ಕಾಸು ಕೊಟ್ಟರೆ ಮೆಟ್ರೋ ನಿಲ್ದಾಣಕ್ಕೆ ಹೆಸರು "ವಿಡಿಯೋಗೆ" ಕಿರಣ್ ಮಜುಂದಾರ್ ಶಾ ಗರಂ

Kiran Mazumdar Shaw: ದುಡ್ಡು ಕೊಟ್ಟರೆ ಬೆಂಗಳೂರಿನ ಮೆಟ್ರೋ ನಿಲ್ದಾಣಗಳಿಗೆ ಕಂಪನಿ ಅಥವಾ ವ್ಯಕ್ತಿಗಳ ಹೆಸರು ನಾಮಕರಣ ಮಾಡುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಮೆಟ್ರೋ ಅಭಿವೃದ್ಧಿ ಕೆಲಸಗಳು ವೇಗವಾಗಿ ನಡೆಯುತ್ತಿವೆ. ಇದರೊಂದಿಗೆ ಹೊಸ ವಿವಾದವೊಂದು ಶುರುವಾಗಿದೆ.

ಬೆಂಗಳೂರಿನ ಮೆಟ್ರೋ ನಿಲ್ದಾಣಗಳಿಗೆ ಹೆಸರು ಇರಿಸುವ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ನಾಯಕಿ ಹಾಗೂ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಅವರು ನಡುವೆ ವಾಕ್ಸಮರ ನಡೆದಿದೆ. ಇದರ ನಡುವೆ ಬೆಂಗಳೂರಿನ ಮೆಟ್ರೋ ನಿಲ್ದಾಣಗಳಿಗೆ ದುಡ್ಡು ಕೊಟ್ಟರೆ ಹೆಸರು ನಾಮಕರಣ ಮಾಡಬೇಕೇ ಎನ್ನುವ ಬಗ್ಗೆ ಭಾರೀ ಚರ್ಚೆ ನಡೆದಿದೆ.

Metro Naming Row In Bengaluru Kiran Mazumdar Shaw s Viral Take

ಈ ವಿಷಯವಾಗಿ ಸೋಷಿಯಲ್ ಮೀಡಿಯಾ ಎಕ್ಸ್‌ ಖಾತೆಯಲ್ಲಿ ವಿಡಿಯೋ ಟ್ವೀಟ್ ಮಾಡಿರುವ ಕವಿತಾ ರೆಡ್ಡಿ ಅವರು, ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಯಾರು ಮೆಟ್ರೋ ಅಭಿವೃದ್ಧಿಗೆ ಅಥವಾ ಮೆಟ್ರೋ ನಿಲ್ದಾಣಕ್ಕೆ ಹಣ ಕೊಡುತ್ತಾರೋ ಅವರ ಹೆಸರಿನಲ್ಲಿ ಮೆಟ್ರೋ ನಿಲ್ದಾಣದ ನಾಮಕರಣ ಮಾಡುವುದಾಗಿ ಅವರು ಹೇಳಿದ್ದಾರೆ. ಶಾಸಕ ಮುನಿರತ್ನ ಅವರು ದುಡ್ಡು ಕೊಟ್ಟರೆ ಅವರ ಹೆಸರಿನಲ್ಲೂ ಮೆಟ್ರೋ ನಿಲ್ದಾಣ ಮಾಡುವುದಾಗಿ ಹೇಳಿದ್ದಾರೆ.

ಏನು ವಿಪರ್ಯಾಸ ಎಂದರೆ ಬೆಂಗಳೂರು ನಮ್ಮ ಮೆಟ್ರೋ ಎನ್ನುವುದು ಬೆಂಗಳೂರಿನ ಇತಿಹಾಸಕ್ಕೆ ಸಂಬಂಧಿಸಿದ ವಿಚಾರವಾಗಿದೆ. ಬೆಂಗಳೂರಿನ ಪ್ರಮುಖ ಇನ್ಫ್ರಾಸ್ಟ್ರಕ್ಚರ್ ಗೆ ಸಂಬಂಧಿಸಿದ್ದಾಗಿದೆ. ಬೆಂಗಳೂರಿನ ವಿಮಾನ ನಿಲ್ದಾಣ, ಬಸ್ ನಿಲ್ದಾಣ ಅಥವಾ ಯಾವುದೇ ಪ್ರಮುಖ ಪ್ರದೇಶಕ್ಕೆ ಮಹನೀಯರ ಹೆಸರನ್ನು ನಾಮಕರಣ ಮಾಡುವುದು ರೂಢಿ.

