• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯದಲ್ಲಿ ಕೊರೊನಾ ಏರಿಕೆ; ಏ.20ಕ್ಕೆ ರಾಜ್ಯಪಾಲರ ನೇತೃತ್ವದಲ್ಲಿ ಸಭೆ

|

ಬೆಂಗಳೂರು, ಏಪ್ರಿಲ್ 19: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಪರಿಸ್ಥಿತಿ ಪರಿಶೀಲನೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರ ಅಧ್ಯಕ್ಷತೆಯಲ್ಲಿ ಏ.20ರಂದು ವಿಡಿಯೋ ಸಂವಾದ ನಡೆಸಲಾಗುತ್ತಿದೆ.

ಮಂಗಳವಾರ ರಾಜ್ಯಪಾಲರಾದ ವಜುಭಾಯ್ ವಾಲಾ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಸಭೆ ನಡೆಯಲಿದೆ. ಸಭೆಯಲ್ಲಿ ಉಭಯ ಸದನಗಳ ಸಭಾ ನಾಯಕರು, ಪ್ರತಿಪಕ್ಷಗಳ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊರೊನಾ ವಿರುದ್ಧ ಹೋರಾಟದ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಂಗಳವಾರ ಸಂಜೆ 4.30ಕ್ಕೆ ಸಭೆ ನಡೆಯಲಿದ್ದು, ಮಣಿಪಾಲ ಆಸ್ಪತ್ರೆಯಿಂದಲೇ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ.

   'ಜನರು ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರೆ, ಕಠಿಣ ಕ್ರಮದ ಅವಶ್ಯಕತೆ ಬರ್ತಿರಲಿಲ್ಲ' ಸಚಿವ ಸುಧಾಕರ್‌ | Oneindia Kannada

   ಕರ್ನಾಟಕದಲ್ಲಿ 15,785 ಹೊಸ ಕೋವಿಡ್ ಪ್ರಕರಣ ಪತ್ತೆಕರ್ನಾಟಕದಲ್ಲಿ 15,785 ಹೊಸ ಕೋವಿಡ್ ಪ್ರಕರಣ ಪತ್ತೆ

   ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರಾದ ಜಿ.ಪರಮೇಶ್ವರ್, ಎಚ್‌.ಡಿ. ರೇವಣ್ಣ ಅವರಿಗೆ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ.

   English summary
   Political leaders meeting on april 20 under chairmanship of governor vajubhai vala to discuss on covid 19 situation in state
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X