ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಮೊಹಮ್ಮದ್ ನಲಪಾಡ್‌

ಬೆಂಗಳೂರು, ಜೂನ್ 01 : ಮೊಹಮ್ಮದ್ ನಲಪಾಡ್‌ ಜಾಮೀನು ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮೇ 30ರಂದು ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್‌ಗೆ ಆರೋಪಿ. 2018ರ ಫೆಬ್ರವರಿಯಿಂದ ಮೊಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜಾಮೀನು ಪಡೆಯಲು ನಡೆಸಿದ ಪ್ರಯತ್ನ ಫಲ ಕೊಟ್ಟಿಲ್ಲ.

ಶುಕ್ರವಾರ ಮೊಹಮ್ಮದ್ ನಲಪಾಡ್‌ ಪರ ವಕೀಲರು ಕರ್ನಾಟಕ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಜಾಮೀನು ಸಿಗಲಿದೆಯೇ? ಕಾದು ನೋಡಬೇಕು.

Mohammed Nalapad

ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಫೆ.17ರಂದು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಪ್ರಮುಖ ಆರೋಪಿಯಾಗಿದ್ದು, ಫೆಬ್ರವರಿಯಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿದ್ದು, 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಪ್ರಕರಣದ ಆರೋಪಿಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+