ಮೇಕೆದಾಟು ಯೋಜನೆ: ಕೇಂದ್ರದಿಂದಲೇ 'ವಿವಾದ' ಪದ ಬಳಕೆ - ಹೆಚ್‌ಡಿಕೆ ಕಿಡಿ

ಬೆಂಗಳೂರು ಮಾರ್ಚ್ 6: ರಾಜ್ಯದಲ್ಲಿ ಮೇಕೆದಾಟು ಯೋಜನೆ ವಿಚಾರ ಮತ್ತಷ್ಟು ರಾಜಕೀಯ ವಾದ ವಿವಾದಗಳಿಗೆ ಒಳಗಾಗಿದೆ. ಮೇಕೆದಾಟು ಯೋಜನೆ ಬಗ್ಗೆ ಕೇಂದ್ರವೇ ಎರಡು ರಾಜ್ಯಗಳ ನಡುವಿನ 'ವಿವಾದ' ಎನ್ನುವ ಪದವನ್ನು ಬಳಕೆ ಮಾಡಿದೆ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ದೂರಿದ್ದಾರೆ. ಮೇಕೆದಾಟು ಯೋಜನೆ 'ವಿವಾದ'ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್‌ ಹೇಳಿದ್ದಾರೆ. ಅವರೇ ʼವಿವಾದʼ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ʼಬಿಕ್ಕಟ್ಟಿನ ಲೇಪನʼ ಹಚ್ಚಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕೇಂದ್ರಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಎರಡೂ ರಾಜ್ಯಗಳು ಕುಳಿತು ಚರ್ಚೆ ಮಾಡಿಕೊಂಡು ಒಮ್ಮತಕ್ಕೆ ಬರಬೇಕು ಎಂದು ಕೇಂದ್ರ ಸಚಿವರೇ ಹೇಳುವ ಮೂಲಕ, ʼಮೇಕೆದಾಟು ಯೋಜನೆಗೆ ಒಕ್ಕೂಟ‌ ವ್ಯವಸ್ಥೆಯ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅನುಮತಿ ನೀಡುವ ಹೊಣೆಗಾರಿಕೆಯಿಂದ ಕೇಂದ್ರ ಸರಕಾರ ನುಣುಚಿಕೊಳ್ಳುತ್ತಿದೆʼ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದರು.

ಮುಂಗಡ ಪತ್ರದಲ್ಲಿ ಯೋಜನೆಗೆ 1,000 ಕೋಟಿ ರೂ. ಕೊಟ್ಟೆವು ಎಂದು ಬಿಜೆಪಿ ಹಾಗೂ ನಮ್ಮ ಪಾದಯಾತ್ರೆಯಿಂದಲೇ ಹಣ ಘೋಷಿಸಲಾಯಿತು ಎಂದು ಕಾಂಗ್ರೆಸ್‌ ಕುಣಿಯುತ್ತಿವೆ. ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು, ಈಗ ಮೇಕೆದಾಟು ಇಟ್ಟುಕೊಟ್ಟುಕೊಂಡು ʼಚುನಾವಣಾ ಆಟʼ ಶುರು ಮಾಡಿವೆ.

Mekedatu Project: The Use of the Word ‘Controversy’ Right From the Center- HDK

ವಾಸ್ತವ ಏನು ಎಂಬುದನ್ನು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೇಂದ್ರದ ಕಾನೂನು ಸುಳಿಯಲ್ಲಿ ಸಿಕ್ಕಿರುವ ಹಾಗೂ ಕೇಂದ್ರದ ಜಲ ಆಯೋಗ (CWC)ದಲ್ಲಿ ಕೊಳೆಯುತ್ತಿರುವ ಮೇಕೆದಾಟು ಯೋಜನೆಯು ಪಾದಯಾತ್ರೆಯಿಂದ ಬರುವುದಿಲ್ಲ. ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿಯೇ ತಂದುಕೊಳ್ಳಬೇಕು ಎಂದಿದ್ದೆ ಎಂದರು.

ಈಗ ಕೇಂದ್ರ ಸಚಿವರಾದ ಶೇಖಾವತ್‌ ಅವರು; "ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ಕರ್ನಾಟಕ ಉಂಟು, ತಮಿಳುನಾಡು ಉಂಟು. ನೀವು ನೀವೇ ಮಾತನಾಡಿಕೊಳ್ಳಿ" ಎಂದು ಕೈ ಎತ್ತಿಬಿಟ್ಟಿದ್ದಾರೆ. ಹಾಗಾದರೆ, ಯೋಜನೆಗೆ ಒಪ್ಪಿಗೆ ನೀಡುವಲ್ಲಿ ಕೇಂದ್ರ ಸರಕಾರದ ಪಾತ್ರವೇ ಇಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ನಮ್ಮ ಪಾಲಿನ ನೀರನ್ನು ದಕ್ಕಿಸಿಕೊಳ್ಳುವುದು ಮತ್ತು ನಮ್ಮ ಜನರಿಗೆ ಕುಡಿಯುವ ನೀರು ಕೊಡುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡುವುದು ಕರ್ನಾಟಕದ ಹಕ್ಕು. ಆದರೆ, ಕೇಂದ್ರ ಸಚಿವರು ʼನೀವೇ ಬಗೆಹರಿಸಿಕೊಳ್ಳಿʼ ಎಂದು ಹೇಳಿದ ಒಳಮರ್ಮವೇನು? ಕಾವೇರಿ ಬಗ್ಗೆ ಬಿಜೆಪಿ ʼಹೊಸ ವರಸೆʼ ಶುರು ಮಾಡಿತೇ ಎನ್ನುವ ಸಂಶಯ ನನ್ನದು.

ಈ ಬಗ್ಗೆ 1,000 ಕೋಟಿ ಹಣ ಘೋಷಣೆ ಮಾಡಿದೊಡನೆ ಪಾದಯಾತ್ರೆಯಿಂದಲೇ ಆಯಿತು ಎಂದು ʼಹಿಗ್ಗಿ ಹೀರೆಕಾಯಿʼ ಆಗಿದ್ದ ಕಾಂಗ್ರೆಸ್‌ ನಿಲುವೇನು? ಅವರೀಗ ತಮ್ಮ ಮಿತ್ರಪಕ್ಷ ಡಿಎಂಕೆ ಅಧಿಕಾರದಲ್ಲಿರುವ ತಮಿಳುನಾಡು ಸರಕಾರದ ಜತೆ ಮಾತುಕತೆ ನಡೆಸಿ ಎಂದು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುತ್ತಾರಾ? ಎಂದು ಕಿಡಿ ಕಾರಿದ್ದಾರೆ.

ಮೊನ್ನೆಯಷ್ಟೇ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಬೃಹತ್ ಪಾದಯಾತ್ರೆ ನಡೆಸಿತ್ತು. ಇದರ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ನಲ್ಲಿ ಮೇಕೆದಾಟು ಯೋಜನೆ 1000 ಕೋಟಿ ರೂ ಅನುದಾನ ಮೀಸಲಿರಿಸುವ ಮೂಲಕ ಕೈ ಪಡೆಗೆ ತಿರುಗೇಟು ನೀಡಿದ್ದರು. ಈ ಬೆನ್ನಲ್ಲೇ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನೀಡಿರುವ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳು ಮೇಕೆದಾಟು ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದು, ಚುನಾವಣೆಯ ಆಟ ಆರಂಭಿಸಿವೆ ಎಂದು ಕಿಡಿ ಕಾರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+