ಕೊಳದ ಮಠದ ಮೇಲೆ ಭೂ ಕಬಳಿಕೆ ಆರೋಪ

ಗೇಣಿ ಕಾಯ್ದೆಯ ಅಡಿಯಲ್ಲಿ ಸರ್ಕಾರ ಎಂ.ಮುನಿಸ್ವಾಮಿ ಅವರಿಗೆ ಹೊಸೂರು ರಸ್ತೆಯ ಲಾಲ್ ಬಾಗ್ ಬಳಿ ಎರಡು ಎಕರೆ ಜಮೀನನ್ನು ಸರ್ಕಾರ ಮಂಜೂರು ಮಾಡಿದೆ. ಈ ಜಾಗದಲ್ಲಿ ಮುನಿಸ್ವಾಮಿ ಅವರು ನರ್ಸರಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ, ಕೊಳದ ಮಠದ ಶಾಂತವೀರ ಸ್ವಾಮೀಜಿಗಳು, ತಿಮ್ಮೇಗೌಡ ಎಂಬುವವರು ಮುನಿಸ್ವಾಮಿ ಅವರನ್ನು ನರ್ಸರಿ ಬಿಟ್ಟು ತೆರಳುವಂತೆ ಎಚ್ಚರಿಸಿದ್ದಾರೆ.
ಕೊಳದ ಮಠ ಶಾಂತವೀರ ಸ್ವಾಮೀಜಿ ಹಾಗೂ ಲಿಕ್ಕರ್ ದೊರೆ ತಿಮ್ಮೇಗೌಡರ ಬಳಿ ನೂರಾರು ಎಕರೆ ಜಮೀನು ಇದ್ದರೂ, ದಲಿತನೊಬ್ಬನ ಮೇಲೆ ದೌರ್ಜನ್ಯ ಎಸಗಿ ಜಮೀನು ಕಬಳಿಸಲು ಯತ್ನಿಸುತ್ತಿದ್ದಾರೆ ಎಂದು ಪುಟ್ಟಸ್ವಾಮಿ ಆರೋಪಿಸಿದ್ದಾರೆ.
ಕೊಳದ ಮಠ: ಈಗಿನ ಲಾಲ್ ಬಾಗ್ ಅಥವಾ ಅಂದಿನ ಅಣ್ಣೆಪುರ ಕೊಳದ ಮಠ ಸಂಸ್ಥಾನದ ಅಧೀನದ ಭೂಮಿಯಾಗಿತ್ತು. ಕಿದ್ವಾಯಿ ಆಸ್ಪತ್ರೆ, ಡಬ್ಬಲ್ ರೋಡ್ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣ, ಕ್ರಿಶ್ಚಿಯನ್ ಸಂಸ್ಥೆಗಳ ಕಚೇರಿ ಸ್ಥಳಗಳಿಗೂ ಕೊಳದ ಮಠ ಭೂಮಿಯನ್ನು ದಾನ ಮಾಡಿದ ಉದಾಹರಣೆಗಳಿವೆ.
ಜಾತಿ, ಮತ ಪಂಥಗಳ ಬೇಧವಿಲ್ಲದೆ ಭೂಮಿ ದಾನ ಮಾಡುತ್ತಾ ಸಾಮಾಜಿಕ ಸಾಮರಸ್ಯ ಬೆಳೆಸುತ್ತಿರುವ ಕೊಳದ ಮಠದ ವಿರುದ್ಧ ಬಂದಿರುವ ಆರೋಪಗಳನ್ನು ಭಕ್ತರು ಸಾರಾಸಗಟಾಗಿ ವಿರೋಧಿಸಿದ್ದಾರೆ.
ಈ ಹಿಂದೆ ಬಿಡದಿಯ ನಿತ್ಯಾನಂದ ಧ್ಯಾನಪೀಠದ ಅಕ್ರಮ ಚಟುವಟಿಕೆಗಳಿಗೆ ಸಾಕ್ಷಿ ಸಿಕ್ಕ ಮೇಲೂ ಕೆಲ ಸ್ವಾಮೀಜಿಗಳು ಹಿಂದೂ ಧರ್ಮಪ್ರತಿಪಾದಕ, ಸ್ವಾಮಿ ನಿತ್ಯಾನಂದನನ್ನು ಬಂಧಿಸಬೇಡಿ ಎಂದು ಕೂಗು ಎಬ್ಬಿಸಿದ್ದರು.
ಸಮಾಜಕ್ಕೆ ಅವರು ನೀಡಿದ ಕೊಡುಗೆಗಳನ್ನು ಸಹಿಸದ ಕೆಲವರು ಈ ರೀತಿ ಅಪಪ್ರಚಾರ ಮಾಡಿ, ಹಿಂದೂಧರ್ಮ ಪ್ರತಿಪಾದಕರನ್ನು ನಾಶ ಮಾಡಲು ಹುನ್ನಾರ ಮಾಡುತ್ತಿದ್ದಾರೆ ಎಂದು ಹೇಳಿದವರಲ್ಲಿ ಕೊಳದ ಮಠದ ಶಾಂತವೀರ ಸ್ವಾಮೀಜಿಗಳು ಪ್ರಮುಖರು ಎಂಬುದನ್ನು ಇಲ್ಲಿ ಸ್ಮರಿಸಬಹುದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications