Bengaluru Metro: ಮೆಟ್ರೋ ದರ ಏರಿಕೆ ನಿರ್ಧಾರ ಮಾಡೋರು ಇವರೇ ನೋಡಿ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆಗೆ ತಡೆ ಬಿದ್ದಿದೆ. ಆದರೆ ಜನಪ್ರತಿನಿಧಿಗಳ ನಡುವಿನ ವಾಕ್ಸಮರಕ್ಕೆ, ಸಮರ್ಥನೆಯ ನಡೆ, ಆಕ್ರೋಶ ವ್ಯಕ್ತಪಡಿಸುವುದು ನಿಂತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಡಿಸಿಎಂ ಡಿಕೆ ಶಿವಕುಮಾರ್ ಬೆನ್ನಲ್ಲೆ ಇದೀಗ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಕ್ರಿಯಿಸಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಸಮಿತಿ ರಚನೆ, ದರ ಏರಿಕೆ ಯಾರು ಮಾಡುತ್ತಾರೆಂದು ವಿವರಿಸಿದ್ದಾರೆ.
ಬೆಂಗಳೂರು ಮೆಟ್ರೋ (BMRCL) ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾವನೆಯು ಕೇಂದ್ರ ಸರ್ಕಾರದ ಅಧೀನಕ್ಕೆ ಬರುತ್ತದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂದು ಅವರು ಟ್ವಿಟ್ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ದರ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರವು 'ದರ ನಿಗದಿ ಸಮಿತಿ'ಯನ್ನು (Fare Fixation Committee) ರಚಿಸುತ್ತದೆ. ಈ ಸಮಿತಿಯು ನೀಡುವ ವರದಿಯ ಆಧಾರದ ಮೇಲೆ ದರಗಳು ನಿರ್ಧಾರವಾಗುತ್ತವೆ.

ಪ್ರತಿಪಕ್ಷಗಳು ಮೆಟ್ರೋ ದರ ಏರಿಕೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರವನ್ನು ಟೀಕಿಸುತ್ತಿರುವುದು ಸರಿಯಲ್ಲ. ಈ ಪ್ರಕ್ರಿಯೆಯು ಸಂಪೂರ್ಣವಾಗಿ ತಾಂತ್ರಿಕ ಮತ್ತು ಕೇಂದ್ರದ ನಿಯಮಾವಳಿಗಳಿಗೆ ಒಳಪಟ್ಟಿರುತ್ತದೆ. ಕೆಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಮೆಟ್ರೋ ಯೋಜನೆ ಆರಂಭ, ಉಸ್ತುವಾರಿ, ದರ ಏರಿಕೆ ಬರುತ್ತದೆ. ದೇಶದ ಎಲ್ಲ ಮೆಟ್ರೋಗಳಿಗೆ ಕೇಂದ್ರದ ನಗರಾಭಿವೃದ್ಧಿ ಸಚಿವಾಲಯದ ಪ್ರಧಾನ ಕಾರ್ಯದರ್ಶಿಗಳು ಮೆಟ್ರೋ ಮಂಡಳಿಯ ಅಧ್ಯಕ್ಷರಾಗಿರತ್ತಾರೆ.
ಮೆಟ್ರೋ ಮಂಡಳಿ ದರ ನಿಗದಿ ಸಮಿತಿ ರಚಿಸುತ್ತದೆ. ಈ ಸಮಿತಿಯ ಮುಖ್ಯಸ್ಥರ ಶಿಫಾರಸು, ಖರ್ಚು ವೆಚ್ಚಗಳನ್ನು ನೋಡಿ ಅವರು ದರ ಏರಿಕೆ ನಿರ್ಧಾರ ಮಾಡುತ್ತಾರೆ. ಈ ಸಮಿತಿಗೆ ಒಬ್ಬರು ರಾಜ್ಯದಿಂದ ಮತ್ತು ಇಬ್ಬರು ಕೇಂದ್ರ ವ್ಯಾಪ್ತಿಯ ಸದಸ್ಯರನ್ನು ಕೇಂದ್ರ ಸರ್ಕಾರವೇ ನೇಮಿಸುತ್ತದೆ. ಬೆಂಗಳೂರು ಮೆಟ್ರೋ ದರ ಏರಿಕೆಯನ್ನು ಇವರೇ ತೀರ್ಮಾನಿಸಿದ್ದಾರೆ. ಕೇಂದ್ರದ ನಗರಾಭಿವೃದ್ಧಿ ಇಲಾಖೆಯವರೇ ಅಂತಿಮ ನಿರ್ಧಾರ ಕೈಗೊಂಡಿರುತ್ತಾರೆ ಎಂದು ತಿಳಿಸಿದರು.
ದರ ಏರಿಕೆ ಸಮಿತಿ ಸದಸ್ಯರು ಹೆಸರು
ಬಿಎಂಆರ್‌ಸಿಎಲ್ ಮೆಟ್ರೋ ದರ ನಿಗದಿಗಾಗಿ ರಚಿಸಲಾಗಿದ್ದ ತ್ರಿಸದಸ್ಯ ಸಮಿತಿಯ ಸದಸ್ಯರಾಗಿ ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು ನ್ಯಾಯಮೂರ್ತಿ ಆರ್. ಥಾರಣಿ ಅವರು ದರ ಏರಿಕೆ ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳು ಸತೀಂದರ್ ಪಾಲ್ ಸಿಂಗ್ ಹಾಗೂ ಕರ್ನಾಟಕ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಡಾ. ಇ.ವಿ. ರಮಣರೆಡ್ಡಿ (Retired IAS officer) ಅವರು ಸಮೀತಿಯಲ್ಲಿದ್ದಾರೆ. ಅವರು ನಿರ್ಧಾರ ಮಾಡಿದ ಬಳಿಕ ದರ ಏರಿಕೆ ಆಗುತ್ತದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರ ಇಲ್ಲ. ಸುಖಾಸುಮ್ಮನೆ ನಮ್ಮ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ವಾರ್ಷಿಕ ಶೇ.5ರಷ್ಟು ದರ ಏರಿಕೆ ಮಾಡಬೇಕೆಂಬ ಸಮಿತಿ ನಿರ್ಧಾರದಂತೆ ಇದೇ ಫೆ.09ರಿಂದ ಬಿಎಂಆರ್‌ಸಿಎಲ್ ಟಿಕೆಟ್ ಬೆಲೆ ಹೆಚ್ಚಳ ಜಾರಿಗೆ ಮುಂದಾಗಿತ್ತು. ತೀವ್ರ ಆಕ್ಷೇಪಣೆ, ವಿರೋಧ ಕೇಳಿ ಬಂದ ಬಳಿಕ ತಾತ್ಕಾಲಿಕವಾಗಿ ನಿರ್ಧಾರದಿಂದ ಹಿಂದೆ ಸರಿದಿದೆ. ಬಿಜೆಪಿ ನಾಯಕರು ಶಾಶ್ವತವಾಗಿ ಈ ನಿರ್ಧಾರ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications