ಮುಂದಿನ ವರ್ಷದ ಕೊನೆಗೆ ಏರ್‌ಪೋರ್ಟ್‌ಗೆ ಮೆಟ್ರೋ ಸೇವೆ: ಬಸವರಾಜ ಬೊಮ್ಮಾಯಿ ಭರವಸೆ
ಬೆಂಗಳೂರು, ಡಿ. 29: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೋ ಸೇವೆಗಳು 2023 ರ ಕೊನೆಯಲ್ಲಿ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.
ಕೆ.ಆರ್ ಪುರಂನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ ನಮ್ಮ ಮೆಟ್ರೋ ಯೋಜನೆಯ ವಿಮಾನ ನಿಲ್ದಾಣ ಕಾರಿಡಾರ್ 2023 ರ ಅಂತ್ಯದ ವೇಳೆಗೆ ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಮೆಟ್ರೋ ಮಾರ್ಗದ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿರುವ ಅವರು, "ನಾನು ಈ ಯೋಜನೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳುತ್ತೇವೆ" ಎಂದಿದ್ದಾರೆ.

ಬೆಂಗಳೂರು ಮೆಟ್ರೋದ ವಿವಿಧ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿವೆ ಎಂದು ದೂರಿದ ಕಾಂಗ್ರೆಸ್ ಎಂಎಲ್ ಸಿ.ಕೆ ಗೋವಿಂದರಾಜ್ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ. ಹೈದರಾಬಾದ್‌ನಲ್ಲಿನ ಯೋಜನೆಯನ್ನು ಹೋಲಿಸಿದ ಗೋವಿಂದರಾಜ್, ನಗರದಲ್ಲಿ ಮೆಟ್ರೋ ಕಾಮಗಾರಿ ಬೆಂಗಳೂರಿನಲ್ಲಿದ್ದಕ್ಕಿಂತ ತಡವಾಗಿ ಪ್ರಾರಂಭವಾಗಿದ್ದರೂ, ಅದು ತ್ವರಿತ ಗತಿಯಲ್ಲಿ ಪೂರ್ಣಗೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿನ ಮೆಟ್ರೋ ಯೋಜನೆಯನ್ನು ನಗರದ ಹೃದಯ ಭಾಗದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಹೆಚ್ಚಿನ ಸಂಖ್ಯೆಯ ವಸತಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಹೊಂದಿರುವ ಪ್ರದೇಶದಲ್ಲಿ ಜನಸಂಖ್ಯೆಯು ದಟ್ಟವಾಗಿದೆ. ಇದರಿಂದಾಗಿ, ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಹಲವಾರು ಸವಾಲುಗಳಿವೆ" ಎಂದು ಹೇಳಿದ್ದಾರೆ.
ಜೊತೆಗೆ ಅಂಡರ್‌ಗ್ರೌಂಡ್‌ನಲ್ಲಿ ಮಾರ್ಗಗಳನ್ನು ಹಾಕುವಿಕೆ, ಯೋಜನೆಗಾಗಿ ಭೂ ಸ್ವಾಧೀನ ಮತ್ತು ಮೆಟ್ರೋ ಮಾರ್ಗದಿಂದ ಮರಗಳನ್ನು ತೆಗೆಯುವುದು, ಸ್ಥಳಾಂತರಿಸುವ ಕ್ರಮಗಳು ಅಡೆತಡೆಗಳಾಗಿವೆ ಎಂದು ಹೇಳಿದ್ದಾರೆ.
ಮೆಟ್ರೋ ಯೋಜನೆಯ ಎರಡನೇ ಹಂತವು 2025 ರ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದ್ದು, 2024 ರ ಅಂತ್ಯದ ವೇಳೆಗೆ ಯೋಜನೆಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಬೈಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್‌ವರೆಗೆ ರೀಚ್-1 ವಿಸ್ತರಣೆಯನ್ನು ಮಾರ್ಚ್ 2023ಕ್ಕೆ, ರೀಚ್-2ನ್ನು ಮೇ 2023ಕ್ಕೆ ಕೆಂಗೇರಿಯಿಂದ ಚಲ್ಲಘಟ್ಟಕ್ಕೆ, ರೀಚ್-3ನ್ನು ನಾಗಸಂದ್ರದಿಂದ ಮಾದವಾರಕ್ಕೆ 2023ರ ಆಗಸ್ಟ್ ವೇಳೆಗೆ ನಡೆಯಲಿದೆ.
ಇನ್ನು, ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದ ರೀಚ್-5ರ ವಿಸ್ತರಣೆ ಸೆಪ್ಟೆಂಬರ್ 2023 ರೊಳಗೆ ಮತ್ತು ಮಾರ್ಚ್ 2025 ರೊಳಗೆ ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ರೀಚ್ -6 ನೇ ಹಂತದ ವಿಸ್ತರಣೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಹಂತ-II(A) ಮತ್ತು ಹಂತ-II(B) ಜೂನ್ 2026 ರ ವೇಳೆಗೆ ತೆರೆದಿರುತ್ತದೆ ಎಂದು ಮಾಹಿತಿ ನೀಡಲಾಗಿದೆ.












Click it and Unblock the Notifications