ರಾಜ್ಯ ಮತ್ತು ನಗರಕ್ಕೆ ಏನು ಕೊಡುಗೆ ಮತ್ತು ಹೆಸರು ತಂದುಕೊಟ್ಟಿದ್ದಾರೆ ಅವರ ಹೆಸರನ್ನು ಇರಿಸುವುದು ಸಾಮಾನ್ಯ. ಈ ಸಂಪ್ರದಾಯ ಮತ್ತು ಪದ್ಧತಿಯನ್ನು ಅನುಸರಿಸಿಕೊಂಡು ಬರಲಾಗಿದೆ. ಆದರೆ ಯಾವ ಕಾರಣಕ್ಕೆ ಬೆಂಗಳೂರಿನ ಮೆಟ್ರೋ ನಿಲ್ದಾಣಕ್ಕೆ ಕೆಲವೊಂದು ಕಂಪನಿಗಳ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ. ಆ ಕಂಪನಿಗಳ ಇತಿಹಾಸ ಏನಿದೆ ಎಂದು ನಾವು ಪ್ರಶ್ನೆ ಮಾಡಬೇಕಾಗುತ್ತದೆ.

ನಮ್ಮ ಮೆಟ್ರೋಗೆ ಬಯೋಕಾನ್ ಸಂಸ್ಥೆ 120 ಕೋಟಿ ಕೊಡುತ್ತೇವೆ ಎಂದು ಹೇಳಿದ್ದು, ಬಯೋಕಾನ್ ಹೆಸರನ್ನು ನಮ್ಮ ಮೆಟ್ರೋ ನಿಲ್ದಾಣಕ್ಕೆ ನಾಮಕರಣ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಕಿರಣ್ ಮಜುಂದಾರ್ ಶಾ ಅವರ ಹೆಸರನ್ನು ಇರಿಸಿದ್ದರೆ ತೊಂದರೆ ಇಲ್ಲ. ಕಿರಣ್ ಮಜುಂದಾರ್ ಶಾ ಅವರು ಬೆಂಗಳೂರಿಗೆ ಸಾಕಷ್ಟು ಕೊಡುಗೆಗಳನ್ನು ಕೊಟ್ಟಿದ್ದಾರೆ. ಅದೇ ರೀತಿ ಬೆಂಗಳೂರು ಹಾಗೂ ಕರ್ನಾಟಕಕ್ಕೆ ಕೊಡುಗೆ ನೀಡಿರುವವರ ಹೆಸರನ್ನು ನಮ್ಮ ಮೆಟ್ರೋಗೆ ಇರಿಸಿ. ಆದರೆ ಕಂಪನಿಗಳ ಹೆಸರನ್ನು ನಮ್ಮ ಮೆಟ್ರೋ ನಿಲ್ದಾಣಕ್ಕೆ ಇರಿಸುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಿರಣ್ ಮಜುಂದಾರ್ ಶಾ ಅವರು, ನಮ್ಮ ನಗರದ ಅಭಿವೃದ್ಧಿಗೆ ನಾವು ಕೊಡುಗೆ ನೀಡುವುದಿಲ್ಲ ಎಂದು ನೀವು ಹೇಳುತ್ತಿದ್ದೀರಾ? ಕಂಪನಿಗಳು ಬೆಂಗಳೂರು ಮತ್ತು ಕರ್ನಾಟಕದ ಇತಿಹಾಸದ ಅವಿಭಾಜ್ಯ ಅಂಗ. ಪ್ರಧಾನಿ ಮೋದಿ ಕೂಡ ಪಿಪಿಪಿಯ ಬಿಎಂಆರ್‌ಸಿಎಲ್ (ಸಾರ್ವಜನಿಕ ಸಹಭಾಗಿತ್ವ) ಮಾದರಿಯನ್ನು ಮೆಚ್ಚಿಕೊಂಡರು. ನಿಮ್ಮಿಂದ ಇಂತಹ ಅಜ್ಞಾನದ ಕಾಮೆಂಟ್‌ಗಳನ್ನು ನಿರೀಕ್ಷಿಸಿರಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+