲಾಗಿರುವ ವಿವರಗಳು ಹಾಗೂ ಸಂಬಂಧಿತ ಅಧಿಕಾರಿಗಳ ಮಾಹಿತಿಯನ್ನು ನಾಗರಿಕರಿಗೆ ಎಸ್.ಎಂ.ಎಸ್ ಮೂಲಕ ತಿಳಿಸಲಾಗುವುದು ಎಂದು ಪಾಲಿಕೆ ತಿಳಿಸಿದೆ.
ಸಂಪರ್ಕಿಸಬೇಕಾದ ಸಂಖ್ಯೆಗಳು
ಈ ಪೋನ್ ಇನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರು, ನಿಯಂತ್ರಣ ಕೊಠಡಿ ಸಂಪರ್ಕ ಮೊಬೈಲ್/ ವಾಟ್ಸಪ್ 9480685705, ಲ್ಯಾಂಡ್ ಲೈನ್ 080-22975936 / 080-23636671ಗೆ ಸಂಪರ್ಕಿಸಬಹುದು. ಇಲ್ಲವೇ ನಾಗರಿಕರು ತಮ್ಮ ದೂರುಗಳನ್ನು 'ಸಹಾಯ 2.0' ಮೊಬೈಲ್ ಅಪ್ಲಿಕೇಶನ್ ಮೂಲಕವೂ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Click it and Unblock the Notifications
