Mahavir Jayanti: ಮಾಂಸಾಹಾರಿಗಳಿಗೆ ಕಹಿ ಸುದ್ದಿ! ಈ ದಿನ ನಗರದಲ್ಲಿ ಮಾಂಸ ಮಾರಾಟ ಬ್ಯಾನ್
ಬೆಂಗಳೂರು, ಏಪ್ರಿಲ್ 08: ಜೈನ ಧರ್ಮದಲ್ಲಿ ವಿವಿಧ ಹಬ್ಬಗಳಂತೆ 'ಮಹಾವೀರ ಜಯಂತಿ' ಸಹ ಅತಿ ಮುಖ್ಯವಾದದ್ದಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲೂ ಮಹಾವೀರ ಜಯಂತಿಯನ್ನು ಏಪ್ರಿಲ್ 10ರಂದು ಆಚರಿಸಲಾಗುತ್ತಿದೆ. ಈ ದಿನ ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶಿಸಿದೆ.
"ಮಹಾವೀರ ಜಯಂತಿ" ಜೈನ ಧರ್ಮಕ್ಕೆ ಸೀಮಿತವಾಗದೇ ಇತರ ಸಮುದಾಯವರು ಆಚರಣೆ ಮಾಡುತ್ತಾರೆ. ಏಪ್ರಿಲ್ 10ರಂದು ಗೌರವಾರ್ಥ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಬ್ಯಾನ್ ಮಾಡಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಬಿಬಿಎಂಪಿಯಿಂದ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ
ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಗೃಹಲಕ್ಷ್ಮೀ ಯೋಜನೆ ರಾಜದಾದ್ಯಂತ ಶೇ. 98% ರಷ್ಟು ಫಲಾನುಭವಿಗಳಿಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಖಾತೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಯೋಜನೆ ಅನುಷ್ಠಾನ ಸಂಬಂಧಿ ಸಭೆಯಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ (ಬೆಂಗಳೂರು ವಿಭಾಗ) ದ ಉಪಾಧ್ಯಕ್ಷರಾದ ಸೂರಜ್ ಹೆಗ್ಡೆ ಅವರು ಮಾಹಿತಿ ನೀಡಿದರು.
ಗೃಹ ಲಕ್ಷ್ಮೀ ಯೋಜನೆ ಹಣ ನೀಡಿದರೆ, ಹಸಿದವರಿಗೆ ಅನ್ನಭಾಗ್ಯ ಯೋಜನೆ ಆಸರೆಯಾಗಿದೆ. ಗೃಹ ಜ್ಯೋತಿಯಿಂದ ಸಾಕಷ್ಟು ಕುಂಟುಂಬಗಳಿಗೆ ಅನುಕೂಲವಾಗಿದೆ. ಗ್ಯಾರಂಟಿ ಯೋಜನೆಗಳಲ್ಲಿರುವ ಸಣ್ಣ-ಪುಟ್ಟ ನ್ಯೂನ್ಯತೆಗಳನ್ನು ಸರಿಪಿಸಲು ಕ್ರಮವಹಿಸಲಾಗುತ್ತಿದೆ ಎಂದರು.

ಪಡಿತರ ತೂಕದಲ್ಲಿ ವ್ಯತ್ಯಾಸ, ಇತರ ಸಮಸ್ಯೆ ಪರಿಹಾರ
ಕೆಲವು ನ್ಯಾಯ ಬೆಲೆ ಅಂಗಡಿಗಳ ಮೇಲೆ ಪಡಿತರ ವಿತರಿಸುವ ಸಮಯವನ್ನು ಪ್ರದರ್ಶಿಸದಿರುವುದು ಕಂಡು ಬಂದಿದೆ ಹಾಗೂ ಕೆಲವು ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಿಸುವಾಗ ತೂಕದಲ್ಲಿ ವ್ಯತ್ಯಾಸಗಳು ಕಂಡುಬರುತಿದೆ. ಅದನ್ನು ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು ಅದನ್ನು ಸರಿಪಡಿಸಲಾಗುತ್ತಿದೆ.
ಬಿಬಿಎಂಪಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಜಿ. ಕೃಷ್ಣಪ್ಪ ಅವರು, ಪಾಲಿಕೆ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಗರದಲ್ಲಿ 20,48,961 ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಳಿಸುವ ಹೊಣೆ ಹೋರಲಾಗಿದೆ ಎಂದು ವಿವರಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 8,156 ಬೂತ್ ಗಳಿಂದ ಸುಮಾರು 93,32,000 ಮತದಾರರನ್ನು ಹೊಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 756 ನ್ಯಾಯ ಬೆಲೆ ಅಂಗಡಿಗಳಿಂದ ಒಟ್ಟು (AAY+BPL) 5,08,426 ಪಡಿತರ ಚೀಟಿಗಳಿವೆ, 68,021 APL ಕಾರ್ಡ್ ಸೇರಿ ಒಟ್ಟು 5,76,447 ಪಡಿತರ ಚೀಟಿಗಳಿವೆ. ಈ ಪೈಕಿ ಒಟ್ಟು ಫಲಾನುಭವಿಗಳು (AAY+BPL) 18,07,151 ಮತ್ತು 2,41,810 APL ಫಲಾನುಭವಿಗಳು ಸೇರಿ ಒಟ್ಟಾಗಿ 20,48,961 ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಹೊಣೆಯನ್ನು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯು ಜವಾಬ್ದಾರಿಯುತವಾಗಿ ನಿರ್ವಹಿಸುತ್ತಿದೆ ಎಂದು ತಿಳಿಸಿದರು..












Click it and Unblock the Notifications