ಕೇರಳ ಪ್ರವಾಹ: 1 ಕೋಟಿ ನೆರವು ನೀಡಿದ ನೌಹೀರಾ ಶೇಖ್
ಬೆಂಗಳೂರು, ಆಗಸ್ಟ್ 28: ಕೇರಳ ಪ್ರವಾಹ ಸಂತ್ರಸ್ತರಿಗೆ ಆಲ್ ಇಂಡಿಯಾ ಮಹಿಳಾ ಎಂಪವರ್ ಮೆಂಟ್ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ ಡಾ.ನೌಹೀರಾ ಶೇಖ್ ಅವರು 1ಕೋಟಿ ರೂಪಾಯಿ ನೆರವು ನೀಡಿದ್ದಾರೆ.
ಆಗಸ್ಟ್ ನಲ್ಲಿ ಸುರಿದ ಭಾರಿ ಮಳೆಯಿಂದ ಪ್ರವಾಹ ಸೃಷ್ಟಿಯಾಗಿತ್ತು, ಅಲ್ಲಿನ ಜನರು ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ, ಒಂದು ಕೋಟಿ ರೂಪಾಯಿ ಮೌಲ್ಯದ ಚೆಕ್‌ನ್ನು ಕೇರಳ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ (ಸಿಎಂಡಿಆರ್ ಎಫ್) ರವಾನಿಸಿದ್ದಾರೆ. ಇದಲ್ಲದೇ 100 ಟನ್ ಆಹಾರ ಧಾನ್ಯ ಹಾಗೂ ಮಹಿಳೆಯರು ಮಕ್ಕಳಿಗಾಗಿ ಶೆಲ್ಟರ್ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ.
ಶೀಘ್ರವೇ ಅವರು, ಕೇರಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಇದೇ ವೇಳೆ ಸಂತ್ರಸ್ತರ ಅಳಲನ್ನು ಆಲಿಸಲಿದ್ದಾರೆ. ಡಾ.ನೌಹೀರಾ ಶೇಕ್ ಅವರು ಕಳೆದ ವರ್ಷ ಕಾಶ್ಮೀರದ 'ಉರಿ' ಪ್ರದೇಶದಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳ ಸದಸ್ಯರಿಗೆ ನೆರವಿನ ಹಸ್ತ ನೀಡಿದ್ದು ಮಾಹೆಯಾನ ಪಿಂಚಣಿ ವ್ಯವಸ್ಥೆ ಕಲ್ಪಿಸಿದ್ದರು.

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವ ಸಂಬಂಧ ರಾಜ್ಯ ಹೈಕೋರ್ಟ್ ನಲ್ಲಿ ಹೋರಾಟ ನಡೆಸಿದ್ದಾರೆ. ಕೇರಳದಲ್ಲಿ ಲಕ್ಷಾಂತರ ಮಂದಿ ಮನೆ, ಆಸ್ತಿಪಾಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.












Click it and Unblock the Notifications