ಡ್ರಗ್ಸ್ ಗೆ ನೋ, ಬದುಕಿಗೆ ಯೆಸ್ ಹೇಳಿ ಅಂತಾರೆ ಬೆಂಗಳೂರು ಪೊಲೀಸರು

ಬೆಂಗಳೂರು, ಸೆ.27: ಬೆಂಗಳೂರು ನಗರ ಪೊಲೀಸರು ಬೃಹತ್ ಮಾದಕ ದ್ರವ್ಯ ವ್ಯಸನ ವಿರೋಧಿ ಅಭಿಯಾನ' ಡ್ರಗ್ಸ್ ಗೆ ನೋ ಹೇಳಿ, ಬದುಕಿಗೆ ಯೆಸ್ ಹೇಳಿ' ಸೆ.27ರಂದು ಗುರುವಾರ ಫಿನಿಕ್ಸ್ ಮಾರ್ಕೆಟ್ ಸಿಟಿಯಲ್ಲಿ ಆಯೋಜಿಸಿದೆ.

ಕಾರ್ಯಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜ್ಯ ಅಬಕಾರಿ ಇಲಾಖೆ ಆಯುಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರಿಕೆಟ್ ಆಟಗಾರ ಹಾಗೂ ಐಸಿಸಿ ಮ್ಯಾಚ್ ರೆಫ್ರಿ ಜಾವಗಲ್ ಶ್ರೀನಾಥ್ ಅವರು ಅಧ್ಯಕ್ಷತೆವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ಸ್ವಯಂಸೇವಾ ಸಂಸ್ಥೆಗಳು ಪಾಲ್ಗೊಳ್ಳಲಿವೆ, ದೇಹದಾರ್ಢ್ಯ ಪ್ರದರ್ಶನ, ಸಂಗೀತ ರಸಮಂಜರಿ, ಕಳರಿಪಯಟ್ಟು ಸಮರ ಕಲೆ ಹಾಗೂ ಮಾದಕದ್ರವ್ಯ ವ್ಯಸನದ ದುಷ್ಪರಿಣಾಮಗಳ ಕುರಿತು ಬೆಂಗಳೂರು ಪೊಲೀಸರು ನಿರ್ಮಿಸಿರುವ ಕಿರು ವಿಡಿಯೋ ಪ್ರದರ್ಶನ ನಡೆಯಲಿದೆ.

Mega anti drugs campaign by Bengaluru police

ಇತ್ತೀಚೆಗೆ ಶಾಲಾ, ಕಾಲೇಜು ಮಕ್ಕಳು ಮಾದಕವ್ಯಸನಕ್ಕೆ ಒಳಗಾಗಿ ತಮ್ಮ ಜೀವನವನ್ನು ನರಕಕ್ಕೆ ತಳ್ಳುತ್ತಿದ್ದಾರೆ, ಆದ್ದರಿಂದ ಬೆಂಗಳೂರು ಪೊಲೀಸರು ಈಗಾಗಲೇ ಹಲವು ಅಭಿಯಾನವನ್ನು ಶಾಲಾ ಕಾಲೇಜುಗಳಲ್ಲಿ ಆಯೋಜಿಸುತ್ತಾ ಬಂದಿದೆ. ಅದರ ಮತ್ತೊಂದು ಭಾಗವಾಗಿ ಈ ಕಾರ್ಯಕ್ರಮ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+