ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಸೆ.22ರಂದು ಉದ್ಯೋಗ ಮೇಳ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 19 : ಕರ್ನಾಟಕ ಪ್ರದೇಶ ಕಾ೦ಗ್ರೆಸ್ ಸಮಿತಿಯ ಅಲ್ಪ ಸಂಖ್ಯಾತ ಘಟಕ ಬೆಂಗಳೂರಿನಲ್ಲಿ ಸೆ.22ರ ಮಂಗಳವಾರ ಉದ್ಯೋಗ ಮೇಳವನ್ನು ಆಯೋಜಿಸಿದೆ. ಮೇಳಕ್ಕೆ ಆಗಮಿಸುವ ಅಭ್ಯರ್ಥಿಗಳಿಗೆ ಪ್ರವೇಶ ಉಚಿತವಾಗಿರುತ್ತದೆ.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಮತ್ತು ರೈಂಬೋ ಜಂಟಿಯಾಗಿ ಸೆ.22ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ತನಕ ಈ ಉದ್ಯೋಗ ಮೇಳವನ್ನು ಆಯೋಜಿಸಿವೆ. 25ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿದ್ದು, ಸ್ಥಳದಲ್ಲಿಯೇ ನೇರ ನೇಮಕಾತಿ ಮಾಡಿಕೊಳ್ಳಲಿವೆ.

congress

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಐಐಟಿ, ಡಿಪ್ಲೋಮಾ, ಪದವೀಧರ ಮತ್ತು ಸ್ನಾತಕೋತ್ತರ ಪದವೀಧರ ಯುವಕ-ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

jobs

ವಿಳಾಸ : ಹೊಸ ಕೆಪಿಸಿಸಿ ಕಚೇರಿ, ನಂ. 3, ರೇಸ್ ಕೋರ್ಸ್ ರಸ್ತೆ, ಬೆಂಗಳೂರು - 560009, ಬೆಂಗಳೂರು

ಗ್ರಾಮ ಲೆಕ್ಕಿಗ ಹುದ್ದೆ ಖಾಲಿ ಇದೆ : ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಬರುವ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 43 ಹುದ್ದೆಗಳಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 9, 2015. [ವಿವರಗಳು ಇಲ್ಲಿವೆ]

ಬಿಇಎಂಎಲ್ ನಲ್ಲಿ ಕೆಲಸವಿದೆ : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಸಹಾಯಕ ಮ್ಯಾನೇಜರ್, ಐಟಿಐ ಟ್ರೈನಿ ಸೇರಿದಂತೆ 43ಕ್ಕೂ ಅಧಿಕ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮೈಸೂರು, ಬೆಂಗಳೂರು, ಕೆ.ಜಿ.ಎಫ್, ಪಾಲಕ್ಕಾಡ್ ಮುಂತಾದ ಕಡೆಗಳಲ್ಲಿ ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಸೆ. 23ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. [ಉದ್ಯೋಗ ಹೆಚ್ಚಿನ ಮಾಹಿತಿ ಇಲ್ಲಿದೆ]

English summary
Karnataka Pradesh Congress Committee minority department organized mega job fair on September 23rd Tuesday, at KPCC new office race course road, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X