Namma Metro: ಪಿಲ್ಲರ್ ಕುಸಿತ: 20ಲಕ್ಷ ಪರಿಹಾರ ಘೋಷಿಸಿದ ಅಂಜುಮ್ ಪರ್ವೇಜ್
ಬೆಂಗಳೂರು, ಜನವರಿ 10: ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿನ ಮಟ್ರೋ ಕಾಮಗಾರಿ ವೇಳೆ ಮಂಗಳವಾರ ನಡೆದ ಪಿಲ್ಲರ್ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ 20ಲಕ್ಷ ರೂ. ಪರಿಹಾರ ನೀಡುವುದಾಗಿ ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಘೋಷಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲಿಸಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರಿಗೆ ಉತ್ತರಿಸಿದರು. ಮೃತರಿಗೆ 20ಲಕ್ಷ ರೂ. ಹಣವನ್ನು ಪರಿಹಾರವಾಗಿ ನೀಡಲಾಗುವುದು. ಜೊತೆಗೆ ಆಸ್ಪತ್ರೆಯಲ್ಲಿರುವ ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸಲಾಗುವುದು ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ತಿಳಿಸಿದ್ದಾರೆ. ದುರದೃಷ್ಟವಶಾತ್ ಈ ನಡೆದಿದೆ ಎಂದು ಅವರು ಸಂತಾಪ ವ್ಯಕ್ತಪಡಿಸಿದರು.

ಮಂಗಳವಾರ ಬೆಳಗ್ಗೆ ಹೆಣ್ಣೂರು ರಸ್ತೆಯ ಎಚ್‌ಬಿಆರ್ ಬಡಾವಣೆ ಸಮೀಪ ಬಿಎಂಆರ್‌ಸಿಎಲ್ ಎರಡನೇ ಹಂತ- ಬಿ ಕಾಮಗಾರಿ ಸ್ಥಳದಲ್ಲಿ ಕಾಂಕ್ರೀಟ್ ಹಾಕಲು ಸಿದ್ದವಾಗಿದ್ದ ಕಬ್ಬಿಣದ ಸರಳುಗಳ ಪಿಲ್ಲರ್ ಬಿದ್ದಿದೆ. ಬಿಎಂಆರ್‌ಸಿಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಧಾರುಣ ಘಟನೆ ನಡೆದಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಈ ಘಟನೆಯಲ್ಲಿ ಗದಗ ಮೂಲದ ತಾಯಿ ಯಶಸ್ವಿನಿ ಮತ್ತು ಮಗು ವಿಹಾನ್ ಮೃತಪಟ್ಟಿದ್ದಾರೆ. ತಂದೆ ತೀವ್ರವಾಗಿ ಗಾಯಗೊಂಡಿದ್ದಾರೆ.

ಮೆಟ್ರೋ ಪಿಲ್ಲರ್ ಅವಘಡಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಆದಷ್ಟು ಶೀಘ್ರದಲ್ಲೇ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು ಎಂದು ಅವರು ಭವರಸೆ ನೀಡಿದ್ದಾರೆ. ಆದರೆ ಎಷ್ಟು ಹಣವನ್ನು ಸರ್ಕಾರ ಮೃತರ ಕುಟುಂಬಸ್ಥರಿಗೆ ನೀಡಲಿದೆ ಎಂಬುದು ಇನ್ನೂ ತಿಳಿದು ಬಂದಿಲ್ಲ.












Click it and Unblock the Notifications