ಬೆಂಗಳೂರಿನಲ್ಲಿ ವಿಶ್ವಕಪ್ ಪಂದ್ಯಾವಳಿಗೆ ಮೆಟ್ರೋ ವಿಶೇಷ ಟಿಕೆಟ್ ವ್ಯವಸ್ಥೆ
ಬೆಂಗಳೂರು, ಅಕ್ಟೋಬರ್ 18: ಬೆಂಗಳೂರಿನಲ್ಲಿ ವಿಶ್ವಕಪ್ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮೆಟ್ರೋ ವಿಶೇಷ ಟಿಕೆಟ್ ವ್ಯವಸ್ಥೆಯಲ್ಲಿ ಮಾಡುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
For the convenience of the travelling public in Namma Metro during the ensuing World Cup matches held at Bengaluru, Ticketing arrangements is made to avoid the crowd at metro stations . pic.twitter.com/H28qbPp42a
— ನಮ್ಮ ಮೆಟ್ರೋ (@cpronammametro) October 18, 2023
ಬೆಂಗಳೂರಿನಲ್ಲಿ ವರ್ಲ್ಡ್ ಕಪ್ ಪಂದ್ಯಾವಳಿಗಳು ಅಕ್ಟೋಬರ್ 20, 26 ಮತ್ತು ನವೆಂಬರ್ 4, 9 ಮತ್ತು ನವೆಂಬರ್ 12 2023ರಂದು ನಡೆಯಲಿದೆ. ಈ ನಿಟ್ಟಿನಲ್ಲಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಈ ದಿನಗಳಲ್ಲಿ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಲಭ್ಯವಿರುತ್ತದೆ. ಈ ಕಾಗದದ ಟಿಕೆಟ್ ಟಿಕೆಟ್‌ಗಳು ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಸಂಜೆ 4 ಗಂಟೆ ನಂತರ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಕಾಗದದ ಟಿಕೆಟ್ ಬೆಲೆ 50 ರೂಪಾಯಿ ಆಗಿರುತ್ತದೆ, ಈ ಸಾಮಾನ್ಯ ದರದ ಶೇಕಡ 5ರಷ್ಟು ರಿಯಾಯಿತಿ ಕ್ಯೂಆರ್ ಕೋಡ್ ಟಿಕೆಟ್‌ಗಳನ್ನು ಖರೀದಿಸಿದರೆ ಪಂದ್ಯಗಳು ನಡೆಯುವ ದಿನಗಳಲ್ಲಿ ಆ ದಿನದಂದು ಪ್ರಯಾಣಿಸಲು ಮಾನ್ಯವಾಗಿರುತ್ತದೆ. ಕ್ಯೂಆರ್ ಟಿಕೆಟ್‌ಗಳನ್ನು ವಾಟ್ಸಾಪ್ ಅಥವಾ ನಮ್ಮ ಮೆಟ್ರೋ ಆಪ್ ಇಲ್ಲವೇ ಪೆಟಿಎಂ ಮೂಲಕ ಕ್ರಿಕೆಟ್ ಪಂದ್ಯಾವಳಿಗಳು ಪ್ರಾರಂಭವಾಗುವ ಮೊದಲು ಮುಂಗಡವಾಗಿ ಖರೀದಿಸಿದರೆ ಯಾವುದೇ ಅಡಚಣೆ ಇಲ್ಲದೆ ಹಿಂದುರುಗುವ ಪ್ರಯಾಣಕ್ಕೆ ಬಳಸಬಹುದು.
ಎಂದಿನಂತೆ ಸ್ಮಾರ್ಟ್ ಕಾರ್ಡ್ ಮತ್ತು ಎನ್‌ಸಿಎಂಸಿ ಕಾರ್ಡ್‌ಗಳನ್ನು ಉಪಯೋಗಿಸಬಹುದು. ಪ್ರಯಾಣಿಕರು ಈ ಅವಕಾಶವನ್ನು ಉಪಯೋಗಿಸಿಕೊಳ್ಳುವ ಮೂಲಕ ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆಯ ಮೆಟ್ರೋ ಟಿಕೆಟ್ ಕೌಂಟರ್‌ಗಳಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.
ನಮ್ಮ ಮೆಟ್ರೋ ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದ ನಂತರ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಕಳೆದ ಬುಧವಾರ ಒಂದೇ ದಿನ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ 7 ಲಕ್ಷ ದಾಟಿತ್ತು. ಅಕ್ಟೋಬರ್ 17ರಂದು ನೇರಳ ಮಾರ್ಗದಲ್ಲಿ 3,33,152 ಮೆಟ್ರೋ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಹಸಿರು ಮಾರ್ಗದಲ್ಲಿ 2,41,297 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಕೆಂಪೇಗೌಡ ಮಾರ್ಗ ಬದಲಾವಣೆಯಲ್ಲಿ 1,38,091 ಮಂದಿ ಪ್ರಯಾಣ ಬೆಳೆಸಿದ್ದಾರೆ, ಒಟ್ಟು ಒಂದೇ ದಿನದಲ್ಲಿ 7,12,540 ಜನರು ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ.












Click it and Unblock the Notifications