ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

58 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ!

|
Google Oneindia Kannada News

ಬೆಂಗಳೂರು, ಅ, 28 : 2013ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಕೊಂಚ ಬದಲಾವಣೆಯಾಗಿದೆ. ಈ ಬಾರಿ 58ನೇ ರಾಜ್ಯೋತ್ಸವದ ಹಿನ್ನೆಲೆಯಲ್ಲಿ 58 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಭಾನುವಾರ ನಡೆದ ಸಭೆಯಲ್ಲಿ ಸಂಭ್ಯಾವರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಂಬಂಧಿಸಿದಂತೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಈ ಬಾರಿ 58 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳ ಗಣ್ಯರು ಸೇರಿದಂತೆ 70 ಮಂದಿ ಸಂಭ್ಯಾವರ ಪಟ್ಟಿಯನ್ನು ಸಭೆಯಲ್ಲಿ ಅಂತಿಮಗೊಳಿಸಲಾಗಿದೆ.

Siddaramaiah

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೆಪ್ಟಂಬರ್‌ನಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು. ಆದರೆ ಕೆಲ ಗೊಂದಲಗಳ ಕಾರಣ ಸಮಿತಿಯನ್ನು ಪುನರ್ ರಚಿಸಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ| ಯು.ಆರ್‌.ಅನಂತಮೂರ್ತಿ ನೇತೃತ್ವದಲ್ಲಿ ನೂತನ ಸಮಿತಿ ರಚಿಸಲಾಗಿತ್ತು. (ಅನಂತಮೂರ್ತಿ ನೇತೃತ್ವದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ)

ರಾಜ್ಯೋತ್ಸವ ಪ್ರಶಸ್ತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಚಿವರು ಮತ್ತು ಮುಖ್ಯಮಂತ್ರಿಯವರ ಕಚೇರಿಯಿಂದ ಸುಮಾರು 4 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು ಎಂದು ತಿಳಿದು ಬಂದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ.ಯು.ಆರ್.ಅನಂತಮೂರ್ತಿ ನೇತೃತ್ವದ ಸಮಿತಿಗೆ ಈ ಅರ್ಜಿಗಳನ್ನು ನೀಡಿತ್ತು.

ಅ.24 ಮತ್ತು 25ರಂದು ಸಭೆ ನಡೆಸಿದ ಸಮಿತಿ 70 ಅರ್ಜಿಗಳನ್ನು ಅಂತಿಮಗೊಳಿಸಿತ್ತು. ಭಾನುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸ ಸಭೆಯಲ್ಲಿ ಈ ಪಟ್ಟಿಯನ್ನು ಸಿದ್ದರಾಮಯ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ಉಮಾಶ್ರೀ ಅವರಿಗೆ ನೀಡಲಾಗಿದೆ. ಇದರಲ್ಲಿ 58 ಸಾಧಕರನ್ನು ಆಯ್ಕೆ ಮಾಡುವ ಜವಾಬ್ದಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವಹಿಸಲಾಗಿದೆ.

ಭಾನುವಾರ ನಡೆದ ಸಭೆಯಲ್ಲಿ 58 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಉಮಾಶ್ರೀ, ಸಮಿತಿ ಅಧ್ಯಕ್ಷ ಡಾ.ಯು.ಆರ್.ಅನಂತಮೂರ್ತಿ, ಸಚಿವರಾದ ಕೆ.ಜೆ.ಜಾರ್ಜ್‌, ಟಿ.ಬಿ.ಜಯಚಂದ್ರ, ಡಾ.ಎಚ್‌.ಸಿ.ಮಹದೇವಪ್ಪ ಮುಂತಾದವರು ಪಾಲ್ಗೊಂಡಿದ್ದರು.

English summary
Chief Minister Siddaramaiah on Sunday, October 27 held a meeting with the advisory committee headed by Jnanapith awardee U.R. Ananthamurthy for selection of those eligible for the Kannada Rajyotsava award 2013. the list of names for the award has not been finalized yet. Siddaramaiah is likely to hold another round of meeting on Monday, October 28.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X